ಕೋಲಾರದ ವೇಮಗಲ್ ಪಟ್ಟಣ ಪಂಚಾಯ್ತಿಯ ಚುನಾವಣಾ ಪ್ರಚಾರದಲ್ಲಿ ಶಾಸಕ ಕೊತ್ತೂರ್ ಮಂಜುನಾಥ್ ಸಕ್ರಿಯವಾಗಿದ್ದಾರೆ. ಕಾಂಗ್ರೆಸ್ ಪರ ಮತ ಹಾಕುವಂತೆ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.
ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಜನತೆಗೆ ನೀಡಿದ್ದ ಭರವಸೆಗಳನ್ನೆಲ್ಲ ಈಡೇರಿಸಿದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಎಲ್ಲ ಗ್ಯಾರಂಟಿ ಯೋಜನೆಗಳು ಜನಪ್ರಿಯವಾಗಿದ್ದು, ಈ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕಾಗಿದೆ. ಈಗಾಗಲೇ ವೇಮಗಲ್ ಪಟ್ಟಣ ಪಂಚಾಯತಿಯಾಗಿದ್ದು ಜೊತೆಗೆ ಯೋಜನಾ ಪ್ರಾಧಿಕಾರವು ಆಗಿದೆ. ಕೈಗಾರಿಕೆಗಳು ಸ್ಥಾಪನೆಯಾಗಿವೆ. ಈ ಭಾಗದ ಸಮಸ್ಯೆಗಳನ್ನು ಕಾಂಗ್ರೆಸ್ ಆಡಳಿತವು ಪಟ್ಟಣ ಪಂಚಾಯತಿಗೆ ಬಂದರೆ ನಿವಾರಿಸಲಿದ್ದಾರೆ. ಆದ್ದರಿಂದ ಎಲ್ಲ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನಪರ ಆಡಳಿತ ನೀಡಿ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು ಕಾಂಗ್ರೆಸ್ ಸರ್ಕಾರ ಬಡವರ ಪರ, ಅಭಿವೃದ್ಧಿ ಪರ ಇದೆ ಎಂಬುದನ್ನು ಸಾಬೀತು ಮಾಡಿದೆ ಎಂದು ತಿಳಿಸಿದರು.
ಎಂಎಲ್‌ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, “ಗ್ಯಾರಂಟಿ ಯೋಜನೆಗಳಿಂದ ಬಡವರು, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಜನರಿಗೆ ನೇರವಾಗಿ ತಲುಪುವ ಗ್ಯಾರಂಟಿ ಯೋಜನೆಗಳನ್ನು ಈಗ ಬೇರೆ ರಾಜ್ಯಗಳಲ್ಲಿ ಜಾರಿ ಮಾಡಿವೆ. ನಿರೀಕ್ಷೆಗೂ ಮೀರಿ ಗ್ಯಾರಂಟಿ ಯೋಜನೆಗಳು ಕರ್ನಾಟಕದಲ್ಲಿ ಬೆಳೆದು ಹೊರಗೂ ವಿಸ್ತರಿಸಿವೆ. ಇದು ಗ್ಯಾರಂಟಿ ಯೋಜನೆಗಳಿಗಿರುವ ಶಕ್ತಿ” ಎಂದರು.
ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, “ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಹಾದಿಯಾಗಿ ಅಭಿವೃದ್ಧಿಗೆ ಈ ಭಾಗದ ಜನಪ್ರತಿನಿಧಿಗಳು ಕೈ ಜೋಡಿಸಿದ್ದಾರೆ ಕಾಂಗ್ರೆಸ್ ಬೆಂಬಲಿಸಬೇಕಾಗಿದೆ ಚುನಾವಣೆಯಲ್ಲಿ ಜನರು ಮನಸ್ಸು ಮಾಡಿ ಬದಲಾವಣೆ ತಂದಾಗ ಮಾತ್ರ ಗ್ರಾಮಗಳು ವಾರ್ಡ್ ಗಳು ಅಭಿವೃದ್ಧಿಯಾಗುತ್ತದೆ. ಅಭ್ಯರ್ಥಿಗಳಾಗಲಿ ಮುಖಂಡರುಗಳಾಗಲಿ ಒಂದೇ ವಾರ್ಡ್ ಗೆ ಸೀಮಿತವಾಗದೆ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯ ಪ್ರತಿ ವಾರ್ಡ್ ನಲ್ಲಿ ಮತ ಕೇಳುವ ಕೆಲಸ ಮಾಡಬೇಕು ಎಲ್ಲರಿಗೂ ಎಲ್ಲಾ ಕಡೆ ಪರಿಚಯಸ್ತರು ಇರುತ್ತಾರೆ ಕಾಂಗ್ರೆಸ್ ಪಕ್ಷಕ್ಕೆ ಮತ ಕೇಳಿ ಅಧಿಕಾರ ಬರುವ ಕೆಲಸ ಮಾಡಬೇಕು” ಎಂದರು.
ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಮುಖಂಡರಾದ ಉದಯಶಂಕರ್, ಚಿಕ್ಕಣ್ಣ, ಮುನಿಕೃಷ್ಣಪ್ಪ, ರಾಜಣ್ಣ, ಡೈರಿ ಅಧ್ಯಕ್ಷ ವಿ. ಎಂ. ಶ್ರೀನಿವಾಸ್, ನಾಗರಾಜ್, ವೆಂಕಟೇಶ್, ರಮೇಶ್, ಸೀತಾರಾಮ್, ರವಿಕುಮಾರ್, ಅಭ್ಯರ್ಥಿಗಳಾದ ವನಿತಾ ಮಹೇಶ್, ಶಶಿಕಲಾ ನಾಗೇಶ್, ಕೆ. ಆರ್.ಕುಮಾರ್, ರವಿಚಂದ್ರ, ಮುಂತಾದವರು ಉಪಸ್ಥಿತರಿದ್ದರು.