ಕೋಲಾರ | ಸರ್ಕಾರಿ ಶಾಲೆಗಳ ವಿಲೀನ ಕೈಬಿಡಿ, ಶಾಲೆ–ಅಂಗನವಾಡಿಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿ: ರೈತ ಸಂಘ ಆಗ್ರಹ

Date:

ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ಕೈಬಿಟ್ಟು, ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳ ದುರಸ್ತಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಶನಿವಾರ ಅಪರ ಜಿಲ್ಲಾಧಿಕಾರಿ ಮಂಗಳ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ. ನಳಿನಿಗೌಡ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಬದಲು ಖಾಸಗಿ ಶಾಲೆಗಳೊಂದಿಗೆ ವಿಲೀನಗೊಳಿಸುವ ಸರ್ಕಾರದ ನಿರ್ಧಾರ ಬಡ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ರಾಜ್ಯದಲ್ಲಿ ಅತಿ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ರಾಜಕಾರಣಿಗಳು ಮೊದಲು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲಿ. ಆಗ ಸರ್ಕಾರಿ ಶಾಲೆಗಳ ಗತವೈಭವ ಏನೆಂಬುದು ತಿಳಿಯಲಿದೆ. ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮರ್ಪಕವಾಗಿ ಸಮವಸ್ತ್ರ, ಪಠ್ಯಪುಸ್ತಕ, ಶೂ ಹಾಗೂ ಗುಣಮಟ್ಟದ ಊಟ ಒದಗಿಸಲು ಸಾಧ್ಯವಾಗದ ಸರ್ಕಾರಕ್ಕೆ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದರು.

ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸುವ ಇಚ್ಛಾಶಕ್ತಿ ಸರ್ಕಾರಕ್ಕಿದ್ದರೆ ರಾಜ್ಯದ ಕೈಗಾರಿಕಾ ಮಾಲೀಕರಿಂದ ಸಿಎಸ್‌ಆರ್ ಅನುದಾನ ಪಡೆದು ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗಳನ್ನು ಅಭಿವೃದ್ಧಿಪಡಿಸಲಿ ಎಂದು ಒತ್ತಾಯಿಸಿದರು.

ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ವಿಲೀನಗೊಳಿಸುವುದಾಗಲಿ, ಖಾಸಗಿ ಶಾಲೆಗಳ ಮುಂದೆ ಸರ್ಕಾರಿ ಶಾಲೆಗಳ ಹೆಸರನ್ನು ಸೇರಿಸುವುದಾಗಲಿ ಮಾಡಬಾರದು. ಮೊದಲು ಸರ್ಕಾರಿ ಶಾಲೆಗಳ ಹೆಸರಿನಲ್ಲಿ ನಡೆಯುತ್ತಿರುವ ಲೂಟಿಗೆ ಕಡಿವಾಣ ಹಾಕಿ, ಬಡ ಮಕ್ಕಳ ಶಿಕ್ಷಣವನ್ನು ಉಳಿಸಬೇಕು. ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು.

ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಗ್ರಾಮೀಣ ಭಾಗದ ರೈತರು ಹಾಗೂ ಕೂಲಿ ಕಾರ್ಮಿಕರನ್ನು ಸಂಘಟಿಸಿ ಶಿಕ್ಷಣ ಕ್ರಾಂತಿಯ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಮಂಗಳ ಅವರು, ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ರವಾನಿಸುವುದಾಗಿ ಭರವಸೆ ನೀಡಿದರು.


ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ಮರಗಲ್ ಶ್ರೀನಿವಾಸ್, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಗಿರೀಶ್, ರಾಜ್ಯ ಮುಖಂಡ ಕಮದಟ್ಟಿ ಚಲಪತಿ, ಮಂಜುನಾಥ್, ತಿಮ್ಮಣ್ಣ, ಪುತ್ತೇರಿ ರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾಮುವಿ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮದ ಆರೋಪ: ಉನ್ನತ ಅಧಿಕಾರಿಗಳ ಶಾಮೀಲು ಶಂಕೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕರಾಮುವಿ) ಪರೀಕ್ಷಾ ಕೇಂದ್ರಗಳಲ್ಲಿ ವ್ಯಾಪಕ ಅಕ್ರಮಗಳು...

ರಾಯಚೂರು | ವಸತಿ ಶಾಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿಗೆ ಜಾತಿನಿಂದನೆ ಆರೋಪ: ಸಮಗ್ರ ತನಿಖೆಗೆ ಎಸ್ಎಫ್ಐ ಆಗ್ರಹ

ನಗರದ ಗದ್ದಲ್ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಪರಿಶಿಷ್ಟ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡುವ ಪ್ರಸ್ತಾಪಕ್ಕೆ ಭೀಮಗರ್ಜನೆ ಸಂಘಟನೆ ವಿರೋಧ!

ದಕ್ಷಿಣ ಕನ್ನಡದ ಮೊಗೇರ ಮತ್ತು ಉತ್ತರ ಕನ್ನಡದ ಮೀನುಗಾರ ಮೊಗೇರ ಸಮುದಾಯಗಳು...

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ; ಕಾರವಾರದಲ್ಲಿ ದಸಂಸ ಬೃಹತ್ ಪ್ರತಿಭಟನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ವಿವಿಧ ಸಮಸ್ಯೆಗಳನ್ನು ಪರಿಹರಿಸಿ,...