ಕೋಲಾರ | ಹಾದಿ ಬೀದಿಯಲ್ಲಿ ಮಾತಾಡುವವರು ಲೇಔಟ್‌ ಅಭಿವೃದ್ಧಿ ಕಾಮಗಾರಿ ನೋಡಿ ಮಾತಾಡಲಿ: ಕುಡಾ ಅಧ್ಯಕ್ಷ ಹನೀಫ್

Date:

ಹಾದಿ ಬೀದಿಗಳಲ್ಲಿ ಮಾತನಾಡುವವರು ಲೇಔಟ್‌ನ ಅಭಿವೃದ್ಧಿ ಕಾಮಗಾರಿ ನೋಡಿ ಮಾತನಾಡಲಿ. ಕುಡಾ ಲೇಔಟ್‌ನಲ್ಲಿ ನಲವತ್ತು ವರ್ಷಗಳಲ್ಲಿ ಆಗದ ಅಭಿವೃದ್ಧಿ ಕೆಲಸಗಳನ್ನು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾದ ಮೇಲೆ ನಾನು ಮಾಡಿದ್ದೇನೆ ಎಂದು ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್ ತಿಳಿಸಿದರು.

- Advertisement -

ಅವರ ಕಚೇರಿಯಲ್ಲಿ ಭೇಟಿ ಮಾಡಿದ್ದ ಮಾಧ್ಯಮದವರೊಂದಿಗೆ ಬಡಾವಣೆ ವೀಕ್ಷಣೆ ಮಾಡಿದ ನಂತರ ಮಾತನಾಡಿದ ಅವರು, “ಹಾದಿ ಬೀದಿಗಳಲ್ಲಿ ಮಾತನಾಡುವವರು ಎಚ್ಚರಿಕೆಯಿಂದ ಮಾತನಾಡಬೇಕು. ಪ್ರಾಧಿಕಾರದ ಲೇಔಟ್ ಆದ ದೇವರಾಜ ಅರಸು ಬಡಾವಣೆಯಲ್ಲಿ ಆಗಿರುವ ಮತ್ತು ಆಗುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಖುದ್ದಾಗಿ ನೋಡಿ ಮಾತನಾಡಲಿ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಾನು ಅಧಿಕಾರ ವಹಿಸಿಕೊಂಡು 10 ತಿಂಗಳಾಗಿದ್ದು, ಈ ಅವಧಿಯಲ್ಲಿ ಪ್ರಸ್ತುತ 13 ಕೋಟಿ ರೂ.ಗೂ ಹೆಚ್ಚಿನ ವೆಚ್ಚದಲ್ಲಿ ಬಡಾವಣೆಯ ಎಲ್ಲ ರಸ್ತೆಗಳ ಅಭಿವೃದ್ಧಿ ಹಾಗೂ ನೀರಿನ ವ್ಯವಸ್ಥೆ ಮತ್ತು ಯುಜಿಡಿ, ಲಿಕೇಜ್ ರಿಪೇರಿ, ದಾರಿ ದೀಪಗಳ ಅಳವಡಿಕೆ ಮಾಡುತ್ತಿದ್ದು, ಶೇ.80ರಷ್ಟು ಕೆಲಸ ಪೂರ್ಣಗೊಳಿಸಲಾಗಿದೆ” ಎಂದು ವಿವರಿಸಿದರು.

“ಇದೇ ಅಲ್ಲದೆ ಕೋಡಿಕಣ್ಣೂರು ಕೆರೆ ಅಭಿವೃದ್ಧಿಗೆ 4 ಕೋಟಿ ಮೀಸಲು ಇಟ್ಟಿದ್ದು, ಡಿಪಿಆರ್ ಆಗಿದ್ದು, ಮುಂದಿನ ತಿಂಗಳು ಟೆಂಡರ್ ಕರೆದು ಕೆಲಸ ಪ್ರಾರಂಭಿಸಲಾಗುವುದು. ಬಡಾವಣೆಯಲ್ಲಿ 339 ಸೈಟುಗಳು ಮಾರಾಟವಾಗದೆ ಉಳಿದಿದ್ದು, ಅವುಗಳನ್ನು ಹಂತ ಹಂತವಾಗಿ ಮಾರಾಟ ಮಾಡಿದ ನಂತರ ಅಮಾನಿ ಕರೆ ಅಚ್ಚುಕಟ್ಟಿನಲ್ಲಿ 100 ಎಕರೆ ರೈತರ ಜಮೀನಿನಲ್ಲಿ ಶೇ 50:50ರ ಅನುಪಾತದಲ್ಲಿ ನೂತನ ಬಡಾವಣೆ ನಿರ್ಮಾಣಕ್ಕೆ ಮಾತುಕತೆ ಮಾಡಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ? ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

“ಪ್ರಾಧಿಕಾರದ ಕೆಲಸಗಳನ್ನು ನಿರ್ವಹಿಸಲು 14 ಮಂದಿ ಸಿಬ್ಬಂದಿಯ ಅವಶ್ಯಕತೆ ಇದ್ದು, ಪ್ರಸ್ತುತ ಕೇವಲ ಇಬ್ಬರು ಸಿಬ್ಬಂದಿಗಳಿದ್ದಾರೆ. ಸಿಬ್ಬಂದಿಯ ಕೊರತೆಯಿಂದ ಅಕ್ರಮ ಬಡಾವಣೆಗಳ ಬಗ್ಗೆ ಕ್ರಮ ಜರುಗಿಸಲು ಆಗುತ್ತಿಲ್ಲ. ಪ್ರಸ್ತುತ ಕೋಲಾರ ನಗರ 5 ಕಿ.ಮೀಗಳಿಗೆ ಸೀಮಿತವಾಗಿದ್ದು, ಅದನ್ನು 12 ಕಿ.ಮೀಗಳಿಗೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಾಸ್ತಾವನೆ ಸಲ್ಲಿಸಲಾಗಿದೆ. ಕೋಲಾರ ನಗರ ಅಭಿವೃದ್ಧಿಯು ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಇನ್ನು ಎರಡ್ಮೂರು ತಿಂಗಳಲ್ಲಿ ಮುಂಜೂರಾತಿ ದೊರೆಯಲಿದೆ” ಎಂದು ವಿವರಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...