ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ಸಹಕರಿಸಲಿ: ಅನಿಲ್‌ಕುಮಾರ್ ಒತ್ತಾಯ

Date:

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿರುವ ಹಣಕಾಸು ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಯಬೇಕು. ತನಿಖೆಗಳಿಗೆ ತಡೆಯಾಜ್ಞೆ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥ ಆಗಬೇಕು. ಬ್ಯಾಂಕ್‌ನ ಹಿತದೃಷ್ಟಿಯಿಂದ ಮಾಜಿ ಅಧ್ಯಕ್ಷರೂ ಆಗಿರುವ ಹಾಲಿ ನಿರ್ದೇಶಕ ಬ್ಯಾಲಹಳ್ಳಿ ಗೋವಿಂದಗೌಡರು ತನಿಖೆಗೆ ಸಹಕರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್‌ಕುಮಾರ್ ಒತ್ತಾಯಿಸಿದರು.

- Advertisement -

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಡಿಸಿಸಿ ಬ್ಯಾಂಕ್‌ಗೆ ಸಂಬಂಧಿಸಿದಂತೆ ಹಲವು ಬೆಳವಣಿಗೆಗಳು ನಡೆದಿವೆ. ಆಡಳಿತ ಮಂಡಳಿ ಚುನಾವಣೆ, ವ್ಯವಸ್ಥಾಪಕ ನಿರ್ದೇಶಕರು (ಎಂಡಿ), ವಿಶೇಷಾಧಿಕಾರಿಗಳ ನೇಮಕ, ಲೋಕಾಯುಕ್ತ ತನಿಖೆ, ಸಿಒಡಿ ತನಿಖೆ, ರಿಆಡಿಟ್‌ ಹಾಗೂ ಹಣಕಾಸು ವ್ಯವಹಾರಗಳ ತನಿಖೆಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ನ್ಯಾಯಾಲಯಗಳಲ್ಲಿವೆ. ಕೆಲವು ಪ್ರಕರಣಗಳಲ್ಲಿ ತಡೆಯಾಜ್ಞೆ ನೀಡಲಾಗಿದ್ದು, ಇನ್ನು ಕೆಲವು ವಿಚಾರಣೆ ಹಂತದಲ್ಲಿವೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಣಕಾಸು ಅಕ್ರಮಗಳ ಆರೋಪಗಳ ತನಿಖೆಗೂ ತಡೆಯಾಜ್ಞೆ ತಂದಿದ್ದಾರೆ. ಈ ಪ್ರಕರಣ ಇತ್ಯರ್ಥ ಹಾಗೂ ತನಿಖೆಗೆ ಸಹಕಾರ ಅಗತ್ಯವಾಗಿದೆ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ತನಿಖೆಯಿಂದ ಸತ್ಯಾಂಶ ಹೊರಬರಲಿ: ಬ್ಯಾಲಹಳ್ಳಿ ಗೋವಿಂದಗೌಡರು ಹತ್ತು ವರ್ಷ ಬ್ಯಾಂಕ್‌ಗಾಗಿ ಶ್ರಮಿಸಿರುವುದಾಗಿ ಹೇಳುತ್ತಾರೆ. ಅವರ ಸೇವೆಯನ್ನು ಗೌರವಿಸುತ್ತೇವೆ. ಆದರೆ, ಆ ಅವಧಿಯಲ್ಲಿ ಹಣಕಾಸು ವ್ಯವಹಾರಗಳಲ್ಲಿ ಅಥವಾ ಅಧಿಕಾರಿಗಳ ಮಟ್ಟದಲ್ಲಿ ಯಾವುದೇ ಲೋಪಗಳಾಗಿದ್ದರೆ ಅವುಗಳೂ ತನಿಖೆಯಿಂದ ಹೊರಬರಬೇಕು. ಅಕ್ರಮಗಳು ನಡೆದಿವೆಯೇ ಎಂಬುದನ್ನು ದಾಖಲೆಗಳ ಆಧಾರದಲ್ಲಿ ಪರಿಶೀಲಿಸಬೇಕು. ಅದಕ್ಕೆ ಸಹಕಾರ ಕೊಡಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತನಿಖೆ ನಡೆದು ತಪ್ಪಿಲ್ಲದಿದ್ದರೆ ಆರೋಪಗಳಿಂದ ಮುಕ್ತವಾಗಬಹುದು. ಹೀಗಾಗಿ, ತನಿಖೆಗೆ ಸಹಕರಿಸುವುದರಲ್ಲಿ ಹಿಂಜರಿಯುವ ಅಗತ್ಯವಿಲ್ಲ ಎಂದು ಹೇಳಿದರು.

