ಕೆಜಿಎಫ್ | ಐತಿಹಾಸಿಕ ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ ಹಾಗೂ ಐ.ಆರ್.ಬಿ ಕೇಂದ್ರದ ಕಾಮಗಾರಿ ಪರಿಶೀಲಿಸಿದ ಶಾಸಕಿ ಎಂ.ರೂಪಕಲಾ

Date:

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೆ.ಜಿ.ಎಫ್ ನಗರಕ್ಕೆ ಭೇಟಿ ನೀಡಿದ್ದ ಐತಿಹಾಸಿಕ ದಿನಗಳ ಸ್ಮರಣಾರ್ಥವಾಗಿ ನಗರದ ಬಳಿ ನಿರ್ಮಾಣವಾಗುತ್ತಿರುವ ಭವ್ಯ ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ, ಜ್ಞಾನ ಕೇಂದ್ರ ಹಾಗೂ ಪರಿಶೋಧನಾ ಕೇಂದ್ರದ ಕಾಮಗಾರಿ ಸ್ಥಳಕ್ಕೆ ಶಾಸಕಿ ಎಂ. ರೂಪಕಲಾ ಅವರು ಭೇಟಿ ನೀಡಿ ಸುದೀರ್ಘ ಪರಿಶೀಲನೆ ನಡೆಸಿದರು.

- Advertisement -

ಲೋಕೋಪಯೋಗಿ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳ ತಂಡದೊಂದಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಕಟ್ಟಡದ ಬ್ಲೂಪ್ರಿಂಟ್ (ನಕ್ಷೆ) ಹಿಡಿದು ಕಾಮಗಾರಿಯ ಪ್ರತಿ ಹಂತವನ್ನೂ ಸೂಕ್ಷ್ಮವಾಗಿ ಅವಲೋಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸ್ಮಾರಕದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ:
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ರೂಪಕಲಾ ಅವರು, “ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೆ.ಜಿ.ಎಫ್‌ಗೆ ಭೇಟಿ ನೀಡಿದ್ದು ಈ ಭಾಗದ ಜನರಿಗೆ ಹೆಮ್ಮೆಯ ಸಂಗತಿ. ಅವರ ನೆನಪನ್ನು ಚಿರಸ್ಥಾಯಿಯಾಗಿಸಲು ತಲೆಯೆತ್ತುತ್ತಿರುವ ಈ ಸ್ಮಾರಕ ಮತ್ತು ಜ್ಞಾನ ಕೇಂದ್ರವು ಮುಂದಿನ ಪೀಳಿಗೆಗೆ ಜ್ಞಾನದ ದೇಗುಲವಾಗಲಿದೆ.

ಈ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಸುಸಜ್ಜಿತವಾಗಿ ನಡೆಸಲಾಗುತ್ತಿದ್ದು, ಗುಣಮಟ್ಟದ ಕಡೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ,” ಎಂದರು.
ಭಾರತೀಯ ಮೀಸಲು ಪಡೆ ಕೇಂದ್ರದ ಪರಿಶೀಲನೆ:
ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ ಸ್ಥಳದ ಪರಿಶೀಲನೆಯ ನಂತರ ಶಾಸಕರು, ಕೆ.ಜಿ.ಎಫ್ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಭಾರತೀಯ ಮೀಸಲು ಪಡೆ ಕೇಂದ್ರದ ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿದರು.

ಇತ್ತೀಚೆಗಷ್ಟೇ ಆರಂಭವಾಗಿರುವ ಈ ಮಹತ್ವದ ಯೋಜನೆಯ ಆರಂಭಿಕ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದ ಅವರು, ರಾಷ್ಟ್ರೀಯ ಭದ್ರತೆ ಮತ್ತು ಸ್ಥಳೀಯ ಉದ್ಯೋಗದ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ಈ ಕೇಂದ್ರದ ಕೆಲಸಗಳು ವೇಗವಾಗಿ ನಡೆಯುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.
ಸ್ಥಳದಲ್ಲಿದ್ದವರು.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಅವರ 21 ಅಡಿ ಕಂಚಿನ ಪ್ರತಿಮೆ ಕಾಮಗಾರಿ ಪರಿಶೀಲಿಸಿದ ಶಾಸಕ ಕೊತ್ತೂರು ಮಂಜುನಾಥ್

ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ರಾಜಶೇಖರ್, ಇಂಜಿನಿಯರ್ ಸುನೀಲ್, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪ್ರಮುಖ ಗುತ್ತಿಗೆದಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಭಾಲ್ಕಿ | ವಿಬಿ-ಜಿ ರಾಮ್ ಜಿ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್ ಜಿ ಯೋಜನೆಯ ಸದುಪಯೋಗ...

ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು...