ಕೋಲಾರ-ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Date:

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಸಹಕಾರ ಸಂಘದ ಧ್ಯೇಯೋದ್ದೇಶಕ್ಕೆ ಧಕ್ಕೆ ತರುವ ರೀತಿಯಲ್ಲಿ ಕುಚೇಷ್ಟೆ, ಕುಚೋದ್ಯ ನಡೆಸುವುದು ತರವಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ ಹೇಳಿದರು.

- Advertisement -

ಅವಿಭಜಿತ ಕೋಲಾರ ಜಿಲ್ಲೆಯ ಶ್ರೀಕ್ಷೇತ್ರ ಕೈವಾರದ ಯೋಗಿ ನಾರೇಯಣ ಮಠದ ಸಭಾಂಗಣದಲ್ಲಿ ಮಂಗಳವಾರ ನಡೆದ ಕೋಲಾರ-ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಸಹಕಾರ ತತ್ವಗಳಡಿ ಸದಸ್ಯರ ಹಿತ ಕಾಪಾಡುವ ಕೆಲಸ ನಡೆಯುತ್ತಿರುವಾಗ ಅಪಪ್ರಚಾರ ಮಾಡುವುದು ತಿಳುವಳಿಕೆಯಿಲ್ಲದವರ ಕೆಲಸವಾಗಿದೆ. ಇಂತಹ ಪ್ರಯತ್ನಗಳನ್ನು ಮೆಟ್ಟಿನಿಂತು ಸಂಘವನ್ನು ಮತ್ತಷ್ಟು ಬಲಪಡಿಸಬೇಕು. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರನ್ನು ಸದಸ್ಯರನ್ನಾಗಿ ನೋಂದಾಯಿಸಬೇಕು ಎಂದು ಮನವಿ ಮಾಡಿದರು.

ಸಹಕಾರ ತತ್ವಗಳ ಬಗ್ಗೆ ಅರಿವಿಲ್ಲದ ಕೆಲವರು ಸಂಘವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಅಂತಹವರಿಗೆ ಸಂಘಟಿತವಾಗಿ ತಿರುಗೇಟು ನೀಡಬೇಕು. ತುರ್ತು ಕಾರ್ಯದ ನಿಮಿತ್ತ ಗೈರಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್ ಅವರು ಸಂದೇಶ ಕಳುಹಿಸಿದ್ದು, ಸಹಕಾರ ಸಂಘದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಪತ್ರಕರ್ತರಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

₹89,269 ನಿವ್ವಳ ಲಾಭ

ಸಂಘದ ಅಧ್ಯಕ್ಷ ಕೆ.ಎಸ್. ಗಣೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಇದು ಸಂಘದ 19ನೇ ವರ್ಷದ ಮಹಾಸಭೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸಿರುವುದು ಸಂತಸ ತಂದಿದೆ ಎಂದರು.

ಕೋಲಾರ-ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹89,269 ನಿವ್ವಳ ಲಾಭ ಗಳಿಸಿದ್ದು, ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಬಿ’ ಶ್ರೇಣಿ ಪಡೆದುಕೊಂಡಿದೆ ಎಂದು ತಿಳಿಸಿದರು.

ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಕೋಲಾರ ಜಿಲ್ಲೆಯಿಂದ 200ಕ್ಕೂ ಹೆಚ್ಚು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಿಂದ 60ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ಅರ್ಹ ಪತ್ರಕರ್ತರ ಷೇರು ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ನಿರ್ಧಾರಕ್ಕೆ ಸಭೆಯ ಅನುಮೋದನೆ ಪಡೆಯಲಾಯಿತು ಎಂದರು.

ಆರೋಗ್ಯ ಶಿಬಿರ, ಎಐ ಕಾರ್ಯಾಗಾರ

ಕಳೆದ ಒಂದು ವರ್ಷದಲ್ಲಿ ಪತ್ರಕರ್ತರ ಹಿತಾಸಕ್ತಿ ಕಾಪಾಡಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಾಲ್ಕು ತಿಂಗಳ ಅವಧಿಯಲ್ಲಿ ಏಳು ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಆರೋಗ್ಯ ಶಿಬಿರ, ದಂತ ಚಿಕಿತ್ಸಾ ಶಿಬಿರ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಗಣೇಶ್ ವಿವರಿಸಿದರು.

ಮೊದಲ ಬಾರಿಗೆ ಅಂಬೇಡ್ಕರ್ ಜಯಂತಿ ಆಚರಿಸಲಾಗಿದ್ದು, ಪ್ರತಿವರ್ಷ ರಾಜ್ಯಮಟ್ಟದ ಅಂಬೇಡ್ಕರ್ ಪ್ರಶಸ್ತಿ ಹಾಗೂ ₹10 ಸಾವಿರ ನಗದು ಪುರಸ್ಕಾರ ನೀಡುವ ಉದ್ದೇಶ ಹೊಂದಲಾಗಿದೆ. ಇದಕ್ಕೂ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದರು.

