ಕೋಲಾರ | ಪ್ರಜಾಪ್ರಭುತ್ವ, ಮತದಾನ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಹೋರಾಟ: ಎಐಸಿಸಿ ವೀಕ್ಷಕಿ ದೀಪ್ತಿ ವರ್ಗೀಸ್

Date:

ದೇಶದಲ್ಲಿ 13 ಕೋಟಿಗೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ತೆಗೆದುಹಾಕಿದ್ದು, ಪ್ರಜಾಪ್ರಭುತ್ವ ಮತ್ತು ಜನರ ಮತದಾನದ ಹಕ್ಕು ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷ ದೇಶದಾದ್ಯಂತ ಪ್ರಜಾಪ್ರಭುತ್ವ ಉಳಿಸಿ ಆಂದೋಲನ ಹಮ್ಮಿಕೊಂಡಿದೆ ಎಂದು ಎಐಸಿಸಿ ವೀಕ್ಷಕಿ ದೀಪ್ತಿ ಮೇರಿ ವರ್ಗೀಸ್ ತಿಳಿಸಿದರು.

- Advertisement -

ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೋಟ್‌ ಬಚಾವೋ–ದೇಶ್ ಬಚಾವೋ ಎಂಬ ಜನಾಂದೋಲನವನ್ನು ದೇಶದಾದ್ಯಂತ ರೂಪಿಸಲಾಗುತ್ತಿದೆ. ಮತದಾನದ ಹಕ್ಕು ಕಿತ್ತುಕೊಳ್ಳುತ್ತಿರುವ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಮತದಾರರ ಪಟ್ಟಿಯ ದುರ್ಬಳಕೆ ಹಾಗೂ ಅಕ್ರಮ ಮೊದಲು ಬೆಳಕಿಗೆ ಬಂದಿದ್ದೇ ಕರ್ನಾಟಕದ ಮಹಾದೇವಪುರ ಕ್ಷೇತ್ರದಲ್ಲಿ. ಅಲ್ಲಿ 1 ಲಕ್ಷಕ್ಕೂ ಅಧಿಕ ಮತಗಳನ್ನು ಅಕ್ರಮವಾಗಿ ತೆಗೆದುಹಾಕಲಾಗಿತ್ತು. ಈ ಬಗ್ಗೆ ರಾಹುಲ್ ಗಾಂಧಿ ಗಂಭೀರವಾಗಿ ದನಿ ಎತ್ತಿದ್ದರು. ಅದಾದ ಬಳಿಕ ಮಹಾರಾಷ್ಟ್ರದ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳ ನಡುವಿನ ಅವಧಿಯಲ್ಲಿ ಸುಮಾರು 39 ಲಕ್ಷ ಮತದಾರರ ಹೆಸರನ್ನು ಏಕಾಏಕಿ ಕೈಬಿಡಲಾಗಿದೆ. ಈ ಎಲ್ಲಾ ಅಕ್ರಮಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಮಾಧ್ಯಮಗಳ ಮುಂದೆ ರಾಹುಲ್ ಗಾಂಧಿ ಬಹಿರಂಗಪಡಿಸಿದ್ದರೂ, ಚುನಾವಣಾ ಆಯೋಗವು ಕಣ್ಣು ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು.

Advertisements

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿಲ್ಲ; ಬದಲಾಗಿ ಕೇಂದ್ರದ ಬಿಜೆಪಿ ಸರ್ಕಾರದ ಕಟ್ಟುಪಾಡುಗಳಿಗೆ ತಕ್ಕಂತೆ ನಡೆಯುತ್ತಿದ್ದಾರೆ. ಫಾರಂ ಸಂಖ್ಯೆ 6 ರ ತಿದ್ದುಪಡಿ ಸೇರಿದಂತೆ ಹಲವು ನಿರ್ಧಾರಗಳಿಗೆ ಚುನಾವಣಾ ಆಯೋಗದ ಇಬ್ಬರು ಆಯುಕ್ತರೇ 14ಕ್ಕೂ ಹೆಚ್ಚು ಬಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಗಮನಕ್ಕೆ ತರದೆ ಮಾಡಲಾದ ಬದಲಾವಣೆಗಳನ್ನು ಸುಪ್ರೀಂ ಕೋರ್ಟ್ ಕೂಡ ಅಮಾನ್ಯಗೊಳಿಸಿದೆ. ಆದ್ದರಿಂದ, ಅಕ್ರಮಗಳಿಗೆ ಹೊಣೆ ಹೊತ್ತು ಮುಖ್ಯ ಚುನಾವಣಾ ಆಯುಕ್ತ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ವಿರೋಧ ಪಕ್ಷವಾಗಿ ಕಾಂಗ್ರೆಸ್ ಹೋರಾಡುತ್ತಿದ್ದು, ಮತದಾನದ ಹಕ್ಕು ಕಳೆದುಕೊಂಡ ಸಾಮಾನ್ಯ ಜನರು ಏಕೆ ಪ್ರತಿಭಟಿಸುತ್ತಿಲ್ಲ ಎಂಬ ಪ್ರಶ್ನೆಗೆ, ಮೊದಲು ಅನ್ಯಾಯಕ್ಕೊಳಗಾದ ಜನರು ನಮ್ಮನ್ನು ಸಂಪರ್ಕಿಸಿದರು, ನಂತರವೇ ನಮಗೆ ಈ ಅಕ್ರಮದ ವಿಚಾರ ತಿಳಿಯಿತು. ಮಹಾರಾಷ್ಟ್ರ ಮತ್ತು ಮಹಾದೇವಪುರದಲ್ಲೂ ಮೊದಲು ಜನರೇ ನಮಗೆ ಮಾಹಿತಿ ನೀಡಿದರು. ಪಶ್ಚಿಮ ಬಂಗಾಲದಲ್ಲಿ ಜನರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ, ಜನರು ಧ್ವನಿ ಎತ್ತುತ್ತಿಲ್ಲ ಎಂಬುದು ತಪ್ಪು ಅಭಿಪ್ರಾಯ. ರಾಹುಲ್ ಗಾಂಧಿ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಮಾಧ್ಯಮಗಳ ಮುಂದೆ ವಿಷಯ ಮಂಡಿಸಿದ ಮೇಲೂ ಚುನಾವಣಾ ಆಯೋಗ ಮೌನ ವಹಿಸಿದಾಗ, ನಾವು ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಯಿತು ಎಂದರು.

ಬಾಂಗ್ಲಾದೇಶಿಯರು ಸೇರಿದಂತೆ ಅಕ್ರಮ ವಲಸಿಗರು ಮತ್ತು ಮೃತರ ಮತದಾರರ ಹೆಸರನ್ನು ಪಟ್ಟಿಯಿಂದ ತೆರವುಗೊಳಿಸುವ ಕಾರ್ಯ ನಡೆದಿದೆ ಎಂಬ ಪ್ರಶ್ನೆಗೆ, ಒಂದು ವೇಳೆ ಬಾಂಗ್ಲಾದೇಶಿ ಅಕ್ರಮ ವಲಸಿಗರಿದ್ದರೆ ಆಕ್ಷೇಪವಿಲ್ಲ, ಅವರ ಹೆಸರನ್ನು ತೆರವುಗೊಳಿಸಲಿ. ಆದರೆ, ನಿರ್ದಿಷ್ಟ ಧರ್ಮದ ಮತಗಳನ್ನು ಅಳಿಸಿಹಾಕುವ ಹುನ್ನಾರ ನಡೆದಿದೆ ಎಂದು ಹೇಳಿದರು.

ಮತದಾರರ ಪಟ್ಟಿಯ ಅಕ್ರಮದ ಕುರಿತು ಜನಸಾಮಾನ್ಯರಿಗೆ ಮನವರಿಕೆ ಮಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆಯೇ ಎಂಬುದಕ್ಕೆ, ಜನಸಾಮಾನ್ಯರು, ಕೂಲಿ ಕಾರ್ಮಿಕರು ತಮ್ಮ ಮತದಾನದ ಹಕ್ಕು ರದ್ದಾಗಿರುವ ಬಗ್ಗೆ ಸಂಪೂರ್ಣ ಜಾಗೃತರಾಗಿಲ್ಲ. ಹೀಗಾಗಿಯೇ, ಬೂತ್, ಬ್ಲಾಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ಜಾಗೃತಿ ಆಂದೋಲನ ಆರಂಭಿಸಿದ್ದೇವೆ ಎಂದರು.

ನ.1 ರಂದು ದೆಹಲಿಯಲ್ಲಿ ಬೃಹತ್ ರಾಲಿ ಹಾಗೂ ನ. 25 ರಂದು ದೇಶದಾದ್ಯಂತ ಲಕ್ಷಾಂತರ ಕಾರ್ಯಕರ್ತರ ಭಾಗವಹಿಸುವಿಕೆಯೊಂದಿಗೆ ಬೃಹತ್‌ ರಾಲಿ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಬೀದಿಗಿಳಿದು ಹೋರಾಟ ಮುಂದುವರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.


ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌, ಕೆಪಿಸಿಸಿ ಪದಾಧಿಕಾರಿ ಮಧುಸೂದನ್, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಹೇಮಮಾಲಿನಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ವೈ.ಶಿವಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್‌ ಅಫ್ಸರ್‌, ಹಿರಿಯ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ ಇದ್ದರು

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಡಿವೈಎಸ್ಪಿ ರಘು ಎನ್ ನೇತೃತ್ವದಲ್ಲಿ ವಾಹನ ತಪಾಸಣೆ

ಇತ್ತೀಚೆಗೆ ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳ ಬೆನ್ನೆಲೆಯಲ್ಲಿ, ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು...

ಬಾಗೇಪಲ್ಲಿ | ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ವಾಲ್ಮೀಕಿ ಜಯಂತಿ ಸಭೆಗೆ ಕಪ್ಪು ಪಟ್ಟಿ ಧರಿಸಿ ಬಹಿಷ್ಕಾರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಆದ್ದರಿಂದ ವಾಲ್ಮೀಕಿ...

ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ...

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...