ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಿಸಿ: ರೈತ ಸಂಘ ಒತ್ತಾಯ

Date:

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಪಾಯಿಗಳ ಹಣಕಾಸು ಅಕ್ರಮಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ವೆಂಕಟೇಶ್ ವಿರುದ್ಧ ಕೇಳಿಬಂದಿರುವ ಲಂಚದ ಆರೋಪದ ವಿಡಿಯೋ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘ ಒತ್ತಾಯಿಸಿತು.

- Advertisement -

ನಗರದ ಡಿಸಿಸಿ ಬ್ಯಾಂಕ್ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದ ರೈತ ಸಂಘದ ಕಾರ್ಯಕರ್ತರು, ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಅಧ್ಯಕ್ಷ ಕೊತ್ತೂರು ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ. ನಳಿನಿಗೌಡ ಮಾತನಾಡಿ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಡಿಸಿಸಿ ಬ್ಯಾಂಕ್‌ನ ಸಾಲ ವಿತರಣೆ ಯಾವಾಗ ಪುನರಾರಂಭವಾಗಲಿದೆ ಎಂಬುದಕ್ಕೆ ನೂತನ ಅಧ್ಯಕ್ಷರು ಉತ್ತರ ನೀಡಬೇಕು. ಖಾಸಗಿ ಸಾಲಗಳಿಂದ ಮುಕ್ತರಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಬ್ಯಾಂಕ್‌ನ ಸಾಲ ಸೌಲಭ್ಯವನ್ನು ಅವಲಂಬಿಸಿರುವ ಗ್ರಾಮೀಣ ರೈತರು, ಕೂಲಿಕಾರ್ಮಿಕರು ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಾಲ ವಿತರಣೆ ಸ್ಥಗಿತಗೊಂಡಿರುವುದರಿಂದ ತೊಂದರೆಯಾಗಿದೆ. ಬ್ಯಾಂಕ್‌ನಲ್ಲಿ ಅಕ್ರಮ ಎಸಗಿರುವ ಅಧಿಕಾರಿಗಳು ಹಾಗೂ ಹಿಂದಿನ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳುವುದು ಯಾವಾಗ ಎಂದು ಪ್ರಶ್ನಿಸಿದರು.

ಲಕ್ಷಾಂತರ ರೈತರು, ಕೂಲಿಕಾರ್ಮಿಕರು ಹಾಗೂ ಮಹಿಳೆಯರ ಸ್ವಾಭಿಮಾನದ ಬದುಕಿಗೆ ನೆರವಾಗಿರುವ ಡಿಸಿಸಿ ಬ್ಯಾಂಕ್ ಅನ್ನು ಉಳಿಸಲು ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸಬೇಕು. ವ್ಯವಸ್ಥಾಪಕ ನಿರ್ದೇಶಕರ ನೇಮಕ ವಿಚಾರದಲ್ಲಿ ಜಿಲ್ಲೆಯ ಎರಡು ಗುಂಪುಗಳ ನಡುವೆ ಹೊಂದಾಣಿಕೆ ಇಲ್ಲದಿರುವುದು ಹಾಗೂ ಪ್ರತಿಷ್ಠೆಯ ರಾಜಕಾರಣದಿಂದ ಬ್ಯಾಂಕ್‌ನ ಆಡಳಿತದ ಮೇಲೆ ಪರಿಣಾಮ ಬೀರುತ್ತಿದೆಯೇ ಎಂಬ ಅನುಮಾನ ಮೂಡಿದೆ ಎಂದು ಆರೋಪಿಸಿದರು..

ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ರೈತರ ಸಾಲ ನವೀಕರಣಕ್ಕಾಗಿ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶ್ ಹಣ ಕೇಳಿದ್ದಾರೆ ಎಂಬ ಆರೋಪದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪ್ರಕರಣದ ಬಗ್ಗೆ ಬ್ಯಾಂಕ್ ಅಧ್ಯಕ್ಷರು ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿದರು.

ಬ್ಯಾಂಕ್ ಎಂ.ಡಿ ವೆಂಕಟೇಶ್ ಅವರನ್ನು ಪ್ರಾಮಾಣಿಕ ಮತ್ತು ನಿಷ್ಠಾವಂತ ಅಧಿಕಾರಿ ಎಂದು ಪರಿಗಣಿಸಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿತ್ತು. ನೇಮಕದ ವಿಚಾರವಾಗಿ ಪರ–ವಿರೋಧ ಚರ್ಚೆಗಳು ನಡೆದ ಬಳಿಕ ಲಂಚದ ಆರೋಪದ ವಿಡಿಯೊ ಬಹಿರಂಗವಾಗಿದೆ. ಈ ಆರೋಪದ ಸತ್ಯಾಸತ್ಯತೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಸತ್ಯಾಂಶವನ್ನು ಸಾರ್ವಜನಿಕರ ಮುಂದೆ ತರಬೇಕು. ಬ್ಯಾಂಕ್‌ನ ಹಿತದೃಷ್ಟಿಯಿಂದ ಅಧ್ಯಕ್ಷರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಹಿಂದಿನ ಅವಧಿಯಲ್ಲಿ ಪ್ರಭಾವಿಗಳು ಹಾಗೂ ಅಧಿಕಾರಿಗಳು ನಕಲಿ ಸ್ತ್ರೀಶಕ್ತಿ ಸಂಘಗಳನ್ನು ಸೃಷ್ಟಿಸಿ ಸುಮಾರು ₹500 ಕೋಟಿ ಬ್ಯಾಂಕ್ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪವನ್ನು ವಿಧಾನ ಪರಿಷತ್ ಸದಸ್ಯ ಅನಿಲ್‌ಕುಮಾರ್ ಈ ಹಿಂದೆ ಪ್ರಸ್ತಾಪಿಸಿದ್ದರು. ಈ ಆರೋಪವೂ ಸೇರಿದಂತೆ ಬ್ಯಾಂಕ್‌ನಲ್ಲಿನ ಹಣಕಾಸು ವ್ಯವಹಾರಗಳು ಮತ್ತು ರೈತರ ಸಾಲ ನವೀಕರಣಕ್ಕೆ ಸಂಬಂಧಿಸಿದ ಲಂಚದ ಆರೋಪದ ಕುರಿತು ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಹನುಮಯ್ಯ ಆಗ್ರಹಿಸಿದರು.

ಬ್ಯಾಂಕ್‌ನ ಹಣಕಾಸು ವ್ಯವಹಾರಗಳ ಪರಿಶೀಲನೆ ನಡೆಸಿ, ಅಕ್ರಮಗಳು ಸಾಬೀತಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ರೈತರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ಮತ್ತೆ ಸಾಲ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಂಡು ಬ್ಯಾಂಕ್‌ನ ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಬ್ಯಾಂಕ್ ವ್ಯವಸ್ಥಾಪಕರು, ರೈತರು, ಕೂಲಿಕಾರ್ಮಿಕರು ಹಾಗೂ ಮಹಿಳೆಯರ ನ್ಯಾಯಯುತ ಬೇಡಿಕೆಗಳನ್ನು ಬ್ಯಾಂಕ್ ಅಧ್ಯಕ್ಷರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.


ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ, ಕಮ್ಮದಟ್ಟಿ ಚಲಪತಿ, ಮಂಜುನಾಥ್, ಚಂದ್ರಪ್ಪ, ಯಾರಂಘಟ್ಟ ಗಿರೀಶ್, ರಾಜು, ನಾಗರಾಜ್, ಆಂಜಿನಪ್ಪ, ವೀರಭದ್ರಪ್ಪ, ತಿಮ್ಮಣ್ಣ, ಶೈಲಜ, ರತ್ನಮ್ಮ, ಶೋಭಾ, ಚೌಡಮ್ಮ, ರಾಧಾ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ, ತಾಂತ್ರಿಕ ಕೌಶಲ್ಯ ಬೆಳೆಸುವುದು ಅಗತ್ಯ: ಆರ್.ಎಸ್ ಬುರಡಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವುದರ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Gen Z ಪೀಳಿಗೆ ತನ್ನ ಶಕ್ತಿ ಪ್ರದರ್ಶಿಸಬೇಕು: ಪ್ರದೀಪ್ ಪಾಟೀಲ್

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ...

ವಿಜಯಪುರ | ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಬಳಸುವಂತೆ ಜಾಗೃತಿ ಅಭಿಯಾನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಹಾಗೂ ವಿವಿಧ...

ಕಳೆಗುಂದಿದ ದರಿಯಾ ದೌಲತ್: ಟಿಪ್ಪು ಅರಮನೆಯ ಮೂಲ ಸೌಂದರ್ಯ ಉಳಿಸುವ ಹೊಣೆ ಯಾರದ್ದು?

ನೂರಾರು ವರ್ಷಗಳ ಇತಿಹಾಸವನ್ನು ತನ್ನೊಳಗೆ ಹುದುಗಿಸಿಕೊಂಡಿರುವ ಐತಿಹಾಸಿಕ ಸ್ಮಾರಕವೊಂದು ಮೂಲ ಸೌಂದರ್ಯವನ್ನು...