ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

Date:

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ, ಅಬಕಾರಿ ನಿರೀಕ್ಷಕಿ ರಮಾಮಣಿ ಅವರನ್ನು ಅಮಾನತುಗೊಳಿಸಬೇಕು ಹಾಗೂ ಮಾಲೂರು ತಾಲ್ಲೂಕಿನ ಸಿ.ಎಲ್.-7 ಬಾರ್ ಮತ್ತು ರೆಸಿಡೆನ್ಸಿಗಳ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಬಳಗದ ವತಿಯಿಂದ ಗುರುವಾರ ತಮಟೆ ಚಳವಳಿಯ ಮೂಲಕ ನಗರದ ನಚಿಕೇತ ನಿಲಯದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಅಂಬೇಡ್ಕರ್ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜೈಭೀಮ್ ಮಂಜು, ಜಿಲ್ಲೆಯಲ್ಲಿ ಅಬಕಾರಿ ಅಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿಗಿಂತ ಹಣ ವಸೂಲಿಗೆ ಆದ್ಯತೆ ನೀಡುತ್ತಿದ್ದಾರೆ. ಸಿ.ಎಲ್.-2, ಸಿ.ಎಲ್.-9 ಹಾಗೂ ಸಿ.ಎಲ್.-7 ಬಾರ್‌ಗಳಲ್ಲಿ ಸ್ವಚ್ಛತೆ ಕಾಪಾಡದಿರುವುದು, ಅಕ್ರಮ ಬ್ಲೆಂಡಿಂಗ್ ಸೇರಿದಂತೆ ಹಲವು ಅಕ್ರಮಗಳು ನಡೆಯುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಅಕ್ರಮಗಳಿಗೆ ಸಂಬಂಧಿಸಿದಂತೆ ಶಂಕರ್ ಪ್ರಸಾದ್ ಅವರು ಸಿ.ಡಿ ಮತ್ತು ವಿಡಿಯೋ ಸೇರಿದಂತೆ ಸಾಕ್ಷ್ಯಾಧಾರಗಳನ್ನು ನೀಡಿದ್ದರೂ ಪ್ರಯೋಜನವಾಗಿಲ್ಲ. ಅಬಕಾರಿ ಉಪ ಆಯುಕ್ತರ ಗಮನಕ್ಕೆ ತಂದರೂ ಸ್ಪಂದನೆ ದೊರೆತಿಲ್ಲ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಬಾರ್‌ಗಳ ಮೇಲೆ ಪರಿಶೀಲನೆ ನಡೆಸಬೇಕು ಜಿಲ್ಲಾಧಿಕಾರಿ ಕಡೆಯಿಂದ ಸೂಕ್ತ ತನಿಖೆ ನಡೆಸುವ ವಿಶ್ವಾಸವಿದೆ. ಕ್ರಮ ಕೈಗೊಳ್ಳದಿದ್ದರೆ ಅಬಕಾರಿ ಕಚೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಪ್ರತಿಭಟನೆಯ ನೇತೃತ್ವವನ್ನು ಬಳಗದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಖಾದ್ರಿಪುರ ಉಮಾ ನಾರಾಯಣ, ತಾಲೂಕು ಅಧ್ಯಕ್ಷ ಎ. ನವೀನ್, ಸುಗಟೂರು ಮೂರ್ತಿ, ಕೀಲುಕೋಟೆ ಬಾಲಾಜಿ, ಲಕ್ಷ್ಮೀಪತಿ, ಮಹೇಶ್, ಮಂಜು ಮಹೇಶ್, ಗಜಾ, ಲಕ್ಷ್ಮಮ್ಮ, ಗಂಗಾ, ನ್ಯಾರೇಮ್ಮ, ಸರಿತಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದ ಆಲಮಟ್ಟಿಯ 30ಕ್ಕೂ ಅಧಿಕ ಒಣಗಿದ ಮರಗಳ ತೆರವಿಗೆ ಚಾಲನೆ

ಪ್ರವಾಸಿಗರ ಆಕರ್ಷಣೆಯಾಗಿದ್ದ ಆಲಮಟ್ಟಿಯ ರಸ್ತೆ ಬದಿಯ ಮರಗಳ ಸಾಲಿನಲ್ಲಿ ಒಣಗಿ, ಅಪಾಯಕಾರಿಯಾಗಿದ್ದ...

ರಾಯಚೂರು | ಮೌಲಾನಾ ಅಬುಲ್ ಕಲಾಂ ಅಜಾದ್ ಜಯಂತಿ ಆಚರಣೆ

ದೇಶದ ಮೊದಲ ಶಿಕ್ಷಣ ಸಚಿವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್...

ಬಾಗಲಕೋಟೆ |ಭೋವಿ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ವಿವಿಧ ಯೋಜನೆ: ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಆರ್ಥಿಕ...