ಬಂಗಾರಪೇಟೆ | ಹುತ್ತೂರು ಹೋಬಳಿಗೆ 1,000 ನಿವೇಶನ: ಆರು ತಿಂಗಳಲ್ಲಿ ಹಕ್ಕುಪತ್ರ ವಿತರಣೆ – ಶಾಸಕ ಎಸ್.ಎನ್. ನಾರಾಯಣಸ್ವಾಮಿ

Date:

ಹುತ್ತೂರು ಹೋಬಳಿಯ ಪ್ರತಿ ಗ್ರಾಮ ಪಂಚಾಯಿತಿಗೆ ಸುಮಾರು 250ರಂತೆ ನಿವೇಶನಗಳಂತೆ ಒಟ್ಟು 1,000 ನಿವೇಶನಗಳನ್ನು ಮಂಜೂರು ಮಾಡಿಸಿ, ಆರು ತಿಂಗಳೊಳಗೆ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಹಾಗೂ ಕೆಯುಐಡಿಎಫ್‌ಸಿ ಅಧ್ಯಕ್ಷ ಎಸ್.ಎನ್. ನಾರಾಯಣಸ್ವಾಮಿ ಭರವಸೆ ನೀಡಿದರು.

- Advertisement -

ತಾಲೂಕಿನ ಹುತ್ತೂರು ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನವನ್ನು ಶನಿವಾರ ಹುತ್ತೂರು ಗ್ರಾಮದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಹುತ್ತೂರಿನಿಂದ ಬೆಳಗಾನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ರೂ. ಅನುದಾನ ನೀಡಲಾಗಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಕೊರತೆಯಾಗದಂತೆ ನಾನು ಶಾಸಕನಾಗಿ ಬಂದಾಗಿನಿಂದ ಕ್ರಮ ವಹಿಸಲಾಗುತ್ತಿದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಅರಣ್ಯ ಇಲಾಖೆಗೆ ಡಿಎಫ್‌ಒ ಆಗಿ ಬಂದ ನಂತರದಿಂದ 70 ವರ್ಷಗಳಿಂದ ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಸಮಸ್ಯೆ ಎದುರಾಗಿದೆ ಏಕಾಏಕಿ ಹೋಗಿ ದೌರ್ಜನ್ಯ ನಡೆಸಲಾಗಿದೆ. ಈ ಕುರಿತು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಗಳ ಸಭೆ ಬೆಂಗಳೂರಿನಲ್ಲಿ ನಡೆಸಲಾಗಿದೆ, ಜಂಟಿ ಸರ್ವೆ ನಡೆಸಿ ದಾಖಲೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆ ಅರಣ್ಯ ಮತ್ತು ಕಂದಾಯ ಇಲಾಖೆಗೆ ಸೂಚಿಸಲಾಗಿದೆ. ಅಂತಿಮ ತೀರ್ಮಾನವಾಗುವವರೆಗೆ ಅರಣ್ಯ ಇಲಾಖೆಯವರು ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ನೀಡಬಾರದು ಎಂದು ಆದೇಶ ನೀಡಿದ್ದಾರೆ. ರೈತರು ಆತಂಕಪಡುವ ಅಗತ್ಯವಿಲ್ಲ, ಸರ್ಕಾರ ಮತ್ತು ನಾವು ನಿಮ್ಮೊಂದಿಗಿದ್ದೇವೆ ಎಂದು ಭರವಸೆ ನೀಡಿದರು.

ಹುತ್ತೂರು ಹೋಬಳಿಯ ಹೊಳಲಿ ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮೀಸಲಿಟ್ಟಿರುವ ಜಾಗದಲ್ಲಿ ಕೋಮುಲ್ ವತಿಯಿಂದ ಸೋಲಾರ್ ಘಟಕ ಸ್ಥಾಪಿಸಿರುವುದು ನಿಯಮಬಾಹಿರವಾಗಿದೆ ಇದನ್ನು ನಾನು ಕೋಮುಲ್ ನಿರ್ದೇಶಕ ನಾದರೂ ವಿರೋಧಿಸುತ್ತೇನೆ ಅವತ್ತು ವಿರೋಧ ಇತ್ತು ಇವತ್ತು ಇದೆ ಮುಂದೆಯೂ ಇರುತ್ತದೆ. ಈಗಾಗಲೇ ಶಾಲೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದ್ದು, ವಿದ್ಯಾರ್ಥಿಗಳ ಪ್ರವೇಶಾತಿಯೂ ಆಗಿದೆ. ವಸತಿ ಶಾಲೆಗೆ ಮೀಸಲಾದ ಜಾಗವನ್ನು ರಕ್ಷಿಸುವುದು ಅಗತ್ಯವಾಗಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಅವರ ಆಶಯದಂತೆ ಸರ್ಕಾರದ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳು ಸ್ಥಳದಲ್ಲೇ ಸಮಸ್ಯೆ ಪರಿಹರಿಸಲು ಸಿದ್ಧರಿದ್ದು, ಸಾಧ್ಯವಾಗದಿದ್ದಲ್ಲಿ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲಿದ್ದಾರೆ. ಸರ್ಕಾರ ಪ್ರತಿವರ್ಷ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು 55 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. ಹಾಲಿನ ದರ ಹೆಚ್ಚಳದ ಮೂಲಕ ಹೈನುಗಾರಿಕೆ ಅವಲಂಬಿಸಿರುವ ರೈತರು ಹಾಗೂ ಮಹಿಳೆಯರಿಗೆ ನೆರವು ನೀಡಲಾಗುತ್ತಿದೆ. ರೈತರಿಗೆ ಪ್ರತಿ ಲೀಟರ್‌ಗೆ 43 ರೂ. ದೊರೆಯುತ್ತಿದೆ ಎಂದರು.

ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಗ್ಯಾಸ್ ಹೆಚ್ಚಳ ಮಾಡಿ ಬಡವರ ಹೊಟ್ಟೆ ಮೇಲೆ ಹೊಡಿದಿದ್ದಾರೆ ರಾಜ್ಯದಿಂದ ಸುಮಾರು ನಾಲ್ಕು ಲಕ್ಷ ಕೋಟಿ ಟ್ಯಾಕ್ಸ್ ಕಟ್ಟಿದ್ದೇವೆ ವಾಪಸು ಎಷ್ಟು ಕೊಟ್ಟಿದ್ದಾರೆ ಬಹಿರಂಗವಾಗಿ ಸಾರ್ವಜನಿಕರಿಗೆ ತಿಳಸಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಸರ್ಕಾರ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ ಅದಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ ರೇಷನ್ ಕಾರ್ಡ್ ರದ್ದತಿ, ಖಾತೆ, ಪೋಡಿ ಸೇರಿದಂತೆ ಕಂದಾಯ ಇಲಾಖೆಯ ಸಮಸ್ಯೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಬಗೆಹರಿಸಲಾಗುವುದು. ಅರ್ಹರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗದಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.


ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಕಾರ್ಯಕ್ರಮದಲ್ಲಿ ಬಂಗಾರಪೇಟೆ ಪ್ರಭಾರಿ ತಹಶೀಲ್ದಾರ್ ನಾಗವೇಣಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್‌ ಕುಮಾರ್, ಹುತ್ತೂರು ಗ್ರಾಪಂ ಮಾಜಿ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಕೋಟೆ ನಾರಾಯಣಸ್ವಾಮಿ, ಮುಖಂತಂಬಹಳ್ಳಿ ಮುನಿಯಪ್ಪ, ಹೊಳಲಿ ಚಲಪತಿ, ಮಲ್ಲಂಡಹಳ್ಳಿ ನಾಗಭೂಷಣ ಬಾಬು, ಹೊಳಲಿ ಪ್ರಕಾಶ್, ಪ್ರತಾಪ್, ಚೌಡಪ್ಪ, ದೇವರಾಜ್, ಶ್ರೀರಾಮ್, ರಮೇಶ್, ಬಿಎಂಟಿಸಿ ಮಂಜು, ಬಿ.ವಿ.ವಿಶ್ವಾಸ್, ಸುನಿಲ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಪಿಡಿಒಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್‌ ಜಿ.ಟಿ ನಿಟ್ಟಾಲಿ ನೇಮಕ

ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಐಎಎಸ್‌...

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ ಎತ್ತರಕ್ಕೆ: ಅಕ್ಷರಗಳ ಮೂಲಕ ಅಮರರಾದ ಕೆವಿಎನ್

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು...

ಬಾಗಲಕೋಟೆ | ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ: ದಶಕಗಳ ಹೋರಾಟಕ್ಕೆ ಜಯ

ಕರ್ನಾಟಕ ರಾಜ್ಯ ಸರ್ಕಾರ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ರಾಜ್ಯದ ಬೌದ್ಧ...

ಬಾಗಲಕೋಟೆ | ಆತ್ಮರಕ್ಷಣೆಗೆ ವುಶು, ಕರಾಟೆ ಕ್ರೀಡೆಗಳ ಅಗತ್ಯವಿದೆ: ಡಾ. ವೀರಣ್ಣ ಚರಂತಿಮಠ

ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆಗಳು ಅತ್ಯವಶ್ಯವಾಗಿದ್ದು, ವುಶು ಮತ್ತು...