ಬ್ಯಾಂಕ್‌ನ ಹಣಕಾಸು ವ್ಯವಹಾರಗಳ ಮರುಪರಿಶೀಲನೆಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ತನಿಖೆಯಿಂದ ಸತ್ಯಾಂಶ ಹೊರಬಂದರೆ ಬ್ಯಾಂಕ್‌ನ ವಿಶ್ವಾಸಾರ್ಹತೆ ಹೆಚ್ಚಲಿದೆ. ಆರೋಪಗಳ ಬಗ್ಗೆ ಸ್ಪಷ್ಟತೆ ದೊರೆಯುವುದರಿಂದ ಠೇವಣಿದಾರರು, ರೈತರು ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಲ್ಲಿಯೂ ವಿಶ್ವಾಸ ಮೂಡಲು ಸಾಧ್ಯವಾಗುತ್ತದೆ ಎಂದರು.

ಸ್ವಸಹಾಯ ಗುಂಪುಗಳ ಸಾಲದಲ್ಲೂ ಅಕ್ರಮದ ಆರೋಪ: ಮಹಿಳಾ ಸ್ವಸಹಾಯ ಗುಂಪುಗಳಿಗೆ ನೀಡುವ ಬಡ್ಡಿರಹಿತ ಸಾಲಕ್ಕೆ ಸಂಬಂಧಿಸಿದ ಬಡ್ಡಿ ಸಹಾಯಧನದ ಬೇಡಿಕೆ ಸಲ್ಲಿಕೆಯಲ್ಲಿ ವ್ಯತ್ಯಾಸಗಳಾಗಿರುವ ಆರೋಪಗಳಿವೆ. ರಾಜ್ಯ ಸರ್ಕಾರದಿಂದ ಬರಬೇಕಾದ ಬಡ್ಡಿ ಸಹಾಯಧನವನ್ನು ಹೆಚ್ಚಾಗಿ ನಮೂದಿಸಿ ಬೇಡಿಕೆ ಸಲ್ಲಿಸಿರುವ ಪ್ರಕರಣಗಳು ಕೆಲವು ಸಹಕಾರ ಸಂಘಗಳಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ. ಈ ಕುರಿತು ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ, ಸತ್ಯಾಂಶವನ್ನು ಬಹಿರಂಗಪಡಿಸಬೇಕ ಎಂದು ಒತ್ತಾಯಿಸಿದರು.

ಚಿಂತಾಮಣಿ ತಾಲ್ಲೂಕಿನ ಕೆಲವು ಮಹಿಳಾ ಸ್ವಸಹಾಯ ಗುಂಪುಗಳ ಹೆಸರಿನಲ್ಲಿ ಸಾಲ ಮಂಜೂರಾಗಿರುವ ದಾಖಲೆಗಳಿದ್ದರೂ, ಫಲಾನುಭವಿಗಳಿಗೆ ಹಣ ತಲುಪಿಲ್ಲ ಎಂಬ ಆರೋಪಗಳಿವೆ. ಈ ಸಂಬಂಧ ಕೆಲವು ಮಹಿಳೆಯರು ಪೊಲೀಸ್ ಠಾಣೆಗಳಿಗೆ ತೆರಳಿ ದೂರು ನೀಡಿದ್ದಾರೆ. ಕೋಲಾರ ಶಾಖೆ ಸೇರಿದಂತೆ ವಿವಿಧ ಶಾಖೆಗಳಲ್ಲಿ ಹಣಕಾಸು ದುರುಪಯೋಗ ನಡೆದಿರುವ ಆರೋಪಗಳೂ ಕೇಳಿಬಂದಿವೆ. ಈ ಎಲ್ಲ ಆರೋಪಗಳ ಬಗ್ಗೆಯೂ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಹೇಳಿದರು.

