ಕೋಲಾರ | ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಜವಾಬ್ದಾರಿ ನಮ್ಮದು: ಶಾಸಕ ಕೊತ್ತೂರು ಜಿ. ಮಂಜುನಾಥ್ ಭರವಸೆ

Date:

ಆರ್ಥಿಕ ಮುಗ್ಗಟ್ಟಿನಿಂದಾಗಿ ಕ್ಷೇತ್ರದ ಯಾವುದೇ ಬಡ ವಿದ್ಯಾರ್ಥಿ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು. ಕಾಲೇಜು ಶುಲ್ಕ ಕಟ್ಟಲು ಶಕ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಸಂಪೂರ್ಣ ಆರ್ಥಿಕ ನೆರವು ನೀಡಲು ನಾವು ಸಿದ್ಧರಿದ್ದೇವೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಭರವಸೆ ನೀಡಿದರು.

- Advertisement -

ನಗರದ ಆರಹಳ್ಳಿ ರಸ್ತೆಯ ಮದರಸಾ ಹಬೀಬಾ ನಿಸ್ವಾನ್ ಚಾರಿಟಬಲ್‌ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಮದರಸಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಡಿದದ ಅವರು ಹಿಂದೆ ಬೆಂಗಳೂರು ಉತ್ತರ ವಿವಿಯಲ್ಲಿ ಯೂನಿವರ್ಸಿಟಿಯಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮುಸ್ಲಿಂ ಸಮುದಾಯದ ಕೇವಲ ಮೂರು ಜನ ವಿದ್ಯಾರ್ಥಿಗಳಿದ್ದರು. ಈ ಹಿನ್ನೆಲೆಯಲ್ಲಿ ಮೌಲ್ವಿ ಕಲೀಮುಲ್ಲಾ ಹಾಗೂ ಪ್ರಮುಖರೊಂದಿಗೆ ಚರ್ಚಿಸಿ, ಸಮುದಾಯದ ಸುಶಿಕ್ಷಿತ ಯುವಕ ಅರ್ಬಾಜ್ ಅವರನ್ನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿದ ನಂತರ ಇಂದು ವಿವಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಸಂಖ್ಯೆ 84 ಕ್ಕೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ವರ್ಷಕ್ಕೆ ಕನಿಷ್ಠ 100 ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣಕ್ಕೆ ಸೇರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಶಿಕ್ಷಣ ಮತ್ತು ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಕ್ಷೇತ್ರದಲ್ಲಿ ಶೈಕ್ಷಣಿಕ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ರಹಮತ್ ನಗರದ ಉರ್ದು ಶಾಲೆಯನ್ನು 10ನೇ ತರಗತಿಯವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ ಜೊತೆಗೆ, ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಗಿದೆ. ಪ್ರಸ್ತುತ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಹಾಗೂ ಟೈಲರಿಂಗ್ ತರಬೇತಿ ಕೇಂದ್ರಗಳ ವಿಸ್ತರಣೆಗೆ ಜಾಗದ ಕೊರತೆಯಿದ್ದರೆ, ಸರ್ಕಾರಿ ಜಾಗ ಕೊಡಿಸಲು ಹಾಗೂ ಅಗತ್ಯವಿರುವ ಎಲ್ಲಾ ರೀತಿಯ ಆರ್ಥಿಕ ಮತ್ತು ರಾಜಕೀಯ ನೆರವು ನೀಡಲು ಸಿದ್ಧವಿರುವುದಾಗಿ ಅವರು ಆಶ್ವಾಸನೆ ನೀಡಿದರು.

ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ
ಮುಸ್ಲಿಂ ಸಮುದಾಯದ ಯುವಕರು ಮತ್ತು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಹಾಗೂ ತರಬೇತಿ ಕೇಂದ್ರಗಳನ್ನು ತೆರೆಯಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಪ್ರಸ್ತುತ ಸಂಸ್ಥೆಯಲ್ಲಿ ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳಿಗೆ ಟೈಲರಿಂಗ್ ತರಬೇತಿ ಹಾಗೂ ಯುವಕರಿಗೆ ಕಂಪ್ಯೂಟರ್ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ಇಲ್ಲಿ ತರಬೇತಿ ಮುಗಿಸುವ ಹೆಣ್ಣುಮಕ್ಕಳಿಗೆ ಕೇವಲ ಪ್ರಮಾಣಪತ್ರ ನೀಡುವುದಷ್ಟೇ ಅಲ್ಲದೆ, ಅವರು ಸ್ವಂತ ಕಾಲಿನ ಮೇಲೆ ನಿಲ್ಲಲು ಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು. ಗಾರ್ಮೆಂಟ್ಸ್ ಅಥವಾ ಟೈಲರಿಂಗ್ ಕ್ಷೇತ್ರದಲ್ಲಿ ಅವರಿಗೆ ತಕ್ಷಣವೇ ಕೆಲಸ ಸಿಗುವಂತೆ ಜವಾಬ್ದಾರಿ ವಹಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ರೀತಿ ಕಂಪ್ಯೂಟರ್ ಮತ್ತು ಐಟಿಐ ತರಬೇತಿ ಪಡೆಯುತ್ತಿರುವ ಯುವಕರಿಗೂ ಸಹ ಉತ್ತಮ ಕಂಪನಿಗಳಲ್ಲಿ ಉದ್ಯೋಗಾವಕಾಶ ಒದಗಿಸಲು ನಾವು ಬದ್ಧರಾಗಿದ್ದೇವೆ. ಮುಸ್ಲಿಂ ಸಮಾಜದ ಯುವಕರು ಶಿಕ್ಷಣ ಮತ್ತು ಕೌಶಲ್ಯಗಳನ್ನು ಕಲಿತು ಆರ್ಥಿಕವಾಗಿ ಸಬಲರಾಗಬೇಕು ಎನ್ನುವುದೇ ನಮ್ಮ ಆಶಯ. ಸಂಸ್ಥೆಯ ಮುಂದಿನ ಎಲ್ಲಾ ಬೆಳವಣಿಗೆಗಳಿಗೂ ಶಾಸಕರಾದ ಕೊತ್ತೂರು ಮಂಜುನಾಥ್ ಅವರೊಂದಿಗೆ ಸೇರಿ ನಾವು ಸದಾ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಆಸ್ವಾಸನೆ ನೀಡಿದರು.

ಇದೇ ಸಂದರ್ಭದಲ್ಲಿ ಮದರಸ ಅಭಿವೃದ್ದಿಗೆ ಶಾಸಕ ಕೊತ್ತೂರು ಮಂಜುನಾಥ್ ಅವರು ವೈಯುಕ್ತಿವಾಗಿ ಐದು ಲಕ್ಷ ಹಣದ ನೆರವು ನೀಡುವುದಾಗಿ ಘೋಷಣೆ ಮಾಡಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಇರುವ ನೂನ್ಯತೃಗಳನ್ನು ಸರಿಪಡಿಸಿ : ಎದ್ದೇಳು ಕರ್ನಾಟಕ ಆಗ್ರಹ

ಕಾರ್ಯಕ್ರಮದಲ್ಲಿ ಮೌಲ್ವಿ ಅತಿಖು ರಹಮಾನ್ ರಷದಿ,ಇಜಾರ್ಯಿಲ್ ರಷದಿ ಸಿಂಡಿಕೇಟ್ ಸದಸ್ಯ ಅರ್ಬಾಜ್ ಪಾಷ, ನರಸಾಪುರ ಸೊಸೈಟಿಯ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಆಫ್ಸರ್,
ನಗರಸಭೆ ಮಾಜಿ ಸದಸ್ಯರುಗಳಾದ ಏಜಾಜ್, ಶಫೀ ರಫೀ, ಹಿದಾಯತ್ ಕಾಮರ್, ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪು ಯಾರ್ಡ್ ಬೀಚ್‌ನಲ್ಲಿ 5.710 ಕೆ.ಜಿ. ಗಾಂಜಾ ವಶಕ್ಕೆ: ಇಬ್ಬರ ಬಂಧನ

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ...

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...