ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

Date:

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬೇತಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಮ್ಮಸಂದ್ರ ನಾಗರಾಜ್, ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಅನುಮಾನಗಳಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕು, ಇಲ್ಲವಾದರೆ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಫೆಬ್ರವರಿ 25ರಂದು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಪತ್ರ ಬರೆದಿದ್ದರೂ, ಚುನಾವಣಾ ಆಯೋಗವು ಅದಕ್ಕೆ ಸೂಕ್ತ ಸ್ಪಂದನೆ ನೀಡಿಲ್ಲ ಎಂದು ನಾಗರಾಜ್ ಆರೋಪಿಸಿದರು.

Advertisements

ಎಸ್ಆರ್ ಪ್ರಕ್ರಿಯೆ ರದ್ದುಪಡಿಸಲು ಒತ್ತಾಯ:
ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತತೆ ಅತ್ಯಂತ ಮುಖ್ಯವಾಗಿದ್ದು, ಯಾವುದೇ ರಾಜಕೀಯ ಪಕ್ಷಕ್ಕೆ ಅನುಕೂಲವಾಗುವ ರೀತಿಯಲ್ಲಿ ಪ್ರಕ್ರಿಯೆ ನಡೆಯಬಾರದು ಎಂದು ಅವರು ಹೇಳಿದರು. ಎಸ್ಆರ್ ಪ್ರಕ್ರಿಯೆಯನ್ನು ಬಿಜೆಪಿ ಪರವಾಗಿ ಅನುಕೂಲ ಕಲ್ಪಿಸುವ ಉದ್ದೇಶದಿಂದ ನಡೆಸಲಾಗುತ್ತಿದೆ ಎಂದು ಆರೋಪಿಸಿದ ನಾಗರಾಜ್, ರಾಜ್ಯದಲ್ಲಿಯೂ ಎಸ್ಆರ್ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿವೆ ಎಂದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರ ಹೆಸರುಗಳು ಕೈಬಿಡದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಅನರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಕ್ರಿಯೆಯಲ್ಲಿಯೂ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..?ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಎಸ್ಆರ್ ಪ್ರಕ್ರಿಯೆಯ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಬೇಕು ಹಾಗೂ ಈ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ನಾಗರಾಜ್ ಆಗ್ರಹಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...