ಕೋಲಾರ | ಜಂತರ್ ಮಂತರ್‌ನಲ್ಲಿ ಹಲ್ಲೆ ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ನಗರದಲ್ಲಿ ಪಂಜಿನ ಮೆರವಣಿಗೆ

Date:

ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಾಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವಿಭಾಗದ ವತಿಯಿಂದ ಗುರುವಾರ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

- Advertisement -

ನಗರದ ವಾಲ್ಮೀಕಿ ವೃತ್ತದಿಂದ ಪ್ರಾರಂಭವಾಗಿ ಎಂಜಿ ರಸ್ತೆ ಮೂಲಕ ಗಾಂಧಿವನದವರಗೆ ಮೆರವಣಿಗೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾ ಅಧ್ಯಕ್ಷ ಎನ್ ಅಂಬರೀಶ್ ಮಾತನಾಡಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಸಂವಿಧಾನ ನೀಡಿರುವ ಪ್ರತಿಭಟನೆಯ ಹಕ್ಕನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ವಿರೋಧದ ಧ್ವನಿಯನ್ನು ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ದೇಶದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಇಂತಹ ನೂರು ಪ್ರತಿರೋಧ ವ್ಯಕ್ತಪಡಿಸಿದರು ಜಯ ಖಂಡಿತವಾಗಿ ಸತ್ಯಕ್ಕೆ ಇದೆ ಹೋರಾಟಗಾರನ್ನು ಧಮನ ಮಾಡಿದಷ್ಟು ಪ್ರತಿರೋಧ ಹೆಚ್ಚಾಗುತ್ತದೆ ಕೂಡಲೇ ಕೇಂದ್ರ ಶಿಕ್ಷಣ ಮಂತ್ರಿ ರಾಜೀನಾಮೆ ನೀಡಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವರನ್ನು ಬಂಧಿಸಿ ವಿಧ್ಯಾರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ರೈತರ ತೀರ್ಮಾನಕ್ಕೆ ಇನ್ನೆರಡು ತಿಂಗಳ ಕಾಲಾವಕಾಶ : ಶಾಸಕ ಕೊತ್ತೂರು ಮಂಜುನಾಥ್

ಪ್ರತಿಭಟನೆಯಲ್ಲಿ ಮುಖಂಡರಾದ ಮಾಲೂರು ವೆಂಕಟರಾಮ್, ಟಿ.ವಿಜಯಕುಮಾರ್, ಪಂಡಿತ್ ಮುನಿವೆಂಕಟಪ್ಪ, ಅಬ್ದುಲ್ ಖಯ್ಯಾಮ್, ಮೈಲಾಂಡಹಳ್ಳಿ ಮುರಳಿ, ಕುಡುವನಹಳ್ಳಿ ಆನಂದ್, ಮಾಲೂರು ಅಬ್ಬಯ್ಯಪ್ಪ, ಕಡಗುರು ತಿಮ್ಮರಾಯಪ್ಪ, ಬಂಗಾರಪೇಟೆ ನಾರಾಯಣಸ್ವಾಮಿ, ಅಮರನಾಥ್, ಬಾಲು, ಅಡ್ಡಗಲ್ ನರೇಶ್, ಮುಳಬಾಗಿಲು ಪ್ರಕಾಶ್, ಬೈರಂಡಹಳ್ಳಿ ನಾಗೇಶ್, ಕಲ್ಲಮಂಜಲಿ ದೇವರಾಜ್, ರವಿ, ಕೃಷ್ಣಾಪುರ ನರೇಶ್, ವಕ್ಕಲೇರಿ ನಾಗೇಂದ್ರ, ಬಾಬು, ಚಿನ್ನಾಪುರ ನಾರಾಯಣಸ್ವಾಮಿ, ಮಂಜುನಾಥ್, ಪಿಳ್ಳಪ್ಪ, ಸಂಪತ್ ವಾಸು, ಸೇರಿದಂತೆ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಪದಾಧಿಕಾರಿಗಳು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...