ಬ್ಯಾಂಕ್‌ನಲ್ಲಿ ಸಾರ್ವಜನಿಕರು ಠೇವಣಿ ಇಟ್ಟಿರುವ ಹಣವನ್ನು ಬಡ್ಡಿ ಸಹಿತ ಹಿಂದಿರುಗಿಸುವ ಜವಾಬ್ದಾರಿ ಆಡಳಿತ ಮಂಡಳಿಯ ಮೇಲಿದೆ. ನಬಾರ್ಡ್ ಮತ್ತು ಅಪೆಕ್ಸ್ ಬ್ಯಾಂಕ್‌ಗಳಿಂದ ಪಡೆದ ಸಾಲವನ್ನೂ ಮರುಪಾವತಿಸಬೇಕಿದೆ. ಹೀಗಾಗಿ, ಹಣಕಾಸು ಅಕ್ರಮಗಳ ಆರೋಪಗಳನ್ನು ನಿರ್ಲಕ್ಷಿಸುವುದು ಬ್ಯಾಂಕ್‌ನ ಭವಿಷ್ಯದ ದೃಷ್ಟಿಯಿಂದ ಸೂಕ್ತವಲ್ಲ. ರೈತರಿಗೆ ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ಮುಂದುವರಿಯಬೇಕಾದರೆ ಬ್ಯಾಂಕ್‌ನ ಆರ್ಥಿಕ ಸ್ಥಿತಿ ಸುಧಾರಿಸಬೇಕು ಎಂದು ತಿಳಿಸಿದರು.

ಆಡಳಿತ ಮಂಡಳಿ ಚುನಾವಣೆ ವಿಳಂಬ: ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆ ವಿಳಂಬವಾಗಲು ಸಹಕಾರ ಕಾಯ್ದೆಯ ನಿಯಮಗಳು, ಅನರ್ಹ ಮತದಾರರಿಗೆ ನೋಟಿಸ್ ನೀಡುವ ಪ್ರಕ್ರಿಯೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಮತ್ತು ಮಂಚೇನಹಳ್ಳಿ ತಾಲ್ಲೂಕುಗಳಿಗೆ ನಿರ್ದೇಶಕ ಸ್ಥಾನ ಕಲ್ಪಿಸುವ ವಿಚಾರಗಳು ಕಾರಣವಾಗಿವೆ. ಈ ಸಂಬಂಧದ ಪ್ರಕರಣಗಳು ನ್ಯಾಯಾಲಯಗಳಲ್ಲಿರುವುದರಿಂದಲೂ ಚುನಾವಣೆ ಪ್ರಕ್ರಿಯೆಗೆ ವಿಳಂಬವಾಗಿತ್ತು ಎಂದು ವಿವರಿಸಿದರು.

ಚುನಾಯಿತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಯಾಂಕ್‌ನ ಕಾರ್ಯನಿರ್ವಹಣೆಗೆ ಸೂಕ್ತ ಅವಕಾಶ ನೀಡಬೇಕು. ಹಿಂದಿನ ಆಡಳಿತ ಮಂಡಳಿಯ ಅವಧಿಯ ಹಣಕಾಸು ವ್ಯವಹಾರಗಳನ್ನು ಪರಿಶೀಲಿಸುವುದರ ಜತೆಗೆ, ಹೊಸ ಆಡಳಿತ ಮಂಡಳಿಯೂ ಬ್ಯಾಂಕ್‌ನ ಹಿತಾಸಕ್ತಿ ಕಾಪಾಡಲು ಆದ್ಯತೆ ನೀಡಬೇಕು. ಪ್ರತಿಯೊಂದು ವಿಚಾರವೂ ನ್ಯಾಯಾಲಯದ ಮೆಟ್ಟಿಲೇರುವ ಪರಿಸ್ಥಿತಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಬ್ಯಾಂಕ್‌ನಲ್ಲಿನ ಆರೋಪಗಳು, ತನಿಖೆಗಳು ಮತ್ತು ನ್ಯಾಯಾಲಯಗಳಲ್ಲಿರುವ ಪ್ರಕರಣಗಳ ಕುರಿತು ಮಾಧ್ಯಮಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಮುಕ್ತ ಚರ್ಚೆ ನಡೆಯಬೇಕು. ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸಂಬಂಧಪಟ್ಟ ಎಲ್ಲರನ್ನು ಆಹ್ವಾನಿಸಿ ಚರ್ಚೆಗೆ ವೇದಿಕೆ ಕಲ್ಪಿಸಿದರೆ, ಸಮಸ್ಯೆಗಳ ಕುರಿತು ಸ್ಪಷ್ಟತೆ ದೊರೆಯುವುದರ ಜತೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಬ್ಯಾಂಕ್‌ನ ಹಿತಾಸಕ್ತಿ, ರೈತರ ಸಾಲ ಸೌಲಭ್ಯ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಆರೋಪಗಳಿಗೂ ಕಾನೂನುಬದ್ಧವಾಗಿ ಅಂತಿಮ ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿ ಮಾಡಿದರು.


ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಪತ್ರಿಕಾಗೋಷ್ಠಿಯಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆಂದಟ್ಟಿ ಶಿವಕುಮಾರ್, ಸುಗಟೂರು ಸೊಸೈಟಿ ಅಧ್ಯಕ್ಷ ಅಂಕತಟ್ಟಿ ಭಾಸ್ಕರ್ ಬಾಬು, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ. ಶಿವಕುಮಾರ್, ಹಿರಿಯ ಕಾಂಗ್ರೆಸ್ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ ಮತ್ತು ಸೈಯದ್ ಆಫ್ಸರ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಿಮ ಮತದಾರರ ಪಟ್ಟಿ ಪ್ರಕಟ: ಧಾರವಾಡ ಜಿಲ್ಲೆಯಲ್ಲಿ 13.78 ಲಕ್ಷ ಮತದಾರರು

15,151 ಯುವ ಮತದಾರರ ಮೊದಲ ಬಾರಿ ನೋಂದಣಿ, 6,305 ಹೆಸರು ಡಿಲೀಟ್,...

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಜಯಭೇರಿ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ...

ಚಿಂತಾಮಣಿ | ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಕ್ಕೆ ತಹಶೀಲ್ದಾರ್, ತಾ.ಪಂ ಇಒ ದಿಢೀರ್ ಭೇಟಿ – ಪರಿಶೀಲನೆ

ಚಿಂತಾಮಣಿ ನಗರದ ಹೊರವಲಯದ ಕಡಪ–ಬೆಂಗಳೂರು ರಸ್ತೆಯ ಚಿನ್ನಸಂದ್ರ ಕಾಟಮಾಚನಹಳ್ಳಿ ಸಮೀಪದಲ್ಲಿರುವ ಹಿಂದುಳಿದ...

ಕೋಲಾರ | ಆದಿಮದಲ್ಲಿ ಜಿಲ್ಲಾ ಮಟ್ಟದ ನಾಟಕೋತ್ಸವ ಸಂಭ್ರಮ, ಕಿಕ್ಕಿರಿದ ಪ್ರೇಕ್ಷಕರು.

ಕರ್ನಾಟಕ ನಾಟಕ ಅಕಾಡೆಮಿ ಮತ್ತು ಕೋಲಾರ ಆದಿಮ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ...