ಕೋಲಾರ | ಸವರ್ಣೀಯ ಮಹಿಳೆಯಿಂದ ಹಲ್ಲೆ; ದಲಿತ ಯುವಕ ಆತ್ಮಹತ್ಯೆ

Date:

ಸವರ್ಣೀಯ ಮಹಿಳೆಯೊಬ್ಬರು ಪೊರಕೆಯಿಂದ ಹಲ್ಲೆ ನಡೆಸಿದರೆಂಬ ಕಾರಣಕ್ಕೆ ಮನನೊಂದ ದಲಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಉಳಗೆರೆ ಗ್ರಾಮದಲ್ಲಿ ನಡೆದಿದ್ದು, ನಾಲ್ವರ ವಿರುದ್ಧ ಆತ್ಮಹತ್ಯೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ದಲಿತ ಯುವಕ ಶ್ರೀನಿವಾಸ್ (32) ಮತ್ತು ಮೇಲ್ಜಾತಿಗೆ ಸೇರಿದ ಅಶೋಕ್ (32) ಇಬ್ಬರೂ ಸ್ನೇಹಿತರಾಗಿದ್ದು, ದಿನಗೂಲಿ ಕಾರ್ಮಿಕರಾಗಿದ್ದರು.

“ಶ್ರೀನಿವಾಸ್ ಎಂಬಾತ ಅಶೋಕ್ ಹೆಂಡತಿಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಅಶೋಕ್‌ ವಿರುದ್ಧ ಗದರಿದ್ದರು. ಇದರಿಂದ ಅಶೋಕ್ ತನ್ನ ಹೆಂಡತಿಯೊಂದಿಗೆ ಜಗಳವಾಡಿದ್ದಾನೆ. ಇದರಿಂದ ಕೋಪಗೊಂಡ ಮಂಜುಳಾ ತನ್ನ ಪತಿಯನ್ನು ಕರೆದುಕೊಂಡು ಶ್ರೀನಿವಾಸ್ ಮನೆ ಬಳಿ ಹೋಗಿ ನಿನ್ನಿಂದಲೇ ತಮ್ಮ ಕುಟುಂಬದಲ್ಲಿ ಸಮಸ್ಯೆ ಸೃಷ್ಟಿಯಾಗುತ್ತಿದೆ. ಇದಕ್ಕೆ ನೀನೆ ಕಾರಣವೆಂದು ಪೊರಕೆಯಿಂದ ಹಲ್ಲೆ ನಡೆಸಿದ್ದು, ಜಗಳ ಮಾಡಿ ಬಂದಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಗದಗ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಬಾಲಕ; ಪ್ರಕರಣ ಮುಚ್ಚಿಹಾಕುವ ಹುನ್ನಾರ?

“ಘಟನೆಯ ನಂತರ ಅವಮಾನ ಸಹಿಸಲಾಗದೆ ಮನನೊಂದ ಶ್ರೀನಿವಾಸ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಗಳ ಸಮುದಾಯದ ಅಶೋಕ್‌ ಹಾಗೂ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸರು ತಿಳಿಸಿರುವುದು ವರದಿಯಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕಾಂಗ್ರೆಸ್‌ ಮುಖಂಡರು-ಕಾರ್ಯಕರ್ತರ ನಡುವೆ ಗಲಾಟೆ

ಕಾಂಗ್ರೆಸ್‌ನ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ...

ಕೆಸಿ ವ್ಯಾಲಿ-ಎಚ್‌ಎನ್ ವ್ಯಾಲಿ ನೀರಿನ 3ನೇ ಹಂತದ ಸಂಸ್ಕರಣೆಗೆ ಆಗ್ರಹ; ಮಧ್ಯಸ್ಥಿಕೆಗೆ ರಾಜ್ಯಪಾಲರಿಗೆ ಮನವಿ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲವು ಕೆರೆಗಳಿಗೆ...

ಲೋಕಸಭಾ ಚುನಾವಣೆ | ಕೋಲಾರದಲ್ಲಿ ಕಾಂಗ್ರೆಸ್‌ ಒಳಬೇಗುದಿ ಮೈತ್ರಿಗೆ ಲಾಭವಾಗುತ್ತಾ?

ಸಚಿವ ಕೆ.ಎಚ್ ಮುನಿಯಪ್ಪ ಈ ಬಾರಿಯ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌...

ಕೋಲಾರ | ರಾಷ್ಟ್ರೀಯ ವಿಪತ್ತು ಘೋಷಣೆಗೆ ಪ್ರಾಂತ ರೈತ ಸಂಘ ಒತ್ತಾಯ

ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೂಡಲೇ ಅನುದಾನ...