ಕೋಲಾರ | ನೈಸ್ ಕಂಪನಿ ಕಾಮಗಾರಿ ನಡೆಸದಂತೆ ಪ್ರಾಂತ ರೈತ ಸಂಘ ಒತ್ತಾಯ

Date:

Advertisements

ರಾಜ್ಯ ಸರ್ಕಾರದ ವತಿಯಿಂದ ಬಿಎಂಐಸಿ ನೈಸ್ ಕಂಪನಿಗೆ ಯಾವುದೇ ರಸ್ತೆ ನಿರ್ಮಾಣ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಿ ಹಾಗೂ ಅಕ್ರಮ-ಕಾನೂನು ಬಾಹಿರ ರಸ್ತೆ ಕಾಮಗಾರಿ ವಿರುದ್ಧ ಪ್ರತಿಭಟಿಸುವ ರೈತರಿಗೆ ಹಾಗೂ ರೈತ ಮುಖಂಡರಿಗೆ ರಕ್ಷಣೆ ನೀಡಲು ಆಗ್ರಹಿಸಿ ಕೋಲಾರ ನಗರದ ಉಪ ತಹಶೀಲ್ದಾರ್ ಅವರಿಗೆ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಕುರಿತು ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, “ಸುಮಾರು 1997ರಲ್ಲಿ ಕರ್ನಾಟಕ ಸರ್ಕಾರ ನೈಸ್ ಕಂಪನಿ ಜೊತೆ ಕ್ರಿಯಾ ಒಪ್ಪಂದದಂತೆ 111 ಕಿ.ಮೀ ಬೆಂಗಳೂರಿನಿಂದ ಮೈಸೂರಿನವರೆಗೆ ವೇಗದ ಹೆದ್ದಾರಿ ರಸ್ತೆ, ಬೆಂಗಳೂರಿನಲ್ಲಿ 41 ಕಿ.ಮೀ. ಪೆರಿಪೆರಲ್ ರಸ್ತೆ, 9.8 ಕಿ.ಮೀ. ಲಿಂಕ್ ರಸ್ತೆ ಹಾಗೂ ನಿಯೋಜಿತ ಸ್ಥಳಗಳಲ್ಲಿ ಐದು ಟೌನ್ ಶಿಪ್ ಗಳನ್ನು ನಿರ್ಮಾಣ ಮಾಡಬೇಕಾಗಿತ್ತು. ಆದರೆ ಈ ಒಪ್ಪಂದ ಆಗಿ 28 ವರ್ಷಗಳೇ ಕಳೆದಿದ್ದರೂ ಈ ಯೋಜನೆ ಕಾರ್ಯಗತವಾಗಿಲ್ಲ. ಆದರೂ ಈ ಯೋಜನೆಗೆ ಗುರುತಿಸಲಾಗಿದ್ದ ರೈತರ ಭೂ ಸ್ವಾಧೀನವನ್ನು ರದ್ದುಪಡಿಸದೇ ಹಾಗೇಯೆ ಮುಂದುವರೆಸಿಕೊಂಡು ಬರುತ್ತಿರುವುದು ಅತ್ಯಂತ ಯಾತನೆಯನ್ನು ಮತ್ತು ಅನ್ಯಾಯವನ್ನು ಈ ಯೋಜನಾ ವ್ಯಾಪ್ತಿಯ ರೈತರು ಅನುಭವಿಸುವಂತೆ ಮಾಡಿದ್ದಾರೆ” ಎಂದು‌ ಆರೋಪಿಸಿದರು.

“ನೈಸ್ ಕಂಪನಿಯ ಪಾಲುದಾರಿಕೆ ಕುರಿತು ರಾಜ್ಯ ಸರ್ಕಾರ ಸಲಹಾ ಸಮಿತಿ ನೇಮಿಸಿರುವ ಹಿನ್ನಲೆಯಲ್ಲಿ, ಕಳಂಕಿತ ನೈಸ್ ಕಂಪನಿಗೆ ಯಾವುದೇ ರೀತಿಯ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಬೇಕು ಬಿಎಂಐಸಿ ಯೋಜನೆ ಹಾಗೂ ನೈಸ್ ಕಂಪನಿ ಪಾಲುದಾರಿಕೆಯನ್ನು ರದ್ದುಗೊಳಿಸಬೇಕು ರೈತರು ಹಾಗೂ ರೈತ ಮುಖಂಡರ ಮೇಲೆ ನಿಂದನೆ, ಬೆದರಿಕೆ ಮುಂತಾದ ನೈಸ್ ಕಂಪನಿ ದೌರ್ಜನ್ಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ನೈಸ್ ಆಕ್ರಮಗಳ ವಿರುದ್ಧದ ಹೋರಾಟಗಾರ ರೈತ ನಾಯಕ ಎನ್. ವೆಂಕಟಚಲಯ್ಯರವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಒತ್ತಾಯಿಸಿದರು

“ನೈಸ್ ಕಂಪನಿಯ ಭೂ ಸ್ವಾಧೀನ ಹಾಗೂ ರಸ್ತೆ ನಿರ್ಮಾಣದ ಹಗರಣಗಳನ್ನು ತನಿಖೆಗೆ ಒಳಪಡಿಸಿ ಶಿಕ್ಷಿಸಬೇಕು.ರೈತರ ಒಪ್ಪಿಗೆ ಇಲ್ಲದ, ರೈತರ ಗಮನಕ್ಕೆ ಬಾರದಂತೆ ಭೂ ಸ್ವಾಧೀನ ಮಾಡಿರುವ ಎಲ್ಲಾ ಪ್ರಕರಣಗಳನ್ನು ರದ್ದುಪಡಿಸಬೇಕು. ನೈಸ್ ಅಕ್ರಮ ಕುರಿತ ಸದನ ಸಮಿತಿ ಮತ್ತು ಸಂಪುಟ ಉಪಸಮಿತಿಗಳ ಶಿಪಾರಸ್ಸುಗಳನ್ನು ಜಾರಿಗೊಳಿಸಬೇಕು ಕೆಐಎಡಿಬಿ ಹಾಗೂ ನೈಸ್ ಕಂಪನಿಯ ಅಕ್ರಮ ಮೈತ್ರಿಯಿಂದ ಹಗಲು ದರೋಡೆ ಮಾಡಿರುವ ಎಲ್ಲಾ ಹೆಚ್ಚುವರಿ ಭೂಮಿಯನ್ನು ವಾಪಸು ಪಡೆದುಕೊಳ್ಳಬೇಕು ಭೂ ಸ್ವಾಧೀನ ಪ್ರಕಟಣೆ ಮತ್ತು ಕೋರ್ಟ್ ತೀರ್ಪುಗಳ ಹೆಸರಿನಲ್ಲಿ ರೈತರ ಮೇಲಿನ ನೈಸ್ ಕಂಪನಿಯ ದಬ್ಬಾಳಿಕೆ-ದೌರ್ಜನ್ಯ ನಿಲ್ಲಿಸಬೇಕು ಟೋಲ್ ಸಂಗ್ರಹಿಸುತ್ತಿರುವ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ಒಪ್ಪಂದದಂತೆ ಹೆಚ್ಚಿನ ಪರಿಹಾರ ಹಾಗೂ ನಿವೇಶನ ಒದಗಿಸಬೇಕು ಬಿಎಂಐಸಿ ಯೋಜನೆ ನೆಪದಲ್ಲಿ ನೈಸ್ ಸಂಸ್ಥೆ ನಡೆಸುತ್ತಿರುವ ರಿಯಲ್ ಎಸ್ಟೇಟ್ ವ್ಯವಹಾರವನ್ನು ನಿರ್ಬಂಧಿಸಬೇಕು. ನೈಸ್ ಕಂಪನಿಗೆ ಗುತ್ತಿಗೆಗೆ ನೀಡಿರುವ ಎಲ್ಲಾ ಸರ್ಕಾರಿ ಭೂಮಿಗಳನ್ನು ವಾಪಸ್ಸು ಪಡೆದು, ಮನೆ ನಿವೇಶನಕ್ಕಾಗಿ ಅರ್ಜಿ ಹಾಕಿಕೊಂಡಿರುವ ಎಲ್ಲಾ ವಸತಿ ರಹಿತರಿಗೆ ಮನೆ ಒದಗಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ತಾಲ್ಲೂಕು ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮುಖಂಡರಾದ ವಿ.ವೆಂಕಟೇಶಪ್ಪ, ಅಪ್ಪಯ್ಯಣ್ಣ, ನಾರಾಯಣಸ್ವಾಮಿ, ಮಂಜುನಾಥ್, ರಾಮಾಂಜಿನಪ್ಪ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X