ಕೆಜಿಎಫ್ | ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮರುಪಾವತಿಗೆ ಕ್ರಮ: ಶಾಸಕಿ ರೂಪಶಶಿಧರ್

Date:

ಕೆಜಿಎಫ್ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಾರ್ಡ್‌ವಾರು ಪಿಂಚಣಿ ಅದಾಲತ್‌ಗಳನ್ನು ನಡೆಸಲಾಗುವುದು. ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಂದ ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು. ಅರ್ಹರೆಂದು ಕಂಡುಬಂದವರಿಗೆ ಮತ್ತೆ ಪಿಂಚಣಿ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

- Advertisement -

ಪ್ರಸ್ತುತ ಪಿಂಚಣಿ ಪಡೆಯಲು ಆದಾಯ ಮಿತಿಯನ್ನು 1.20 ಲಕ್ಷಕ್ಕೆ ನಿಗದಿಪಡಿಸಿರುವುದರಿಂದ ಹಲವು ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಿದ್ದಾರೆ. ಆದಾಯ ಮಿತಿಯನ್ನು 3 ಲಕ್ಷಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಅಲ್ಲಿಯವರೆಗೆ ಅಧಿಕಾರಿಗಳು ಮಾನವೀಯ ದೃಷ್ಟಿಕೋನದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕಿ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ...

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ ಪಡೆದುಕೊಂಡಿದೆ. ಮಳೆಗಾಗಿ ಎದುರು ನೋಡುತ್ತಿರುವ ರೈತರಿಗೆ ಬಿಸಿಲು ಮತ್ತಷ್ಟು ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನ...

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಲು ಅಧಿಕಾರಿಗಳಿಗೆ ಸೂಚನೆ: ತಾಲ್ಲೂಕು ಕಚೇರಿಗೆ ಸಮಸ್ಯೆಗಳನ್ನು ಹೇಳಿಕೊಂಡು ಬರುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕಚೇರಿಗೆ ಬಂದಾಗ ಅವರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿ, ಸಾಧ್ಯವಾದಷ್ಟು ಬೇಗ ಪರಿಹಾರ ಸೂಚಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕಿ ಸೂಚಿಸಿದರು.

ಇ-ಕೆವೈಸಿ ಮಾಡಿಸದಿದ್ದರೆ 70 ಸಾವಿರ ಪಡಿತರ ಚೀಟಿ ರದ್ದು:
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೋಲಾರ ಜಿಲ್ಲಾ ಡಿಡಿ ಮಲ್ಲಿಕಾರ್ಜುನ್ ಮಾತನಾಡಿ, ಪಡಿತರ ಚೀಟಿದಾರರು ಸೆಪ್ಟೆಂಬರ್ 20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಸುಮಾರು 70 ಸಾವಿರ ಪಡಿತರ ಚೀಟಿಗಳು ರದ್ದಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲಾ ಕಾರ್ಡ್‌ದಾರರು ತಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಪ್ರಾಣತ್ಯಾಗ ಮಾಡಿದ ರೈತ ಹುತಾತ್ಮರ ಬಲಿದಾನ ದೇಶದ ಕೃಷಿ ಚಳವಳಿಗೆ ಸದಾ ಸ್ಫೂರ್ತಿದಾಯಕ

ಈ ಸಂದರ್ಭದಲ್ಲಿ ತಹಶೀಲ್ದಾರ್ ಗಾಯಿತ್ರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಡಿಡಿ ಶಾಂತಕುಮಾರಿ, ನಿರೀಕ್ಷಕ ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸನ್, ಕೆಪಿಸಿಸಿ ಸದಸ್ಯ ದುರ್ಗಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್, ಮಾಜಿ ನಗರಸಭೆ ಸದಸ್ಯ ಕೊದಂಡನ್, ಕಬೀರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಸವರಾಜ ಆತ್ಮಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಕೇಸ್, ಮೂವರ ಬಂಧನ

ಮಸ್ಕಿ ತಾಲ್ಲೂಕಿನ ಮೆದಕಿನಾಳ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿ...

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...