ಕೋಲಾರ | ಗೋಮಾಳ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ ಕ್ರಷರ್: ಕ್ರಮಕ್ಕೆ ಶಾಸಕ, ಎಂಎಲ್‌ಸಿಗೆ ಮನವಿ

Date:

ತಾಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಸರ್ವೇ ನಂ.19ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ ಜಲ್ಲಿ ಕ್ರಷರ್ ಘಟಕ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಸೀತಿ, ಮಾರ್ಜೇನಹಳ್ಳಿ ಹಾಗೂ ಮಠಪುರ ಗ್ರಾಮಸ್ಥರು ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್‌ಸಿ ಎಂ.ಎಲ್. ಅನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

- Advertisement -

ಈ ಸಂದರ್ಭದಲ್ಲಿ ಸೀತಿ ಗ್ರಾಮದ ಮುರಳಿಗೌಡ ಮಾತನಾಡಿ, ಹೊಸಕೋಟೆ ಮೂಲದ ನರೇಂದ್ರ ಎಂ.ಸಿ. ಮಾಲೀಕತ್ವದ ಕೇಶವ ಕನ್ಸ್‌ಟ್ರಕ್ಷನ್ಸ್ ಹೆಸರಿನಲ್ಲಿ ಕ್ರಷರ್ ಘಟಕ ನಿರ್ಮಿಸಲಾಗಿದ್ದು, ಕೇವಲ ಆರು ಎಕರೆ ಪ್ರದೇಶದಲ್ಲಿ ಕಟ್ಟಡ ಕಲ್ಲು ಗಣಿಗಾರಿಕೆಗೆ ಅನುಮತಿ ಪಡೆದಿದ್ದರೂ ಸುಮಾರು 20 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಅತಿಕ್ರಮಿಸಲಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಎನ್‌ಎಚ್‌ಎಐಗೆ ಸಂಬಂಧಿಸಿದ ಕಾಮಗಾರಿಗಾಗಿ ಕ್ರಷರ್ ನಡೆಸಲಾಗುತ್ತಿದ್ದು, ಕೃಷಿ ಭೂಮಿಯಿಂದ ಕೇವಲ 20 ಮೀಟರ್ ಅಂತರದಲ್ಲಿ ಕ್ರಷರ್ ಯಂತ್ರ ಅಳವಡಿಸಿರುವುದರಿಂದ ಧೂಳು ಸುತ್ತಮುತ್ತಲಿನ ಗ್ರಾಮಗಳಿಗೆ ವ್ಯಾಪಿಸಿ ಬೆಳೆಗಳಿಗೆ ಹಾನಿಯಾಗುತ್ತಿದೆ ಎಂದು ದೂರಿದರು. ಕಲ್ಲು ಸ್ಫೋಟದಿಂದ ಮನೆಗಳು, ಕೊಳವೆ ಬಾವಿಗಳಿಗೆ ಹಾನಿಯಾಗುವ ಆತಂಕವಿದ್ದು, ಜಿಂಕೆ, ಮೊಲ, ನವಿಲು ಸೇರಿದಂತೆ ವನ್ಯಜೀವಿಗಳಿಗೂ ತೊಂದರೆಯಾಗುತ್ತಿದೆ ಎಂದರು.

ಜಾನುವಾರುಗಳು ಓಡಾಡುವ ರಸ್ತೆಗೆ ತಡೆಗೋಡೆ ನಿರ್ಮಿಸಿ, ರಸ್ತೆ ಮಧ್ಯೆಯೇ ಯಂತ್ರಗಳನ್ನು ಅಳವಡಿಸಿಕೊಂಡು ಇಡೀ ರಾತ್ರಿ ಕ್ರಷರ್ ಕಾರ್ಯನಿರ್ವಹಿಸುತ್ತಿರುವುದರಿಂದ ಶಬ್ದ ಮಾಲಿನ್ಯದಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ತೀವ್ರ ಕಿರಿಕಿರಿ ಉಂಟಾಗುತ್ತಿದೆ. ಕೂಡಲೇ ಕ್ರಷರ್ ಕಾರ್ಯಾಚರಣೆ ಸ್ಥಗಿತಗೊಳಿಸಿ, ಅತಿಕ್ರಮಣ ತೆರವುಗೊಳಿಸಿ, ನಿಯಮ ಉಲ್ಲಂಘನೆ ಕುರಿತು ತನಿಖೆ ನಡೆಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಹನೂರು ಶೂಟೌಟ್‌ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ

ಮನವಿ ಸ್ವೀಕರಿಸಿದ ಶಾಸಕ ಕೊತ್ತೂರು ಮಂಜುನಾಥ್, ಈ ಕುರಿತು ತಹಶೀಲ್ದಾರ್ ಅವರಿಗೆ ತಿಳಿಸಿ ಕ್ರಷರ್ ಕಾರ್ಯಾಚರಣೆ ನಿಲ್ಲಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸೀತಿ, ಮಾರ್ಜೇನಹಳ್ಳಿ, ಮಠಪುರ ಗ್ರಾಮಸ್ಥರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...