ಕೋಲಾರ | ಮತಗಳ್ಳತನದ ಮೂಲಕ ಅಧಿಕಾರ ಹಿಡಿಯಲು ಬಿಜೆಪಿ ಯತ್ನ: ಅನಿಲ್ ಕುಮಾರ್

Date:

ಕೋಲಾರ: ಚುನಾವಣಾ ಆಯೋಗವನ್ನು ಬಳಸಿಕೊಂಡು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟು, ಮತಗಳ್ಳತನದ ಮೂಲಕ ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಆರೋಪಿಸಿದರು.

- Advertisement -

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ‘ವೋಟ್ ಬಚಾವೊ–ದೇಶ್ ಬಚಾವೊ’ ಅಭಿಯಾನದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮತದಾನದ ಹಕ್ಕು ಹಾಗೂ ಸಂವಿಧಾನದ ರಕ್ಷಣೆ ಕಾಂಗ್ರೆಸ್‌ನ ಪ್ರಮುಖ ಜವಾಬ್ದಾರಿಯಾಗಿದೆ ಬಿಜೆಪಿ ರಾಮಮಂದಿರ, ರಾಮನ ಹೆಸರು ಹಾಗೂ ಪುಲ್ವಾಮಾ ದಾಳಿಯಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆಗಳಲ್ಲಿ ರಾಜಕೀಯ ಲಾಭ ಪಡೆದಿದೆ. ಮುಂದಿನ ಚುನಾವಣೆಯಲ್ಲಿ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ಮೂಲಕ ಅರ್ಹ ಮತದಾರರನ್ನು ಹೊರಗಿಡುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಸಂವಿಧಾನ ಪ್ರತಿಯೊಬ್ಬ ಅರ್ಹ ಪ್ರಜೆಗೂ ಮತದಾನದ ಹಕ್ಕು ನೀಡಿದೆ. ಮತದಾರರ ಪಟ್ಟಿಯಲ್ಲಿ ನೈಜ ಮತದಾರರ ಹೆಸರುಗಳು ಕೈಬೀಳದಂತೆ ಕಾರ್ಯಕರ್ತರು ಜಾಗೃತಿ ವಹಿಸಬೇಕು. ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯ ಬಗ್ಗೆಯೂ ಆಕ್ಷೇಪಗಳಿದ್ದು, ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಅರ್ಹ ಮತದಾರರು ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಐಕ್ಯತೆ, ಸಮಗ್ರತೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಲು ಸಾಧ್ಯ ಎಂದರು.

Advertisements

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ ಭದ್ರ ಬುನಾದಿಯಿದ್ದು, ಪಕ್ಷದ ಸಂದೇಶಗಳನ್ನು ತಳಮಟ್ಟಕ್ಕೆ ತಲುಪಿಸಿ ಸಂಘಟನೆ ಬಲಪಡಿಸಬೇಕು. ಪಕ್ಷದ ಬೆಳವಣಿಗೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ‌ ಸಂದರ್ಭದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಮಾತನಾಡಿ, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸಿ, 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಂಘಟಿತ ಪ್ರಯತ್ನ ಮಾಡಬೇಕು ಪಕ್ಷದ ಪದಾಧಿಕಾರಿಗಳು ಕೇವಲ ಹುದ್ದೆಗೆ ಸೀಮಿತವಾಗದೆ ಪಕ್ಷಕ್ಕಾಗಿ ದುಡಿಯುವವರಿಗೆ ಅವಕಾಶ ನೀಡಬೇಕು ಎಂದರು.


ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ದೀಪ್ತಿ ಮೇರಿ ವರ್ಗೀಸ್, ಕೆಪಿಸಿಸಿ ವೀಕ್ಷಕ ಮಧುಸೂದನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಸಮಿತಿ‌ ಅಧ್ಯಕ್ಷ ವೈ ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ಹಿರಿಯ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಆಫ್ಸರ್ ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ವಾಲ್ಮೀಕಿ ಜಯಂತಿ ಸಭೆಗೆ ಕಪ್ಪು ಪಟ್ಟಿ ಧರಿಸಿ ಬಹಿಷ್ಕಾರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಆದ್ದರಿಂದ ವಾಲ್ಮೀಕಿ...

ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ...

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...