ಕೋಲಾರ | ಮೀಸಲಾತಿ ವಿಚಾರದಲ್ಲಿ ಸರಕಾರಗಳ ಬೇಜವಾಬ್ದಾರಿತನ: ಕಪ್ಪುಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆ: ಮಾಜಿ ಸಂಸದ ವಿ.ಎಸ್.ಉಗ್ರಪ್ಪ

Date:

ನಮಗೆ ತಟ್ಟೆಯಲ್ಲಿ ಅನ್ನ ಇಟ್ಟು ಮೂರು ವರ್ಷ ತಿನ್ನಲು ಬಿಟ್ಟು ಈಗ ಸ್ಟೇ ತಂದಿದ್ದಾರೆ. ಪ್ರಧಾನಿ ಹಾಗೂ ಮುಖ್ಯಮಂತ್ರಿ ಮತ ಕೇಳುತ್ತಾರೆ, ಆದರೆ ಸಂವಿಧಾನ ಜಾರಿಗೆ ತರುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ ದಿನದಂದು ಕಪ್ಪುಪಟ್ಟಿ ಧರಸಿ ಆಚರಣೆ ಮಾಡಲಾಗುವುದು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬೇಜವಾಬ್ದಾರಿತನ ತೋರಿವೆ. ನಾವು ಯಾರ ವಿರುದ್ಧವಲ್ಲ ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಬೇಕು ಅಷ್ಟೇ ನಮ್ಮ ಬೇಡಿಕೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ ಎಸ್‌ಸಿ ಸಮುದಾಯದವರು 17.01 ಶೇಕಡಾ, ಎಸ್‌ಟಿ ಸಮುದಾಯದವರು 7 ಶೇಕಡಾ ಹಾಗೂ ಓಬಿಸಿ ವರ್ಗದವರು 32 ಶೇಕಡಾ ಇದ್ದಾರೆ. ಈ ಮೂರು ವರ್ಗಗಳ ಜನಸಂಖ್ಯೆ ಒಟ್ಟಾರೆ ನಾಲ್ಕು ಕೋಟಿಗೂ ಅಧಿಕವಾಗಿದೆ ಎಂದು ತಿಳಿಸಿದರು.

ತಳವಾರ ಮತ್ತು ಪರಿವಾರ ಸಮುದಾಯಗಳನ್ನು ಸೇರಿಸಿದ ಬಳಿಕ ಎಸ್‌ಟಿ ಜನಸಂಖ್ಯೆ ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯ ವರದಿಯಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಓಬಿಸಿ ವರ್ಗಗಳಿಗೆ ಅನ್ಯಾಯವಾಗಿರುವುದನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗ ಮೀಸಲಾತಿ ನೀಡಲಾಗಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿ ಜಾರಿಗೆ ಕ್ರಮ ಕೈಗೊಂಡಿದ್ದರೂ, ಅದನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವ ಕುರಿತು ಕೇಂದ್ರ ಸರ್ಕಾರದಿಂದ ಸ್ಪಷ್ಟ ಉತ್ತರ ಬಂದಿಲ್ಲ ಎಂದು ಆರೋಪಿಸಿದರು.

56 ಶೇಕಡಾ ಮೀಸಲಾತಿ ಇದೀಗ ಸ್ಥಗಿತಗೊಂಡಿದೆ. 56 ಸಾವಿರ ಉದ್ಯೋಗ ಭರ್ತಿಗೆ ಸರ್ಕಾರ ಮುಂದಾಗಿದೆ. ಸರಿಯಾದ ರೀತಿಯಲ್ಲಿ ಮೀಸಲಾತಿ ಜಾರಿಯಾದರೆ ಎಸ್‌ಸಿ, ಎಸ್‌ಟಿ ಹಾಗೂ ಓಬಿಸಿ ವರ್ಗದವರಿಗೆ ಹೆಚ್ಚಿನ ಉದ್ಯೋಗ ಅವಕಾಶ ಸಿಗುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಳೆ ಅಬ್ಬರ: ಜಾಲವೃತಗೊಂಡ ಪಟ್ಟಣ 

ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ...

ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ...

ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಾಳಿಯಲ್ಲಿ ಗುಂಡು ಹಾರಿಸಿದಕ್ಕೆ ಪ್ರಕರಣ ದಾಖಲು 

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ...

ಹೃದಯದ ಮೇಲಿದ್ದ ಬೃಹತ್ ಗಡ್ಡೆ ಯಶಸ್ವಿ ತೆರವು; ಬಾಗಲಕೋಟೆಯ ಕೆರೂಡಿ ಆಸ್ಪತ್ರೆ ವೈದ್ಯರ ಅಪರೂಪದ ಸಾಧನೆ

ಎದೆಯ ಮಧ್ಯಭಾಗದಲ್ಲಿ ಬೆಳೆದು ಹೃದಯದ ಮೇಲೆ ತೀವ್ರ ಒತ್ತಡ ಉಂಟುಮಾಡುತ್ತಿದ್ದ ಬೃಹತ್...