ಉದ್ಘಾಟನೆಗೂ ಮುನ್ನವೇ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ ಭೀಕರ ಅಪಘಾತ, ನಾಲ್ವರು ಸಾವು

Date:

Advertisements

ಲೋಕಾರ್ಪಣೆಗೂ ಮುನ್ನವೇ ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಬೈಕ್‌ ಸವಾರನ ಗುರುತು ಪತ್ತೆಯಾಗಿಲ್ಲ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಭಾನುವಾರ ತಡರಾತ್ರಿ ಅಪಘಾತ ನಡೆದಿದೆ. ಸುಶ್ಮಿತಾ, ವಿರುತ, ಸುಜಾತ, ಸುನಿಲ್​ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರ ಗ್ರಾಮದವರಾಗಿದ್ದಾರೆ.

Advertisements

ಸುಜಾತಮ್ಮ, ಸುನೀಲ್ ವಿರಾಟ್ ಗಾಯಾಳುಗಳು. ಕೆಜಿಎಫ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಬೇತಮಂಗಲ ಕಡೆಗೆ ಇನ್ನೋವಾ ಕಾರು ತೆರಳುತ್ತಿತ್ತು. ಬೇತಮಂಗಲ ಕಡೆಯಿಂದ ಬೆಂಗಳೂರು ಕಡೆಗೆ ಬೈಕ್‌ ಸವಾರ ತೆರಳುತ್ತಿದ್ದ. ಬೈಕ್ ಸವಾರ ಎದುರು ಡಿಕ್ಕಿ ತಪ್ಪಿಸಲು ಹೋಗಿ ಕಾರು ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ನಾವಿಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಕೋಲಾರದ ಕಲಾವಿದ ಸ್ವಾಮಿ

ಆಗಸ್ಟ್ 29 ರಿಂದ 31 ರವರೆಗೆ ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್‌ಲ್ಯಾಂಡ್...

ಕೋಲಾರ | ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಸಿ ರವಿ

ಕೋಲಾರ ಜಿಲ್ಲೆಯಲ್ಲಿ ಗೌರಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು...

ಕೋಲಾರ ಜಿಲ್ಲೆಯ ಕೈ ಶಾಸಕರ ಜತೆ ವಿಧಾನಸೌಧದಲ್ಲಿ ಸಿಎಂ ಸಿದ್ದು ಚರ್ಚೆ

ವಿಧಾನಸೌಧದಲ್ಲಿ ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರು ಆಡಳಿತ ಪಕ್ಷದ ಶಾಸಕರುಗಳ ಜತೆ...

ಕೋಲಾರ | ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಲು ಒತ್ತಾಯಿಸಿ ಪ್ರತಿಭಟನೆ

ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ...

Download Eedina App Android / iOS

X