ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ನೇತೃತ್ವದಲ್ಲಿ ಬುಧವಾರ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಸೂರ್ಯನಾರಾಯಣ, ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ವ್ಯಕ್ತಪಡಿಸಿರುವ ಆಕ್ಷೇಪಗಳು ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಮತ್ತು ಪಾರದರ್ಶಕತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದರು.
ಮತದಾರರ ನೋಂದಣಿ, ಹೆಸರುಗಳ ಸೇರ್ಪಡೆ, ಅಳಿಸುವಿಕೆ ಹಾಗೂ ಮರುಸ್ಥಾಪನೆ ಮತ್ತು ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳಲ್ಲಿ ಚುನಾವಣಾ ಆಯುಕ್ತರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿರುವುದು ಆತಂಕಕಾರಿ ಬೆಳವಣಿಗೆ. ಮತದಾರರ ಪಟ್ಟಿಯ ನಿರ್ವಹಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಮತದಾರರ ದತ್ತಾಂಶದ ನಿರ್ವಹಣೆ ಹಾಗೂ ರಾಜ್ಯ ಮತ್ತು ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಅದರ ಪ್ರವೇಶದ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು. ಮತದಾನದ ಹಕ್ಕು ಯಾವುದೇ ಅಪಾರದರ್ಶಕ ಪ್ರಕ್ರಿಯೆಗೆ ಒಳಪಡಬಾರದು ಎಂದರು.
ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ, ತಪ್ಪಾಗಿ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಹಕ್ಕು ಮರುಸ್ಥಾಪಿಸಬೇಕು. ಚುನಾವಣಾ ಆಯೋಗದ ಸ್ವತಂತ್ರ ಹಾಗೂ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿಜಯಕೃಷ್ಣ, ಬಂಗಾರಪೇಟೆಯ ಪಿ.ಶ್ರೀನಿವಾಸ್, ಜಯಲಕ್ಷ್ಮಿ, ಪಾತಕೋಟೆ ನವೀನ್‌ಕುಮಾರ್, ಕೆಜಿಎಫ್‌ನ ಎ.ಆರ್. ಬಾಬು, ಪಿ.ತಂಗರಾಜ್, ಗಂಗಮ್ಮ, ಎನ್.ಎನ್. ಶ್ರೀರಾಮ್ ಮತ್ತಿತರರು ಭಾಗವಹಿಸಿದ್ದರು.
ಕೋಲಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ನೇತೃತ್ವದಲ್ಲಿ ಬುಧವಾರ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಸೂರ್ಯನಾರಾಯಣ, ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ವ್ಯಕ್ತಪಡಿಸಿರುವ ಆಕ್ಷೇಪಗಳು ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಮತ್ತು ಪಾರದರ್ಶಕತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದರು.
ಮತದಾರರ ನೋಂದಣಿ, ಹೆಸರುಗಳ ಸೇರ್ಪಡೆ, ಅಳಿಸುವಿಕೆ ಹಾಗೂ ಮರುಸ್ಥಾಪನೆ ಮತ್ತು ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳಲ್ಲಿ ಚುನಾವಣಾ ಆಯುಕ್ತರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿರುವುದು ಆತಂಕಕಾರಿ ಬೆಳವಣಿಗೆ. ಮತದಾರರ ಪಟ್ಟಿಯ ನಿರ್ವಹಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಮತದಾರರ ದತ್ತಾಂಶದ ನಿರ್ವಹಣೆ ಹಾಗೂ ರಾಜ್ಯ ಮತ್ತು ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಅದರ ಪ್ರವೇಶದ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು. ಮತದಾನದ ಹಕ್ಕು ಯಾವುದೇ ಅಪಾರದರ್ಶಕ ಪ್ರಕ್ರಿಯೆಗೆ ಒಳಪಡಬಾರದು ಎಂದರು.
ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ, ತಪ್ಪಾಗಿ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಹಕ್ಕು ಮರುಸ್ಥಾಪಿಸಬೇಕು. ಚುನಾವಣಾ ಆಯೋಗದ ಸ್ವತಂತ್ರ ಹಾಗೂ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದನ್ನು ಓದಿದ್ದೀರಾ..?ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