ಹಿರಿಯ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಮಾರಣಾಂತಿಕ ಹಲ್ಲೆ

Date:

Advertisements

ರಾಜ್ಯದ ದಲಿತ ಚಳುವಳಿಯ ನಾಯಕ, ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆಘಾತಕಾರಿ ಘಟನೆ ಕೋಲಾರದ ಅಂತರಗಂಗೆ ಬಳಿ ನಡೆದಿದೆ.

ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಜೋರು ಧ್ವನಿಯಲ್ಲಿ ಮೈಕ್ ಹಾಕಲಾಗಿತ್ತು. ಮೈಕ್ ಶಬ್ದವನ್ನು ಕಡಿಮೆ ಮಾಡುವಂತೆ ರಾಮಯ್ಯ ಹೇಳಿದ್ದಾರೆ. ಅಷ್ಟಕ್ಕೆ ವಿಚಲಿತಕೊಂಡು ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಆರೋಪಿಗಳನ್ನು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ ಮತ್ತು ತೇರಹಳ್ಳಿಯ ಮುನಿಯಪ್ಪ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ರಾಮಯ್ಯ ಅವರ ಕಣ್ಣಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Advertisements

WhatsApp Image 2024 04 11 at 12.16.23 PM

ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಂಜುನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಮಯ್ಯ ಮೇಲೆ ಹಲ್ಲೆ ನಡೆಸಿರುವ ಘಟನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ರಾಮಯ್ಯ ಅವರ ಬೆಂಬಲಿಗರು, ಅನುಯಾಯಿಗಳು ಕೋಲಾರದತ್ತ ಹೊರಟಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X