ಕೋಲಾರ |ಮಾದಕ ವಸ್ತುಗಳ ಹಾವಳಿ ತಡೆಗೆ ಜೀರೋ ಟಾಲರೆನ್ಸ್: ಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಸೂಚನೆ

Date:

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳು ಜಂಟಿಯಾಗಿ ಕಾರ್ಯಪ್ರವೃತ್ತರಾಗಬೇಕು. ಮಾದಕ ದ್ರವ್ಯ ವ್ಯಸನದ ವಿರುದ್ಧ ‘ಜೀರೋ ಟಾಲರೆನ್ಸ್’ ನೀತಿಯನ್ನು ಅನುಸರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ತರಕಾರಿ ಮತ್ತು ಕೃಷಿ ಉತ್ಪನ್ನಗಳ ನೆಪದಲ್ಲಿ ಲಾರಿ ಹಾಗೂ ಇತರೆ ವಾಹನಗಳಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಿದ್ದು, ಇಂತಹ ವಾಹನಗಳ ಮೇಲೆ ತೀವ್ರ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದರು.

ಸಾರಿಗೆದಾರರು, ಚಾಲಕರು ಮತ್ತು ವರ್ತಕರಿಗೆ ಮಾದಕ ವಸ್ತುಗಳ ಸಾಗಾಟದ ಗಂಭೀರತೆಯ ಬಗ್ಗೆ ಅರಿವು ಮೂಡಿಸಬೇಕು. ಉದ್ದೇಶಪೂರ್ವಕವಾಗಿ ಅಥವಾ ಅರಿವಿಲ್ಲದೆ ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದಲ್ಲಿ ಪದೇ ಪದೇ ಭಾಗಿಯಾಗುವ ಕಳ್ಳಸಾಗಣೆದಾರರ ಮೇಲೆ ‘ಗುಂಡಾ ಕಾಯ್ದೆ’ಯಡಿ ಪ್ರಕರಣಗಳನ್ನು ದಾಖಲಿಸಲು ಮುಂದಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೈಗಾರಿಕಾ ಪ್ರದೇಶಗಳಲ್ಲಿ ಮತ್ತು ಕಾರ್ಮಿಕರ ವಸತಿ ಪ್ರದೇಶಗಳಲ್ಲಿ ಮಾದಕ ದ್ರವ್ಯಗಳ ಹಾವಳಿ ಪತ್ತೆಹಚ್ಚಲು ಸಮೀಕ್ಷೆ ನಡೆಸಬೇಕು. ಕಾರ್ಮಿಕ ಇಲಾಖೆ ಹಾಗೂ ಕೈಗಾರಿಕಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಮಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಮಾದಕ ವಸ್ತುಗಳಿಗೆ ದಾಸರಾದವರಿಗೆ ಚಿಕಿತ್ಸೆ ಮತ್ತು ಪುನರ್ವಸತಿ ಕಲ್ಪಿಸಲು ಜಿಲ್ಲೆಯಲ್ಲಿರುವ ಡ್ರಗ್ ಡಿ-ಅಡಿಕ್ಷನ್ ಸೆಂಟರ್‌ಗಳ ಸಹಕಾರ ಪಡೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ಇದನ್ನು ಓದಿದ್ದೀರಾ..? ಕೋಲಾರ |ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರೋದು ಗೊತ್ತು, ನಮ್ಮನ್ನು ದೂರ ಮಾಡಿದ್ರೆ ಅಧಿಕಾರದಿಂದ ಇಳಿಸೋದು ಗೊತ್ತು

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ. ಕೆ. ರಮೇಶ್, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಷು ರಜಪೂತ್, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾಪ್ರಸಾದ್ ದಿಲೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್, ಕಾರ್ಮಿಕ ಇಲಾಖೆಯ ವರಲಕ್ಷ್ಮಿ, ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...