ಕೋಲಾರ | ಅನರ್ಹರಿಗೆ ಭೂಮಿ ಮಂಜೂರು ಪ್ರಕರಣ; ಕಾಂಗ್ರೆಸ್‌ ಶಾಸಕನ ವಿರುದ್ಧ ತನಿಖೆಗೆ ಆದೇಶ

Date:

ಸರ್ಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ ನಂಜೇಗೌಡ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್‌ ಅನುಮತಿ ನೀಡಿದೆ.

- Advertisement -

2019ರರಲ್ಲಿ ಮಾಲೂರು ತಾಲೂಕು ಭೂ ಮಂಜೂರಾತಿ ಸಮಿತಿಗೆ ಶಾಸಕ ನಂಜೇಗೌಡ ಅಧ್ಯಕ್ಷರಾಗಿದ್ದರು. ಆ ವೇಳೆ, ಅವರು ಕೋಟ್ಯಾಂತರ ರೂ. ಮೌಲ್ಯದ ಸುಮಾರು 80 ಎಕರೆ ಸರ್ಕಾರಿ ಭೂಮಿಯನ್ನು ಮರಣ ಹೊಂದಿದ್ದವರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಕೋಲಾರದ ಕೆ ಸಿ ರಾಜಣ್ಣ ಎಂಬುವವರು ಶಾಸಕರ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ತಮ್ಮ ವಿರುದ್ಧದ ಆರೋಪ ಸುಳ್ಳು ಎಂದಿದ್ದ ಶಾಸಕ, ಪ್ರಕರಣವನ್ನು ರದ್ದುಗೊಳಿಸಬೇಕೆಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ತನಿಖೆಗೆ ಅನುಮತಿ ನೀಡಿದೆ.

“ಅರ್ಹರಲ್ಲದವರಿಗೆ ಸರ್ಕಾರಿ ಭೂಮಿಯನ್ನು ಹಂಚಿಕೆ ಮಾಡುವ ಮೂಲಕ ಜನಪ್ರತಿನಿಧಿಗಳು ತಮಗೆ ಕೊಟ್ಟಿರುವ ಅಧಿಕಾರಿವನ್ನು ದುರುಪಯೋಗ ಮಾಡಿಕೊಳ್ಳುವ ಪ್ರಕರಣಗಳಿಗೆ ಇದೂ ಉದಾಹರಣೆಯಾಗಿದೆ” ಎಂದು ನ್ಯಾಯಪೀಠ ಹೇಳಿದೆ. ಈ ಹಿಂದೆ, ಪ್ರಕರಣದ ತನಿಖೆಗೆ ಅವಕಾಶ ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

ಈ ಸುದ್ದಿ ಓದಿದ್ದೀರಾ?: ಹಸುಗಳನ್ನು ಇಸ್ಕಾನ್ ಮಾರಿದಷ್ಟು ಬೇರಾರು ಮಾರಿಲ್ಲ; ಬಿಜೆಪಿ ಸಂಸದೆ ಆರೋಪಕ್ಕೆ ಇಸ್ಕಾನ್ ಪ್ರತಿಕ್ರಿಯೆ

2004ರಲ್ಲಿ ಮೃತಪಟ್ಟಿದ್ದ ನಾರಾಯಣಪ್ಪ ಎಂಬುವರಿಗೆ 2019ರಲ್ಲಿ 1.39 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಅಲ್ಲದೆ, ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದಾರೆ ಎಂಬ ನೆಪವೊಡ್ಡಿ 40 ವರ್ಷದ ಆನಂದಗೌಡ ಎಂಬ ವ್ಯಕ್ತಿಗೆ ಜಮೀನು ಮಂಜೂರು ಮಾಡಲಾಗಿದೆ ಎಂದು ಕೆ.ಸಿ ರಾಜಣ್ಣ ದೂರಿನಲ್ಲಿ ವಿವರಿಸಿದ್ದರು. “ಇಂತಹ ಹಲವಾರು ಅಂಶಗಳನ್ನು ಪರಿಶೀಲಿಸಿದರೆ ಸಮಿತಿಯ ಅಧ್ಯಕ್ಷರಾಗಿದ್ದ ಶಾಸಕ ನಂಜೇಗೌಡ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ. ಜೊತೆಗೆ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ” ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

ಪ್ರಕರಣದಲ್ಲಿ ಈಗಾಗಲೇ ತಹಶೀಲ್ದಾರ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದೀಗ, ವಿಶೇಷ ನ್ಯಾಯಾಲಯದ ಆದೇಶದಂತೆ ಶಾಸಕರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...