ಕೋಲಾರ | ಬೆಟ್ಟಹೊಸಪುರ ಕ್ರಷರ್ ದುರಂತ: ಕಾರ್ಮಿಕನ ಸಾವಿನ ಪ್ರಕರಣವನ್ನು ಸಮಗ್ರ ತನಿಖೆಗೆ ಆಗ್ರಹ

Date:

ತಾಲೂಕಿನ ವೇಮಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೆಟ್ಟಹೊಸಪುರ ಗ್ರಾಮದ ಸಮೀಪದ ಆರ್.ಎಸ್. ರಾಕ್ ಜಲ್ಲಿ ಕ್ರಷರ್‌ನಲ್ಲಿ ಟಿಪ್ಪರ್ ಲಾರಿ ಕ್ವಾರಿಗೆ ಉರುಳಿ ಚಾಲಕ ಮೃತಪಟ್ಟ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಗತಿಪರ ಸಂಘಟನೆಗಳು ಒತ್ತಾಯಿಸಿದರು.

- Advertisement -

ಪಶ್ಚಿಮ ಬಂಗಾಳ ಮೂಲದ ಸುಬೇದ್ ಬ್ಯಾನರ್ಜಿ ಎಂಬ ಚಾಲಕ ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಕ್ರಷರ್ ನಲ್ಲಿನ ಕ್ವಾರಿಗೆ ಉರುಳಿದ ಪರಿಣಾಮ ಮೃತಪಟ್ಟಿದ್ದು ಶನಿವಾರ ಈ ಸಂಬಂಧಿಸಿದಂತೆ ವೇಮಗಲ್ ಪೋಲಿಸ್ ಠಾಣೆಯಲ್ಲಿ ಪ್ರಗತಿಪರ ಸಂಘಟನೆಗಳಿಂದ ದೂರು ನೀಡಿ ತನಿಖೆಗೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ದಲಿತ ದಮನಿತರ ಸೇವಾ ಸಮಿತಿ ರಾಜ್ಯಾಧ್ಯಕ್ಷ ಮೇಡಿಹಾಳ ಮುನಿಆಂಜಿನಪ್ಪ ಮಾತನಾಡಿ ಕ್ರಷರ್‌ನಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದು ಹಾಗೂ ಸೂಕ್ತವಾದ ತಡೆಗೋಡೆಗಳು ಇಲ್ಲದೇ ಇರುವುದರಿಂದಲೇ ಈ ದುರಂತಕ್ಕೆ ಕಾರಣವಾಗಿದೆ ಘಟನೆಯ ಬಳಿಕವೂ ಪ್ರಕರಣವನ್ನು ಸಾಮಾನ್ಯ ಅಪಘಾತವೆಂದು ಬಿಂಬಿಸಿ ಮಾಲೀಕ ಮೃತನ ಕುಟುಂಬಸ್ಥರಿಗೆ ಹಣದ ಆಮಿಷ ಒಡ್ಡಿ ದೂರನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ ರಾತ್ರಿ ವೇಳೆ ಕೆಲಸ ಮಾಡಲು ಅನುಮತಿ ಇಲ್ಲದೆ ಇದ್ದರು ಕೆಲಸವನ್ನು ಕಾನೂನು ಬಾಹಿರವಾಗಿ ಮಾಡಿಸಿದ್ದಾರೆ ಎಂದು ಆರೋಪಿಸಿದರು.

ಪ್ರಕರಣ ಸಂಬಂಧ ಕ್ರಷರ್ ಮಾಲೀಕರ ವಿರುದ್ಧ ಹಾಗೂ ನಿಯಮ ಪಾಲನೆಯಲ್ಲಿ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮೃತ ಕಾರ್ಮಿಕನ ಕುಟುಂಬಕ್ಕೆ ನ್ಯಾಯಯುತ ಪರಿಹಾರ ಹಾಗೂ ಸರ್ಕಾರದಿಂದ ಅಗತ್ಯ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ವೇಮಗಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಿ.ಪಿ. ಮಂಜು ಅವರಿಗೆ ಮನವಿ ಸಲ್ಲಿಸಿದ ಪ್ರಗತಿಪರ ಸಂಘಟನೆಯ ಮುಖಂಡರು ಪ್ರಕರಣವನ್ನು ಮರುಪರಿಶೀಲಿಸಿ ಅಗತ್ಯವಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..?ಮುಳಬಾಗಿಲು | ಪ್ರಯತ್ನ ಮತ್ತು ನಿರಂತರ ಅಭ್ಯಾಸವೇ ಯಶಸ್ಸಿನ ಮಂತ್ರ: ಗೋಪಿನಾಥ್‌ ಕರವಿ

ಈ ಸಂದರ್ಭದಲ್ಲಿ ರೈತ ಸಂಘದ ಕಲ್ವಮಂಜಲಿ ರಾಮುಶಿವಣ್ಣ, ಜಿ. ನಾರಾಯಣಸ್ವಾಮಿ, ನಾಗನಾಳ ಶಂಕರ್, ರಾಂಪುರ ಮುನಿರಾಜು, ಚನ್ನಪ್ಪನಹಳ್ಳಿ ನಾಗರಾಜ್, ಸುಳದೇನಹಳ್ಳಿ ವೆಂಕಟರಾಜು, ವೇಮಗಲ್ ಬಹದ್ದೂರ್ ಖಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...