ಸಂಘಕ್ಕೆ ಸ್ವಂತ ಕಟ್ಟಡ ಹೊಂದಲು ಶಾಸಕ ಕೊತ್ತೂರು ಮಂಜುನಾಥ್ ಸಹಕಾರ ನೀಡುತ್ತಿದ್ದಾರೆ. ಸದಸ್ಯರಿಗೆ ನಿವೇಶನ ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ. ಸದಸ್ಯರ ಯಶಸ್ವಿನಿ ಆರೋಗ್ಯ ವಿಮೆಯ ವಾರ್ಷಿಕ ಮೊತ್ತವನ್ನು ಶಾಸಕರೇ ಭರಿಸಲು ಮುಂದೆ ಬಂದಿದ್ದಾರೆ. ಸದಸ್ಯರು ಈ ಆರೋಗ್ಯ ವಿಮೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಘಕ್ಕೆ ರಾಜೀನಾಮೆ ನೀಡಿ ಹೊರಹೋಗಿ: ಅಬ್ಬಣಿ ಶಂಕರ್

ಸಹಕಾರ ಸಂಘದ ಉಪಾಧ್ಯಕ್ಷ ಅಬ್ಬಣಿ ಶಂಕರ್ ಮಾತನಾಡಿ, ಈ ಸಂಘ ನಿಸ್ವಾರ್ಥ ಉದ್ದೇಶದಿಂದ ರಚನೆಯಾಗಿದೆ. ಕೆಲವರು ವೈಯಕ್ತಿಕ ಸ್ವಾರ್ಥಕ್ಕಾಗಿ ಮತ್ತೊಂದು ಸಂಘ ಹುಟ್ಟುಹಾಕಿದ್ದು, ಅದರಲ್ಲಿ ಭಾಗಿಯಾಗಿರುವವರು ನಮ್ಮ ಸಂಘಕ್ಕೆ ರಾಜೀನಾಮೆ ನೀಡಿ ಗೌರವಯುತವಾಗಿ ಹೊರಹೋಗಬೇಕು ಎಂದು ಹೇಳಿದರು.

ವೈಯಕ್ತಿಕ ದ್ವೇಷಕ್ಕಾಗಿ ಸಂಘವನ್ನು ಬಲಿಕೊಡಬಾರದು. ನಿರಂತರವಾಗಿ ಸಭೆಗಳಿಗೆ ಗೈರಾಗುವ ಸದಸ್ಯರನ್ನು ತೆಗೆದುಹಾಕಲು ಸಹಕಾರ ಕಾಯ್ದೆಯಲ್ಲಿ ಅವಕಾಶವಿದೆ. ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ ಹೆಸರಿನಿಂದ ‘ಕಾರ್ಯನಿರತ’ ಪದವನ್ನು ತೆಗೆದುಹಾಕಲು ಹಿಂದೆ ನಡೆದ ಪ್ರಯತ್ನಗಳು ವಿಫಲವಾಗಿವೆ. ಅಧ್ಯಕ್ಷ ಕೆ.ಎಸ್. ಗಣೇಶ್ ಸಂಘವನ್ನು ಸಮರ್ಥವಾಗಿ ಕಟ್ಟಿ ಉಳಿಸಿದ್ದಾರೆ ಎಂದರು.

ಹೊಸ ಸಂಘ ರಚಿಸಿ ನಮ್ಮ ಸಂಘದ ವಿರುದ್ಧ ಕುಚೋದ್ಯ ನಡೆಸುತ್ತಿರುವವರು ಗೌರವಯುತವಾಗಿ ರಾಜೀನಾಮೆ ನೀಡಿ ಹೊರಹೋಗಬೇಕು ಎಂದು ಅವರು ಎಚ್ಚರಿಸಿದರು.

ಹಲವು ನಿರ್ಣಯಗಳಿಗೆ ಅನುಮೋದನೆ

ಸಹಕಾರ ಕಾಯ್ದೆಯನ್ವಯ ಸದಸ್ಯತ್ವ ನೀಡುವುದು, ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವುದು, ಸಂಘ ವಿರೋಧಿ ಚಟುವಟಿಕೆಗಳ ವಿರುದ್ಧ ಕ್ರಮ, ಶಾಸನಬದ್ಧ ಲೆಕ್ಕಪರಿಶೋಧಕರ ನೇಮಕ ಸೇರಿದಂತೆ ಹಲವು ವಿಷಯಗಳಿಗೆ ಸಭೆಯಲ್ಲಿ ಅನುಮೋದನೆ ದೊರೆಯಿತು. ವಾರ್ಷಿಕ ಅಂದಾಜು ಆಯವ್ಯಯಕ್ಕೂ ಸರ್ವಾನುಮತದ ಒಪ್ಪಿಗೆ ದೊರೆಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಜಿ. ಸುರೇಶ್ ಕುಮಾರ್ ಮಾತನಾಡಿ, ಸಂಘವನ್ನು ಕ್ರಿಯಾಶೀಲವಾಗಿಡಲು ನಿರಂತರವಾಗಿ ಶ್ರಮಿಸಲಾಗುತ್ತಿದೆ. ಸದಸ್ಯತ್ವ ಅಭಿಯಾನದ ಜತೆಗೆ ಪತ್ರಕರ್ತರ ಹಿತ ಕಾಯುವ ಹಲವು ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರಗಳನ್ನು ನಡೆಸಲಾಗಿದೆ. ಎಲ್ಲರ ಸಹಕಾರದಿಂದ ಸಂಘವನ್ನು ಮತ್ತಷ್ಟು ಬಲಪಡಿಸಲಾಗುವುದು. ಪತ್ರಕರ್ತರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ಸಂಘ ಬದ್ಧವಾಗಿದೆ ಎಂದರು.

ಕೈವಾರ ಮಠದಿಂದ ಅನ್ನದಾಸೋಹ

ಸಭೆಯ ಸಂಪೂರ್ಣ ವ್ಯವಸ್ಥೆಯನ್ನು ಕೈವಾರ ಯೋಗಿ ನಾರೇಯಣ ಮಠದ ವತಿಯಿಂದ ಮಾಡಲಾಗಿತ್ತು. ಮಠದ ಸಂಚಾಲಕ ಬಾಲಕೃಷ್ಣ ಭಾಗವತಾರ್, ವ್ಯವಸ್ಥಾಪಕ ಲಕ್ಷ್ಮೀನಾರಾಯಣ ಹಾಗೂ ಪ್ರವಚನಗಾರ ತಳಗವಾರ ಆನಂದ್ ಅವರು ಪತ್ರಕರ್ತರಿಗೆ ಅನ್ನದಾಸೋಹದ ವ್ಯವಸ್ಥೆ ಕಲ್ಪಿಸಿದ್ದರು. ಇದೇ ಸಂದರ್ಭದಲ್ಲಿ ಕೈವಾರ ತಾತಯ್ಯನವರ ಪೂಜೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಯಿತು.

ಸಭೆಯಲ್ಲಿ ಅತ್ಯುತ್ತಮ ಸಾಲ ಮರುಪಾವತಿದಾರರಾಗಿ ಸಂಘದ ನಿರ್ದೇಶಕ ಹಾಗೂ ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಹೆಚ್.ಎನ್. ಮುರಳೀಧರ್ ಅವರನ್ನು ಸನ್ಮಾನಿಸಲಾಯಿತು. ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ವತಿಯಿಂದ ಪತ್ರಿಕಾ ವಿತರಕ ಹಾಗೂ ಮುದ್ರಕ ವಾಸು ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ರಾಜೇಂದ್ರ ಸಿಂಹ ನಿರೂಪಿಸಿದರು. ಉಪಾಧ್ಯಕ್ಷ ರವಿಕುಮಾರ್ ಹಿಂದಿನ ವರ್ಷದ ಸಭೆಯ ನಡಾವಳಿಯನ್ನು ಓದಿ ದಾಖಲಿಸಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಬಸ್​​ಗಾಗಿ ವಿದ್ಯಾರ್ಥಿಗಳು ಪರದಾಟ.. ಬಸ್ ಬಾಗಿಲಿಗೆ ಜೋತು ಬಿದ್ದು ಪ್ರಯಾಣ..!ಶಾಲೆ-ಕಾಲೇಜ್​ ಸಮಯಕ್ಕೆ ಪ್ರತ್ಯೇಕ ಬಸ್​ ಸಂಚರಿಸಲಿ

ಸಭೆಯಲ್ಲಿ ಸಂಘದ ನಿರ್ದೇಶಕರಾದ ಹೆಚ್.ಎನ್. ಮುರಳೀಧರ್, ಎಂ. ನಾಗರಾಜಯ್ಯ, ಪಿ. ನಾರಾಯಣದಾಸ್, ಸಿ.ವಿ. ನಾಗರಾಜ್, ಹೆಚ್.ಎಲ್. ಸುರೇಶ್, ಎಂ. ಸೋಮಶೇಖರ್, ಕೆ. ಗೋಪಿಕಾ ಮಲ್ಲೇಶ್, ಶಬ್ಬೀರ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪತ್ರಕರ್ತ ಕೆ.ವಿ. ನಾಗರಾಜ್ ಪ್ರಾರ್ಥಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ...

ರಾಯಚೂರು | ಸಿಡಿಲು ಬಡಿದು ಆಡುಗಳ ಸಾವಿಗೆ ಶಾಸಕರಿಂದ ₹40 ಸಾವಿರ ನೆರವು

ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ...

ಉಡುಪಿ | ಧರ್ಮದ ಹೆಸರಿನಲ್ಲಿ ವಿಭಜನೆ ಬೇಡ, ಮಾನವೀಯತೆಗೆ ಆದ್ಯತೆ ನೀಡಿ : ಮುಹಮ್ಮದ್ ಕುಂಞಿ

ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ನಗರ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೀರತ್...

ಚಿಕ್ಕಮಗಳೂರು | “ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ”ಗೊಳಿಸಬೇಕು; ನ್ಯಾ. ರವೀಂದ್ರ ಹೆಗಡೆ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ  ಕಾನೂನು ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶ...