ಕೋಲಾರ | ಮದನಹಳ್ಳಿಯಲ್ಲಿ ತಿಪ್ಪೆ ವಿಚಾರವಾಗಿ ಗಲಾಟೆ: ಐವರ ಮೇಲೆ ಹಲ್ಲೆ ಆರೋಪ

Date:

ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್ ಹಾಗೂ ಅವರ ಕುಟುಂಬಸ್ಥ ಕಡೆಯವರು ಗ್ರಾಮದ ಐವರ ಮೇಲೆ ದೊಣ್ಣೆ, ಕಬ್ಬಿಣದ ರಾಡು ಹಾಗೂ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

- Advertisement -

ಮದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಿಪ್ಪೆ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಗಲಾಟೆಗೆ ಕಾರಣವಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಗ್ರಾಮದ ಶ್ರೀನಿವಾಸ್, ಮಂಜುಳ, ಶಿವು, ಸಂದೀಪ್ ಮತ್ತು ಚಂದ್ರು ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಹಲ್ಲೆಯಿಂದ ಗಾಯಗೊಂಡ ಐವರನ್ನು ಕೋಲಾರ ನಗರದ ಹೊರವಲಯದಲ್ಲಿರುವ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮದಲ್ಲಿ ತಿಪ್ಪೆ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯವೇ ಗಲಾಟೆಗೆ ಕಾರಣ ಎನ್ನಲಾಗಿದ್ದು, ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ.

ಗ್ರಾಮದಲ್ಲಿ ನರಸಿಂಹನಾಯಕ್ ಅವರ ಕುಟುಂಬ ವಿನಾಕಾರಣ ಗಲಾಟೆ ಮಾಡುತ್ತಿದ್ದು, ಅವರ ವರ್ತನೆಯಿಂದ ಗ್ರಾಮದಲ್ಲಿ ಅಶಾಂತಿ ಉಂಟಾಗುತ್ತಿದೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಗ್ರಾಮದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನರಸಿಂಹನಾಯಕ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳ ಹೇಳಿಕೆ ಆಧರಿಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...