ಕೋಲಾರ | ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ಕದಸಂಸ ಪ್ರತಿಭಟನೆ

Date:

ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಹಾಗೂ ವೈದ್ಯರು ಮತ್ತು ಸಿಬ್ಬಂದಿ ರೋಗಿಗಳ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಹಿಳಾ ಪದಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಮುಳಬಾಗಿಲು ತಾಲೂಕು ಅಧ್ಯಕ್ಷೆ ಸವಿತ, ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲದಲ್ಲಿ ಅಗತ್ಯ ಚಿಕಿತ್ಸೆ ಮತ್ತು ಸೌಲಭ್ಯಗಳು ದೊರೆಯುತ್ತಿಲ್ಲ ರಾತ್ರಿ ಕರ್ತವ್ಯದಲ್ಲಿರುವ ಗೃಹರಕ್ಷಕ ದಳದ ಸಿಬ್ಬಂದಿ ಮುರಳಿ ಅವರು ಮದ್ಯಪಾನ ಮಾಡಿ ಅಸಭ್ಯವಾಗಿ ಮಾತನಾಡಿ ನಿಂದಿಸುತ್ತಾರೆ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ...

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿ ಪ್ರದೇಶದ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ...

ಆಸ್ಪತ್ರೆಯ ಆವರಣದಲ್ಲಿ ನಾಯಿಗಳು ಅಡ್ಡಾಡುತ್ತಿದ್ದು, ರೋಗಿಗಳ ಸುರಕ್ಷತೆಗೆ ಅಪಾಯ ಎದುರಾಗಿದೆ. ಸಿಬ್ಬಂದಿ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಉತ್ತರ ನೀಡುತ್ತಿಲ್ಲ. ಹಣ ನೀಡಿದರೆ ಮಾತ್ರ ರೋಗಿಗಳ ಯೋಗಕ್ಷೇಮ ವಿಚಾರಿಸುತ್ತಾರೆ ಎಂದು ಆರೋಪಿಸಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ಪ್ರತಿಭಟನೆಯಲ್ಲಿ ಸಂಘಟನೆಯ ಗೌರವ ಅಧ್ಯಕ್ಷೆ ಶೈಲಾಜ ಹಾಗೂ ಪದಾಧಿಕಾರಿಗಳಾದ ಶ್ಯಾವಣಿ, ರಾಣಿ ಸೇರಿದಂತೆ ಹಲವರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...