ಕೋಲಾರ | ವೇಮಗಲ್‌ನಲ್ಲಿ ಕ್ರೋನ್ಸ್ ಉತ್ಪಾದನಾ ಘಟಕಕ್ಕೆ ಚಾಲನೆ

Date:

ಜರ್ಮನಿ ಮೂಲದ ಜಾಗತಿಕ ಖ್ಯಾತಿಯ ಕ್ರೋನ್ಸ್ ಕಂಪನಿಯ ನೂತನ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಇಂದು ಚಾಲನೆ ನೀಡಿದರು.

- Advertisement -

ತಾಲೂಕಿನಲ್ಲಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ 30 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಘಟಕಕ್ಕೆ ಕಂಪನಿಯು ₹315 ಕೋಟಿ ಹೂಡಿಕೆ ಮಾಡಿದ್ದು, 16 ಸಾವಿರ ಚದರ ಮೀಟರ್ ವಿಸ್ತೀರ್ಣದ ಉತ್ಪಾದನಾ ಘಟಕ ನಿರ್ಮಿಸಲಾಗಿದೆ. ವಿಶೇಷವೆಂದರೆ ಕೇವಲ 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಘಟಕ ಕಾರ್ಯಾರಂಭಿಸಿರುವುದು ಕೈಗಾರಿಕಾ ವಲಯದಲ್ಲಿ ಗಮನ ಸೆಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ, 2024ರ ಅಕ್ಟೋಬರ್‌ನಲ್ಲಿ ಕ್ರೋನ್ಸ್ ಕಂಪನಿ ಸಲ್ಲಿಸಿದ್ದ ಹೂಡಿಕೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿ 30 ಎಕರೆ ಭೂಮಿ ಮಂಜೂರು ಮಾಡಿತ್ತು. 2025ರ ಫೆಬ್ರವರಿ 20ರಂದು ತಾವೇ ಭೂಮಿಪೂಜೆ ನೆರವೇರಿಸಿದ್ದು, ಕೇವಲ 18 ತಿಂಗಳಲ್ಲಿ ಭವ್ಯ ಉತ್ಪಾದನಾ ಘಟಕ ನಿರ್ಮಾಣವಾಗಿರುವುದು ಹೂಡಿಕೆದಾರರಿಗೆ ರಾಜ್ಯದ ಕೈಗಾರಿಕಾಸ್ನೇಹಿ ವಾತಾವರಣದ ಬಗ್ಗೆ ಉತ್ತಮ ಸಂದೇಶ ನೀಡಲಿದೆ ಎಂದರು.

ಘಟಕದಲ್ಲಿ ಸುಮಾರು 400 ಉದ್ಯೋಗಗಳು ಸೃಷ್ಟಿಯಾಗಲಿದ್ದು, ಭಾರತದ ಮಾರುಕಟ್ಟೆಗೆ ಅಗತ್ಯವಿರುವ ಅತ್ಯಾಧುನಿಕ ಎರ್ಗೋಬ್ಲಾಕ್ ಪ್ಯಾಕೇಜಿಂಗ್ ಹಾಗೂ ಬಾಟ್ಲಿಂಗ್ ಯಂತ್ರಗಳನ್ನು ಉತ್ಪಾದಿಸಲಾಗುವುದು. ಗಂಟೆಗೆ ಒಂದು ಲಕ್ಷ ಬಾಟಲಿಗಳನ್ನು ಉತ್ಪಾದಿಸುವ ಸಾಮರ್ಥ್ಯದ ಯಂತ್ರಗಳನ್ನೂ ಇಲ್ಲಿ ತಯಾರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸ್ಥಳೀಯರಿಗೆ ಉದ್ಯೋಗ ಆದ್ಯತೆ ನೀಡಿ:
ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಕೈಗಾರಿಕೆಗಾಗಿ ಭೂಮಿ ನೀಡಿರುವ ‘ಲ್ಯಾಂಡ್ ಲೂಸರ್ಸ್’ ಕುಟುಂಬಗಳ ಸದಸ್ಯರು, ರೈತರ ಮಕ್ಕಳು ಹಾಗೂ ಸ್ಥಳೀಯ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು. ಅರ್ಹತೆಗೆ ಅನುಗುಣವಾಗಿ ಉತ್ತಮ ಹುದ್ದೆಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸಂಸದ ಎಂ. ಮಲ್ಲೇಶ್ ಬಾಬು ಮಾತನಾಡಿ ನರಸಾಪುರ ಮತ್ತು ವೇಮಗಲ್ ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕೈಗಾರಿಕೆಗಳ ಸಿಎಸ್‌ಆರ್ ನಿಧಿಯನ್ನು ಜಿಲ್ಲೆಯ ರಸ್ತೆ, ಶಿಕ್ಷಣ, ಕುಡಿಯುವ ನೀರು ಹಾಗೂ ಕೃಷಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಬಳಸಬೇಕು ಎಂದರು.

ಕೈಗಾರಿಕಾ ಘಟಕದಿಂದ ಕೋಲಾರ ಜಿಲ್ಲೆಯಲ್ಲಿ ಹೊಸ ಆರ್ಥಿಕ ಹಾಗೂ ಸಾಮಾಜಿಕ ಅವಕಾಶಗಳು ಸೃಷ್ಟಿಯಾಗಲಿದ್ದು, ಸ್ಥಳೀಯ ಯುವಕರಿಗೆ ಉದ್ಯೋಗ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಇದು ಮಹತ್ವದ ಕೊಡುಗೆ ನೀಡಲಿದೆ ಎಂದು ಜನಪ್ರತಿನಿಧಿಗಳು ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ..?ಕೋಲಾರ | ರೈತರ ಹತ್ಯೆ ಆರೋಪ: ಅರಣ್ಯಾಧಿಕಾರಿಗಳ ಬಂಧನಕ್ಕೆ ರೈತ ಸಂಘ ಆಗ್ರಹ

ಕಾರ್ಯಕ್ರಮದಲ್ಲಿ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅನುಷಾ, ನಿಯೋಜಿತ ಜರ್ಮನ್ ಕಾನ್ಸುಲ್ ಜನರಲ್ ಡಾ. ಕ್ರಿಸ್ಟಾಫ್ ಡೋರ್ಸ್‌ಫೆಲ್ಟ್, ಕ್ರೋನ್ಸ್ ಕಂಪನಿಯ ಸಿಒಒ ರಾಲ್ಫ್ ಗೋಲ್ಡ್‌ಬ್ರನ್ನರ್, ವ್ಯವಸ್ಥಾಪಕ ನಿರ್ದೇಶಕ ಥಾಮಸ್ ವೂಲ್ಫರ್, ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಸುರಾಜ್ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ವೇಮಗಲ್ ನರಸಾಪುರ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...