ಕೋಲಾರ | ವಸ್ತುನಿಷ್ಠವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದೆವು; ಅನಗತ್ಯ ವಿವಾದ ಉಂಟು ಮಾಡಿದರು: ಬರಗೂರು

Date:

ಪಠ್ಯ ಪುಸ್ತಕಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಪಠ್ಯ ಪುಸ್ತಕಗಳು ಪಕ್ಷಗಳ ಪುಸ್ತಕಗಳಾಗಬಾರದು. ನಾವು ವಸ್ತುನಿಷ್ಠವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದೆವು. ಆದರೆ, ಬಳಿಕ ಅನಗತ್ಯ ವಿವಾದ ಉಂಟು ಮಾಡಲಾಯಿತು ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಮಂಗಳವಾರ, ಕೋಲಾರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಿಕ್ಷಣ ಇಲಾಖೆ ಆಯೋಜಿಸಿದ್ದ ಕನ್ನಡ ಬೋಧಕರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. “ಪಠ್ಯವು ಯಾವುದೇ ಒಂದು ಪಕ್ಷದ ಸಿದ್ದಾಂತಗಳಿಗೆ ಅನುಗುಣವಾಗಿರಬಾರದು. ಪಠ್ಯವು ಕಾಂಗ್ರೆಸ್ಸೀಕರಣ ಅಥವಾ ಕೇಸರೀಕರಣ ಅಥವಾ ಕಮ್ಯುನಿಸ್ಟೀಕರಣ ಆಗಬಾರದು. ಅದು ಶಿಕ್ಷಣ ಪಠ್ಯವಾಗಿರಬೇಕು” ಎಂದು ಹೇಳಿದರು.

“ಚುನಾವಣೆಗೂ ಮುಂಚೆ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಕಾಂಗ್ರೆಸ್‌ ಸರ್ಕಾರ ಜಾರಿಗೆ ತರುತ್ತಿದೆ. ಅದು ಸ್ವಾಗತಾರ್ಹ. ಆದರೆ, ಈ ಗ್ಯಾರಂಟಿಗಳು ಶಿಕ್ಷಣ ಕ್ಷೇತ್ರಕ್ಕೆ ಯಾಕಿಲ್ಲ. ಶಿಕ್ಷಣವನ್ನೂ ಗ್ಯಾರಂಟಿಗಳ ಪಟ್ಟಿಗೆ ಸೇರಿಸಬೇಕು” ಎಂದರು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಸಿವು ಮುಕ್ತ ಸಮಾಜ ನಿರ್ಮಾಣ ಎಷ್ಟು ಮುಖ್ಯವೋ, ಅನಕ್ಷರತೆ ಮುಕ್ತ ಸಮಾಜದ ನಿರ್ಮಾಣವೂ ಅಷ್ಟೇ ಮುಖ್ಯ‌. ಹಾಗಾಗಿ, ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಆದ್ಯತಾ ಕ್ಷೇತ್ರ‌ವನ್ನಾಗಿ ಘೋಷಿಸಬೇಕು” ಎಂದು ಆಗ್ರಹಿಸಿದರು.

“ಶಿಕ್ಷಣ ಕ್ಷೆತ್ರದ ಸಮಸ್ಯೆಗಳನ್ನು ಪರಿಹರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸಬೇಕು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು. ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆ ಶಾಲೆಗಳನ್ನು ಮಕ್ಕಳು ಹುಡುಕಿಕೊಂಡು ಬರುವಂತಾಗಬೇಕು” ಎಂದು ಅವರು ಆಶಯ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...