ಕೋಲಾರ | ರೈತರ ಹತ್ಯೆ ಆರೋಪ: ಅರಣ್ಯಾಧಿಕಾರಿಗಳ ಬಂಧನಕ್ಕೆ ರೈತ ಸಂಘ ಆಗ್ರಹ

Date:

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ರೈತರ ಮೇಲೆ ಗುಂಡಿನ ದಾಳಿ ನಡೆಸಿ ಮೂವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಯಲ್ಲಿ ಭಾಗಿಯಾಗಿರುವ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ನಾಗವೇಣಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು

- Advertisement -

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಕೋಟಿಗಾನಹಳ್ಳಿ ಕೆ.ರಾಮಯ್ಯ ಮಾತನಾಡಿ, ದೇಶಕ್ಕೆ ಅನ್ನ ನೀಡುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಆದರೆ ಕಾರ್ಪೊರೇಟ್ ಸಂಸ್ಥೆಗಳಿಗೆ ಕಂಬಳಿ ಹಾಸಿ ಸ್ವಾಗತಿಸಲಾಗುತ್ತಿದೆ. ಇದರಿಂದ ಸರ್ಕಾರಗಳು ಯಾರ ಪರವಾಗಿವೆ ಎಂಬುದು ತಿಳಿಯುತ್ತದೆ. ರೈತರು ಒಗ್ಗಟ್ಟಾಗಿ ಬಂಡವಾಳಶಾಹಿ ನೀತಿಗಳ ವಿರುದ್ಧ ಹೋರಾಟ ನಡೆಸಿ, ರೈತ ವಿರೋಧಿ ಸರ್ಕಾರಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಂಘದ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ, ಅರಣ್ಯ ಪ್ರದೇಶದ ಅಂಚಿನಲ್ಲಿರುವ ಗ್ರಾಮಗಳ ರೈತರು ದನಕರುಗಳನ್ನು ಮೇಯಿಸಲು ಅರಣ್ಯ ಪ್ರದೇಶಕ್ಕೆ ತೆರಳುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ರೈತರಿಗೆ ತಿಳಿವಳಿಕೆ ನೀಡಿ ವಾಪಸ್ ಕಳುಹಿಸಬಹುದಾಗಿತ್ತು. ಆದರೆ ರೈತರ ಮೇಲೆ ಗುಂಡಿನ ದಾಳಿ ನಡೆಸಿ ಮೂವರು ಮೃತಪಟ್ಟಿರುವುದು ಖಂಡನೀಯ. ಪ್ರಕರಣದ ಕುರಿತು ಅಧಿಕಾರಿಗಳು ನೀಡುತ್ತಿರುವ ವಿವರಣೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಬೆಡ್‌ಶೆಟ್ಟಿಹಳ್ಳಿ ರಮೇಶ್ ಮಾತನಾಡಿ, ರೈತರು ಬೇಟೆಯಾಡಲು ಅರಣ್ಯ ಪ್ರದೇಶ ಪ್ರವೇಶಿಸಿದ್ದರೆ ಅವರನ್ನು ಬಂಧಿಸಲು ಕಾನೂನುಬದ್ಧ ಕ್ರಮ ಕೈಗೊಳ್ಳಬಹುದಿತ್ತು. ಆದರೆ ನೇರವಾಗಿ ಗುಂಡಿನ ದಾಳಿ ನಡೆಸಿರುವುದರಿಂದ ಘಟನೆಯ ಸಂಪೂರ್ಣ ಸತ್ಯಾಂಶ ಹೊರಬರಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ, ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಯಾವುದೇ ಹುದ್ದೆಯಲ್ಲಿ ಮುಂದುವರಿಸಬಾರದು ಎಂದು ಆಗ್ರಹಿಸಿದರು.

ಪ್ರಕರಣವನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರವಾಗಿ ತನಿಖೆ ನಡೆಸಬೇಕು. ಗುಂಡಿನ ದಾಳಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಹನೂರು ಶೂಟೌಟ್‌ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನ್ನೆಹೊಸಹಳ್ಳಿ ರಮೇಶ್, ಜಿಲ್ಲಾ ಉಪಾಧ್ಯಕ್ಷರಾದ ಹೊಳಲಿಹೊಸೂರು ಚಂದ್ರಪ್ಪ, ಗೋಪಾಲಕೃಷ್ಣ, ವಾನರಾಶಿ ಮುನಿವೆಂಕಟಪ್ಪ, ಅಬ್ಬಣಿ ಶ್ರೀನಿವಾಸ್, ಬೇವಹಳ್ಳಿ ಮಂಜುನಾಥ, ಮಾಲೂರು ತಾಲ್ಲೂಕು ಅಧ್ಯಕ್ಷ ತಿಪ್ಪಸಂದ್ರ ಹರೀಶ್, ಕೋಲಾರ ತಾಲ್ಲೂಕು ಅಧ್ಯಕ್ಷ ಚಿನ್ನಾಪುರ ಮಂಜುನಾಥ, ವಡಗೂರು ನಾಗರಾಜ್, ಸುಬ್ರಮಣಿ, ಶ್ಯಾಮಸುಂದರ್, ಎಂ.ಆರ್. ರಾಮಕೃಷ್ಣ, ಬೈರೇಗೌಡ, ನಾರಾಯಣಸ್ವಾಮಿ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...