ಕೋಲಾರ |ವಾಲ್ಮೀಕಿ ಪ್ರಶಸ್ತಿ ಆಯ್ಕೆಗೆ ಸಹಕರಿಸಿದ ಜಿಲ್ಲಾಧಿಕಾರಿಗೆ ಸಮುದಾಯದ ವತಿಯಿಂದ ಸನ್ಮಾನ

Date:

ಜಿಲ್ಲಾ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಮಾಲೂರು ಎನ್. ವೆಂಕಟರಾಮ್ ಅವರಿಗೆ ರಾಜ್ಯಮಟ್ಟದ ವಾಲ್ಮೀಕಿ ಪ್ರಶಸ್ತಿ ದೊರೆಯಲು ಹಾಗೂ ಜಿಲ್ಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಹಕರಿಸಿದ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅವರನ್ನು ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಗುರುವಾರ ಭೇಟಿ ನೀಡಿ ಸನ್ಮಾನಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್, ವೆಂಕಟರಾಮ್ ಅವರ ಸಮಾಜಸೇವೆ, ಸಾಧನೆ ಹಾಗೂ ನಡವಳಿಕೆಯನ್ನು ಪರಿಗಣಿಸಿ ಸರ್ಕಾರದ ನಿಯಮಾವಳಿಗಳ ಅನ್ವಯ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ. ಈ ಗೌರವ ಮತ್ತಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಲು ಪ್ರೇರಣೆಯಾಗಲಿ ಎಂದು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸ್ಕೃತಿ, ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ,...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ಪ್ರಶಸ್ತಿ ಪುರಸ್ಕೃತ ಮಾಲೂರು ಎನ್. ವೆಂಕಟರಾಮ್ ಮಾತನಾಡಿ, ಕಳೆದ 15 ವರ್ಷಗಳಿಂದ ರಾಜ್ಯಮಟ್ಟದ ವಾಲ್ಮೀಕಿ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿದ್ದೆ. ಈ ಬಾರಿ ಜಿಲ್ಲಾಧಿಕಾರಿ ರವಿಕುಮಾರ್ ಅವರು ಪ್ರಶಸ್ತಿಯ ಮಾನದಂಡಗಳನ್ನು ಪರಿಶೀಲಿಸಿ ಅರ್ಹತೆಯ ಆಧಾರದ ಮೇಲೆ ನನ್ನ ಅರ್ಜಿಯನ್ನು ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಪ್ರಶಸ್ತಿ ದೊರೆಯಲು ನೆರವಾಗಿದ್ದಾರೆ. ಅವರ ಸಹಕಾರಕ್ಕೆ ಸಮುದಾಯದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವುದು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ಎನ್. ಅಂಬರೀಷ್, ಬಾಲಗೋವಿಂದ್, ಕುಡುವನಹಳ್ಳಿ ಆನಂದ್, ಬೈರಂಡಹಳ್ಳಿ ನಾಗೇಶ್, ನರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಶಿಕ್ಷಣದ ಅವಕಾಶ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ: ಡಿಡಿಪಿಐ ಮಲ್ಲಿಕಾರ್ಜುನ

ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಕಂಡ ಶಿಕ್ಷಣವಂತ ಹಾಗೂ ಸಮಾನತೆಯ...

ಉಳ್ಳಾಲ | ಉಳ್ಳಾಲದ ಅಬ್ದುಲ್ ರೆಹಮಾನ್‌ಗೆ ಚಿನ್ನದ ಪದಕ; ರಾಷ್ಟ್ರಮಟ್ಟಕ್ಕೆ ಆಯ್ಕೆ

ಧಾರವಾಡದ ಆರ್‌.ಎನ್‌ ಶೆಟ್ಟಿ ಕ್ರೀಡಾಂಗಣದಲ್ಲಿ ನವೆಂಬರ್‌ 14, 15 ರಂದು ನಡೆದ...

ಶಿವಮೊಗ್ಗ | ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ : ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಲಿ

ರಕ್ತನಿಧಿ ಕೇಂದ್ರಗಳಲ್ಲಿ ಸಂಗ್ರಹಿಸುವ ರಕ್ತ ವ್ಯರ್ಥವಾಗುವುದನ್ನು ತಡೆಗಟ್ಟಿ, ಸಮರ್ಪಕ ಬಳಕೆಯಾಗುವ ಕಡೆ...

ರಾಯಚೂರು | ಸಾಲ ವಸೂಲಿಗೆ ಹಲ್ಲೆ, ಜಾತಿನಿಂದನೆ ಆರೋಪ;ಕಾನೂನು ಕ್ರಮಕ್ಕೆ ಆಗ್ರಹ

ಟಿಪ್ಪರ್ ವಾಹನ ಖರೀದಿಗೆ ಶ್ರೀ ರಾಮ ಫೈನಾನ್ಸ್ ಸಾಲ ನೀಡಿದ್ದು ಸಾಲ...