ಕೋಲಾರ | ಮಾಲೂರು ವರ್ಗಾ ಅಟ್ಯಾಚ್ಮೆಂಟ್ ಕಾರ್ಖಾನೆ ಮುಚ್ಚದಂತೆ ಕಾರ್ಮಿಕರಿಂದ ಪ್ರತಿಭಟನೆ

Date:

Advertisements

ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ವರ್ಗಾ ಅಟ್ಯಾಚ್ಮೆಂಟ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕರು, ಸಿಐಟಿಯು ಮುಖಂಡರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಮಾಲೂರು ಕೈಗಾರಿಕಾ ಪ್ರದೇಶದ ವರ್ಗಾ ಅಟ್ಯಾಚ್ಮೆಂಟ್ ಕಾರ್ಖಾನೆಯಿಂದ ಬೈಕ್ ರ್ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಮಿಕರು ಕಾರ್ಖಾನೆ ಆಡಳಿತ ಮಂಡಳಿಯ ವಿರುದ್ದ ಘೋಷಣೆ ಕೂಗಿ ಮಾಲೀಕರ ಧೋರಣೆಯನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ರಾಜ್ಯ ಉಪಾಧ್ಯಕ್ಷ ಹೆಚ್ ಎನ್ ಗೋಪಾಲಗೌಡ ಮಾತನಾಡಿ, “ಏಕಾಏಕಿ ಮಾಲೀಕ ವರ್ಗವು ಕೈಗಾರಿಕೆ ಮುಚ್ಚುವುದಾಗಿ ನೋಟೀಸ್ ನೀಡಿದ್ದು, ಸುಮಾರು 20 ವರ್ಷದಿಂದ ಕಾರ್ಖಾನೆಯಲ್ಲಿ ದುಡಿಯುತ್ತಿದ್ದ ಸುಮಾರು 81 ಖಾಯಂ ಕಾರ್ಮಿಕರನ್ನು ಕೆಲಸದಿಂದ ಹೊರಹಾಕಲು ಮುಂದಾಗಿದೆ. ಇದು ಕಾರ್ಮಿಕ ವಿರೋಧಿ ನೀತಿಯಾಗಿದ್ದು, ಕೂಡಲೇ ಕಾರ್ಖಾನೆಯನ್ನು ಮುಚ್ಚುವ ಆದೇಶವನ್ನು ವಾಪಸು ಪಡೆದು ಕಾರ್ಮಿಕರ ಹಿತ ಕಾಪಾಡಬೇಕು” ಎಂದು ಒತ್ತಾಯಿಸಿದರು.

Advertisements

“ಈ ಕೈಗಾರಿಕೆಯಲ್ಲಿ ಬುಲ್ಡೋಜರ್‌ಗೆ ಬೇಕಾಗುವ ಬಿಡಿ ಭಾಗಗಳನ್ನು ತಯಾರಿಸಿ ವಿದೇಶಕ್ಕೆ ಕಳಸಲಾಗುತ್ತದೆ. ಇದರಿಂದಾಗಿ ಲಾಭದಾಯಕವಾಗಿ ಕಂಪನಿ ನಡೆಯುತ್ತಿದ್ದರೂ ಕಾರ್ಮಿಕರಿಗೆ ಯಾವುದೇ ರೀತಿ ಸೌಲಭ್ಯ ನೀಡಿಲ್ಲ. ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಮಾಲೀಕರು ಮಾತ್ರ ಕಾರ್ಮಿಕರ ಹಿತಕಾಪಾಡಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಸಭೆಗಳಾಗಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಏಕಾಏಕಿ ಕಾರ್ಖಾನೆಯನ್ನು ಮುಚ್ಚಲು ನಿರ್ಧರಿಸಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ಕೋಲಾರ | ಮನೆಯಲ್ಲೇ ಕೆಮಿಕಲ್ ಮಿಶ್ರಿತ ಹಾಲು ತಯಾರಿ; ದೂರು ದಾಖಲು

ಅದೇ ರೀತಿ ʼವರ್ಗ ಕಂಪನಿʼಯಿಂದ ʼವೀರ್ಯಾ ಕಂಪನಿʼಗೆ ಹೆಸರು ಬದಲಾವಣೆ ಮಾಡಲು ಹೊರಟಿದ್ದರು. ಇದರಿಂದಾಗಿ ಕಂಪನಿಯ ಹೆಸರಿನಿ ಗೊಂದಲದಿಂದಾಗಿ ಕಾರ್ಮಿಕರಿಗೆ ತೊಂದರೆಯಾಗಿದೆ. ಕೂಡಲೇ ಜಿಲ್ಲಾಧಿಕಾರಿ ಮಾಲೀಕ ವರ್ಗವನ್ನು ಕರೆಸಿ ವರ್ಗ ಕಾರ್ಖಾನೆಯಲ್ಲಿ ದುಡಿಯುತ್ತಿರುವ ಖಾಯಂ ಕಾರ್ಮಿಕರಿಗೆ ಕೈಗಾರಿಕೆಯಲ್ಲಿ ಕೆಲಸ ಮುಂದುವರೆಸುವಂತೆ ಕ್ರಮ ವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾರ್ಖಾನೆಯ ಪದಾಧಿಕಾರಿಗಳಾದ ಪ್ರಭಾಕರ್, ಶ್ರೀಧರ, ಅಂಜನಪ್ಪ, ಅಶ್ವಥ್, ಸುರೇಶ್ ಕುಮಾರ್, ಹರೀಶ್, ಸಿಐಟಿಯು ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಪಿ.ಆರ್ ಸೂರ್ಯನಾರಾಯಣ, ವಿಜಯಕೃಷ್ಣ, ಹೆಚ್.ಬಿ ಕೃಷ್ಣಪ್ಪ, ಅಶೋಕ್, ಭೀಮರಾಜ್, ಚಲಪತಿ, ವೀರಭದ್ರ, ಶಿವಾನಂದ್, ವೆಂಕಟಪ್ಪ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X