ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಶ್ರೀನಿವಾಸ್ ರಾಥೋಡ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೋಲಾರ ತಾಲೂಕು ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀನಿವಾಸ್ ರಾಥೋಡ್ ಮಾತನಾಡಿ ಬಲಿಷ್ಠವಾಗಿ ಯುವ ಕಾಂಗ್ರೆಸ್ ಮೂಲಕ ಸಂಘಟನೆ ಮಾಡಬೇಕು, ರಾಜ್ಯದ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ದುರಾಡಳಿತ ನೀತಿಗಳ ವಿರುದ್ಧವಾಗಿ ನಿರಂತರ ಹೋರಾಟ ಮಾಡಬೇಕು ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ಮಾತನಾಡಿ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದು, ತಾಲೂಕು ಅಧ್ಯಕ್ಷ ಸುಹೈಲ್ ರವರು ಹೆಚ್ಚಾಗಿ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ಕೆಲಸ ಮಾಡಬೇಕು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಕೇಂದ್ರ ಸರ್ಕಾರ ಯುವಕರ ಪರವಾಗಿ ಯಾವುದೇ ರೀತಿಯ ಕೆಲಸ ಮಾಡುತ್ತಿಲ್ಲಾ, ಯುವಕರಿಗೆ ಅನ್ಯಾಯ ಮಾಡಿದೆ ಅವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡಬೇಕು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಪದಾಧಿಕಾರಿಗಳಿಗೆ ತಿಳಿಸಿದರು.
ಇದನ್ನು ಓದಿದ್ದೀರಾ..? ಕೋಲಾರ | ಜಮೀರ್ ನಸೀರ್ ಗೆ ಉನ್ನತ ರಾಜಕೀಯ ಸ್ಥಾನಮಾನಕ್ಕೆ ಒತ್ತಾಯಿಸಿ ಮುಸ್ಲಿಂರಿಂದ ಪ್ರತಿಭಟನೆ
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಹೈಲ್, ನಗರ ಅಧ್ಯಕ್ಷ ಅರ್ಬಾಜ್, ಗ್ರಾಮಾಂತರ ಅಧ್ಯಕ್ಷ ಬರ್ಕತ್, ಹರೀಶ್, ಲತೀಫ್, ಮುಸ್ತಫಾ, ಶ್ರೀಧರ್, ಯಾಸೀನ್ ಮುಂತಾದವರು ಉಪಸ್ಥಿತರಿದ್ದರು.





