ಕೆಜಿಎಫ್ | ಮಾನವ ಕಳ್ಳಸಾಗಾಣಿಕೆ ಮುಕ್ತ ಸಮಾಜ ನಿರ್ಮಾಣಕ್ಕೆ ಹೋರಾಟ ಅಗತ್ಯ: ನ್ಯಾಯಾಧೀಶ ಪ್ರಭು

Date:

ಸಮಾಜದಲ್ಲಿ ಅಮಾಯಕ ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಮಾನವ ಕಳ್ಳಸಾಗಾಣಿಕೆಯಂತಹ ಗಂಭೀರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಮತ್ತು ಕಾನೂನು ಇಲಾಖೆಯೊಂದಿಗೆ ಸಾರ್ವಜನಿಕರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಭು ನೀಲಾಚಾರಿ ಬಡಿಗೇರ ಕರೆ ನೀಡಿದರು.

- Advertisement -

ಪಟ್ಟಣದ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ಕೆಜಿಎಫ್ ತಾಲ್ಲೂಕು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಮಾನವ ಕಳ್ಳಸಾಗಾಣಿಕೆ ತಡೆಗಟ್ಟುವಿಕೆ’ ಹಾಗೂ ‘ಮತದಾರರ ಜಾಗೃತಿ’ ಕುರಿತ ಕಾನೂನು ಅರಿವು ಕಾರ್ಯಕ್ರಮ ಮತ್ತು ಜನಜಾಗೃತಿ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆಶಾ, ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮುಖ್ಯ
“ತಳಮಟ್ಟದಲ್ಲಿ ಸಮಾಜದೊಂದಿಗೆ ನೇರ ಸಂಪರ್ಕ ಹೊಂದಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಗ್ರಾಮಗಳಲ್ಲಿ ಕಂಡುಬರುವ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.

ಆ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಮುಂಚೂಣಿಯಲ್ಲಿ ನಿಲ್ಲಬೇಕು,” ಎಂದು ನ್ಯಾಯಾಧೀಶರು ಕಿವಿಮಾತು ಹೇಳಿದರು.

ಆಮಿಷಗಳ ಬಗ್ಗೆ ಎಚ್ಚರವಿರಲಿ:
ಕಾರ್ಯಕ್ರಮದಲ್ಲಿ ವಕೀಲ ಸಂಘದ ಅಧ್ಯಕ್ಷ ರಾಜಗೋಪಾಲ್ ಗೌಡ ಅವರು , ಮಾನವ ಕಳ್ಳಸಾಗಾಣಿಕೆ ತಡೆಗೆ ಇರುವ ಕಾಯ್ದೆಗಳ ಕುರಿತು ಸಮಗ್ರ ಮಾಹಿತಿ ನೀಡಿ, “ಉದ್ಯೋಗದ ಆಮಿಷ, ಮದುವೆಯ ನೆಪ ಅಥವಾ ಆರ್ಥಿಕ ಸಂಕಷ್ಟದ ಲಾಭ ಪಡೆದು ಅಪರಾಧ ಜಾಲಗಳು ಸಕ್ರಿಯವಾಗಿರುತ್ತವೆ. ಅಪರಿಚಿತರ ಬಗ್ಗೆ ಸದಾ ಎಚ್ಚರ ವಹಿಸುವುದು ಮತ್ತು ಮಕ್ಕಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ,” ಎಂದರು.

ಮತದಾನದ ಹಕ್ಕು ಚಲಾಯಿಸಿ:
ಇದೇ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾರರ ಜಾಗೃತಿ ಕಾರ್ಯಕ್ರಮವನ್ನೂ ನಡೆಸಲಾಯಿತು. ಸಾರ್ವಜನಿಕರು ಯಾವುದೇ ಆಮಿಷಗಳಿಗೆ ಒಳಗಾಗದೆ, ಸಂವಿಧಾನದತ್ತವಾದ ಮತದಾನದ ಹಕ್ಕನ್ನು ಪವಿತ್ರವಾಗಿ ಚಲಾಯಿಸುವ ಮೂಲಕ ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಗಣ್ಯರು ಕರೆ ನೀಡಿದರು.

ಗಮನಸೆಳೆದ ಜಾಗೃತಿ ಜಾಥಾ:
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾ ಸಾರ್ವಜನಿಕರ ಗಮನ ಸೆಳೆಯಿತು. ಮಾನವ ಕಳ್ಳಸಾಗಾಣಿಕೆಯಂತಹ ಪಿಡುಗಿನ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ನಾಗರಿಕರು ಸಾಮಾಜಿಕ ಜವಾಬ್ದಾರಿಯನ್ನು ಅರಿತು ಎಚ್ಚೆತ್ತುಕೊಳ್ಳುವಂತೆ ಪ್ರೇರೇಪಿಸಲಾಯಿತು.

ಇದನ್ನು ಓದಿದ್ದೀರಾ..?ಚಿಕ್ಕಬಳ್ಳಾಪುರ | ಶಿಂಗಾಡಿ ಕದಿರೇನಹಳ್ಳಿ ಗ್ರಾಮದ ದಲಿತರ ಭೂ ಸಮಸ್ಯೆಯನ್ನು ಕೂಡಲೇ ಇತ್ಯರ್ಥಪಡಿಸಬೇಕು ಎಂದು ಬೃಹತ್ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಜಯಲಕ್ಷ್ಮಿ ಎನ್.ಬಿ., ಸಿವಿಲ್ ನ್ಯಾಯಾಧೀಶರಾದ ಅಶ್ವಿನಿ, ಕೆಜಿಎಫ್ ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಲ್ ಗೌಡ, ಸಿಡಿಪಿಒ ರಾಜೇಶ್, ಬೇತಮಂಗಲ ಮಹಿಳಾ ಸಾಂತ್ವನ ಕೇಂದ್ರದ ಕಾರ್ಯದರ್ಶಿ ಗೋಪಾಲ್, ಜಿಲ್ಲಾ ಸ್ಥಳೀಯ ದೂರು ನಿರ್ವಹಣಾ ಸಮಿತಿ ಅಧ್ಯಕ್ಷರಾದ ವಿ.ಪವಿತ್ರ, ಸಬ್ ಇನ್ಸ್ಪೆಕ್ಟರ್ ತ್ಯಾಗರಾಜ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ, ಇಓ ವೆಂಕಟೇಶ್, ವಕೀಲರ ಸಂಘದ ಉಪಾಧ್ಯಕ್ಷ ಕೆ.ಸಿ. ನಾಗರಾಜ್, ಉಪ ತಹಸಿಲ್ದಾರ್ ಜಯರಾಮ್, ಗ್ರಾ.ಪಂ. ಕಾರ್ಯದರ್ಶಿ ರಾಜಣ್ಣ, ಬಿಲ್ ಕಲೆಕ್ಟರ್ ರಾಮಪ್ಪ ಹಾಗೂ ನೂರಾರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...