ಬೇತಮಂಗಲ- ಕ್ಯಾಸಂಬಳ್ಳಿ ಮುಖ್ಯರಸ್ತೆಗೆ ಹರಿಯುತ್ತಿರುವ ಕೊಳಚೆ ನೀರು : ಸಾರ್ವಜನಿಕರ ಪರದಾಟ

Date:

ಬೇತಮಂಗಲ: ಪಟ್ಟಣದ ಕ್ಯಾಸಂಬಳ್ಳಿ ಮುಖ್ಯ ರಸ್ತೆಯ ಟಿಪ್ಪು ನಗರದಲ್ಲಿ ಕೊಳಚೆ ನೀರು ಮುಖ್ಯ ರಸ್ತೆಗೆ ಹರಿಯುತ್ತಿದ್ದು, ನಿವಾಸಿಗಳು ಸವಾರರು ದುರ್ವಾಸನೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿಯ ನಡುವೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ಬೇತಮಂಗಲ ಕ್ಯಾಸಂಬಳ್ಳಿ ಮುಖ್ಯ ರಸ್ತೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಮನೆಗಳ ಯುಜಿಡಿ ಮತ್ತು ಮಳೆ ನೀರು ರಸ್ತೆಗೆ ಹರಿಯುತ್ತಿದ್ದು ರೋಗ ಹರಡುವ ಭೀತಿಯ ನಡುವೆ ದುರ್ವಾಸನೆಯಿಂದ ಪ್ರತಿನಿತ್ಯ ಮೂಗು ಮುಚ್ಕೊಂಡು ಓಡಾಡುವ ಪರಿಸ್ಥಿತಿ ಇದ್ದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಈ ಕೂಡಲೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ಕೊಳಚೆ ನೀರು ರಸ್ತೆಗೆ ಹರಿಯದಂತೆ ಕ್ರಮಕೈಗೊಳ್ಳ ಬೇಕೆಂದು ದಲಿತ ಭೀಮ ಸೇನೆ ರಾಜ್ಯಾಧ್ಯಕ್ಷ ಕೆ.ಬಿ ದೇವರಾಜ್ ಒತ್ತಾಯಿಸಿದ್ದಾರೆ.

ಅನೇಕ ದಶಕಗಳಿಂದಲೂ ಬೇತಮಂಗಲ ಕ್ಯಾಸಂಬಳ್ಳಿ ಮುಖ್ಯರಸ್ತೆಯ ರಾಜ ಕಾಲುವೆ ಒತ್ತುವರಿಯಾಗಿದ್ದು, ಒತ್ತುವರಿ ತಿರುಗೊಳಿಸುವ ಬಗ್ಗೆ ಅನೇಕ ಬಾರಿ ಗ್ರಾಮ ಸಭೆ ಹಾಗೂ ಪ್ರತ್ಯೇಕವಾಗಿಯೂ ಸ್ಥಳೀಯ ಸಾರ್ವಜನಿಕರು,‌ ಪಿಡಿಒ, ಅಧ್ಯಕ್ಷರು, ಶಾಸಕರಿಗೂ ಸಹ ಅರ್ಜಿ ನೀಡಿದ್ದರು ಇದುವರೆಗೂ ಒತ್ತುವರಿ ತೆರವುಗೊಳಿಸಿದ ಪರಿಣಾಮ ಮಳೆಗಾಲದಲ್ಲಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದೆ.

ಇದೀಗ ನಿವಾಸಿಗಳ ಶೌಚಾಲಯ, ಯುಜಿಡಿ ನೀರು ರಸ್ತೆಗೆ ಹರಿಯುತ್ತಿದ್ದು ನಿತ್ಯ ಪ್ರಯಾಣಿಕರು ,‌ ಸವಾರರು, ನಿವಾಸಿಗಳು ದುರ್ವಾಸನೆಯಿಂದ ಹೈರಾಣಾಗಿದ್ದಾರೆ.

ಕನಿಷ್ಠ ಗ್ರಾಮ ಪಂಚಾಯಿತಿಯಿಂದ ನರೇಗಾ ಹಾಗೂ ಇತರೆ ಯೋಜನೆಗಳಾದ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಕನಿಷ್ಠ ಚರಂಡಿ ವ್ಯವಸ್ಥೆ ಕಲ್ಪಿಸುವಲ್ಲಿ ಅಧಿಕಾರಿಗಳು ಮತ್ತು ಈ ವಾರ್ಡಿನಲ್ಲಿ ಪ್ರತಿನಿಧಿಸಿರುವ ಸದಸ್ಯರು ವಿಫಲರಾಗಿದ್ದಾರೆ ಎಂದು ಈ ವಾರ್ಡ್ ನ ಸಾರ್ವಜನಿಕರು ಆರೋಪಿಸಿದ್ದಾರೆ.

ಬೇತಮಂಗಲ ಗ್ರಾಮ ಪಂಚಾಯಿತಿ ತಾಲೂಕಿನಲ್ಲಿಯೇ ಅತಿ ಹೆಚ್ಚು 27 ಸದಸ್ಯರನ್ನು ಒಳಗೊಂಡಿದ್ದು ಒಟ್ಟು 8 ಬ್ಲಾಕ್ ಗಳನ್ನು ಹೊಂದಿದ್ದು ಅವಶ್ಯಕ ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇದೆ ಜೊತೆಗೆ ನಿತ್ಯ ಸಂಗ್ರಹವಾಗುವ ಘನ ತ್ಯಾಜ್ಯ ವಿಲೇವಾರಿ ಮಾಡುವುದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಹೇಗಿರುವಾಗ ರಸ್ತೆಗೆ ಹರಿಯುವ ಕೊಲಚೆ ನೀರನ್ನು ತಡೆಗಟ್ಟಲು ಸಮಸ್ಯೆ ಆಗಿದೆ ಎಂದು ಹೆಸರು ಹೇಳಲು ಇಚ್ಚಿಸದ ಸದಸ್ಯರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ..? ಉನ್ನತ ಶಿಕ್ಷಣ ಇಲಾಖೆಯ 103 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆಗೆ ಆಹ್ವಾನ

ಈ ಕೂಡಲೇ ಕ್ಷೇತ್ರದ ಶಾಸಕರು ಕಂದಾಯ ಅಧಿಕಾರಿಗಳು ತಕ್ಷಣ ಕಾಸೆಂಬಲ್ಲಿ ಬೇತಮಂಗಲ ಮುಖ್ಯರಸ್ತೆಯ ರಾಜ ಕಾಲುವೆ ಒತ್ತುವರಿ ಗುರುತಿಸಿ ತೆರವುಗೊಳಿಸಿ ಸುಸಜ್ಜಿತ ಶಾಶ್ವತ ಕಾಲುವೆ ನಿರ್ಮಿಸಿದ್ದಲ್ಲಿ ಮಾತ್ರ ಈ ಭಾಗದ ಸಾರ್ವಜನಿಕರು ಉತ್ತಮ ಆರೋಗ್ಯದೊಂದಿಗೆ ಜೀವನ ನಡೆಸಲು ಸಹಕಾರಿಯಾಗುತ್ತದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

ಕೋಲಾರ | ಶಾಲೆಯ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ ಅಗತ್ಯ: ಲಕ್ಷ್ಮಣಗೌಡ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ,...

ಕೋಲಾರ | ಸ್ಮಶಾನಗಳ ದಾರಿ ಒತ್ತುವರಿ ತೆರವುಗೊಳಿಸಿ ಮೂಲಸೌಕರ್ಯ ಒದಗಿಸಿ: ರೈತ ಸಂಘ ಒತ್ತಾಯ

ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸ್ಮಶಾನದ ದಾರಿಗಳನ್ನು ಗುರುತಿಸಿ ತೆರವುಗೊಳಿಸುವುದರ ಜತೆಗೆ, ಸ್ಮಶಾನಗಳಲ್ಲಿ ಮೂಲಸೌಕರ್ಯಗಳನ್ನು...

ಶ್ರೀನಿವಾಸಪುರ| ತನ್ವೀರ್ ಸೇಠ್‌ಗೆ ಸಂಪುಟ ದರ್ಜೆ ಜವಾಬ್ದಾರಿ ನೀಡಬೇಕು : ಶಬ್ಬೀರ್ ಅಹ್ಮದ್

ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ...