ಕೋಲಾರ | ಕಾಂಗ್ರೆಸ್‌ ಮುಖಂಡನ ಕೊಲೆ; ಶ್ರೀನಿವಾಸಪುರ ಬಂದ್

Date:

ಕಾಂಗ್ರೆಸ್ ಮುಖಂಡ, ದಲಿತ ನಾಯಕ ಶ್ರೀನಿವಾಸ ಕೊಲೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಮಂಗಳವಾರ ಶ್ರೀನಿವಾಸಪುರ ತಾಲೂಕು ಬಂದ್‌ ನಡೆಸಿವೆ. ತಾಲೂಕಿನಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

- Advertisement -

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತರಾಗಿದ್ದ ಶ್ರೀನಿವಾಸ್‌ ಅವರನ್ನು ಅಕ್ಟೋಬರ್ 23ರಂದು ದುಷ್ಕರ್ಮಿಗಳ ಗುಂಪು ಕೊಲೆ ಮಾಡಲಾಗಿತ್ತು. ಅವರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿ ಶ್ರೀನಿವಾಸಪುರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದೆ. ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿದ್ದು, ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರತಿಭಟನಾಕಾರರು ಬೈಕ್ ರ್‍ಯಾಲಿ ನಡೆಸಿ ಬಂದ್‌ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರಲ್ಲಿ ಮನವಿ ಮಾಡಿದ್ದಾರೆ. ಅವರ ಮನವಿಯಂತೆ ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚಿ, ಬೆಂಬಲ ವ್ಯಕ್ತಪಡಿಸಿದ್ದಾರೆ.

ಶ್ರೀನಿವಾಸ್ ಅವರು ತಮ್ಮ ತೋಟದ ಬಳಿ ತಮ್ಮ ಸಂಗಡಿಗರೊಂದಿಗೆ ಕುಳಿತಿದ್ದಾಗ ಆರು ಮಂದಿ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಶ್ರೀನಿವಾಸ್ ಅವರ ಜೊತೆಗಿದ್ದ ಅಮರ್ ಹಾಗೂ ಕೃಷ್ಣಪ್ಪ ಎಂಬವರು ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದರು.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...