ಕೋಲಾರ | ಮನರೇಗಾ ಸಾಮಗ್ರಿ ಬಿಲ್ ಪಾವತಿಗೆ ಮದನಹಳ್ಳಿ ಮಹೇಶ್ ನೇತೃತ್ವದಲ್ಲಿ ಒತ್ತಾಯ: ₹107 ಕೋಟಿ ಬಿಡುಗಡೆಗೆ ಸಂಸದರಿಗೆ ಮನವಿ

Date:

ಕೇಂದ್ರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ) ಹಾಗೂ ವಿ.ಬಿ.ಜಿ.ರಾಮ್ ಜಿ ಯೋಜನೆಯ ಕೋಲಾರ ಜಿಲ್ಲೆಯಲ್ಲಿ ಕಾಮಗಾರಿಗಳಿಗೆ ಸಾಮಗ್ರಿ ಸರಬರಾಜು ಮಾಡಿರುವ ಗುತ್ತಿಗೆದಾರರು ಹಾಗೂ ಸರಬರಾಜುದಾರರಿಗೆ ಬಾಕಿ ಇರುವ ₹107 ಕೋಟಿ ಮೊತ್ತದ ಬಿಲ್‌ಗಳನ್ನು ಕೂಡಲೇ ಬಿಡುಗಡೆ ಮಾಡಿಸುವಂತೆ ಜಿಲ್ಲಾ ಸಾಮಗ್ರಿ ಸರಬರಾಜುದಾರರ ಸಂಘದ ವತಿಯಿಂದ ಮಂಗಳವಾರ ಸಂಸದ ಎಂ. ಮಲ್ಲೇಶ್ ಬಾಬು ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಗ್ರಾಪಂ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮದನಹಳ್ಳಿ ಮಹೇಶ್ ಮಾತನಾಡಿ, 2022-23ನೇ ಸಾಲಿನಿಂದ 2026-27ನೇ ಸಾಲಿನವರೆಗೆ ಜಿಲ್ಲೆಯ 154 ಗ್ರಾಮ ಪಂಚಾಯಿತಿಗಳು ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್, ರೇಷ್ಮೆ, ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ವಿವಿಧ ಅನುಷ್ಠಾನ ಇಲಾಖೆಗಳಲ್ಲಿ ಮನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳಿಗೆ ಆದೇಶ ಪಡೆದು ಸಾಮಗ್ರಿಗಳನ್ನು ಸರಬರಾಜು ಮಾಡಲಾಗಿದೆ. ಬದೂ ನೀರು ನಿರ್ವಹಣೆ ಸೇರಿದಂತೆ ವಿವಿಧ ನಾಗರಿಕ ಕಾಮಗಾರಿಗಳಿಗೆ ಟೆಂಡರ್ ಮೂಲಕ ಕಾರ್ಯಾದೇಶ ಪಡೆದು, ಶೇ.5ರಷ್ಟು ಭದ್ರತಾ ಠೇವಣಿಯನ್ನೂ ಪಾವತಿಸಿ ನಿಯಮಾನುಸಾರ ಸಾಮಗ್ರಿ ಪೂರೈಸಲಾಗಿದೆ ಆದರೆ, ಕಳೆದ ಸುಮಾರು ನಾಲ್ಕು ವರ್ಷಗಳಿಂದ ಜಿಲ್ಲೆಯ ಅನುಷ್ಠಾನ ಇಲಾಖೆಗಳಿಗೆ ಸಾಮಗ್ರಿ ವೆಚ್ಚ ಬಿಡುಗಡೆಯಾಗದೆ ಸರಬರಾಜುದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಜ್ಜಳನ ಆಸ್ಥಾನದಲ್ಲಿದ್ದ ಕೊಂಡಿ ಮಂಚಣ್ಣ ಯಾರು? ಆತ ‘ಬಸವ’...

ಬಸವಣ್ಣನವರ ವಿರೋಧಿಯಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿರುವ ‘ಕೊಂಡಿ ಮಂಚಣ್ಣ’ ಈಗ ಮತ್ತೆ ಕರ್ನಾಟಕದ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದ್ದಾನೆ. ಸಚಿವ ಎಂ.ಬಿ. ಪಾಟೀಲ್ ಅವರು ಶಂಕರ್ ಬಿದರಿ ಮತ್ತು ಮನು ಬಳಿಗಾರ್ ಅವರನ್ನು ‘21ನೇ...

ರಾಹುಲ್ ವಿರುದ್ಧ ಮೊಕದ್ದಮೆ, ಸೋನಿಯಾಗೆ ಕಾನೂನು ನೋಟಿಸ್: ಸಾವರ್ಕರ್–ಗೋಡ್ಸೆ...

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ಮೂಲಕ ವಿವಾದ ಸೃಷ್ಟಿಸಿದ್ದ ಪುಣೆಯ ಸಾತ್ಯಕಿ ಸಾವರ್ಕರ್, ಇದೀಗ ಸೋನಿಯಾ ಗಾಂಧಿ ಅವರ ಪುಸ್ತಕದ ಐತಿಹಾಸಿಕ ಉಲ್ಲೇಖಗಳನ್ನು ಸಹಿಸದೆ ಕಾನೂನು ನೋಟಿಸ್ ನೀಡಿ ಮತ್ತೆ ಪ್ರಚಾರಕ್ಕಿಳಿದಿದ್ದಾನೆ....

ಉತ್ತರ ಕನ್ನಡ: ಬೇಡ್ತಿ ಹೋರಾಟ ಮತ್ತು ಸಂಸದ-ಶಾಸಕರ ಸೋಗಲಾಡಿತನ

ಬೇಡ್ತಿ ಸತ್ಯಾಗ್ರಹ ಎಷ್ಟು ಯೋಜನಾ ಬದ್ದವಾಗಿರುತ್ತದೆಂದರೆ, ಬೇಡ್ತಿ ನದಿ ಬಳಸುವ ಯಾವ ಯೋಜನೆಯೂ ಕಾರ್ಯಗತವಾಗದಂತೆ ಹಿಮ್ಮೆಟ್ಟಿಸಲಾಗುತ್ತಿದೆ. ಆದರೆ ಜಿಲ್ಲೆಯ ಹಿಂದುಳಿದವರು-ದುರ್ಬಲರು ಬಾಧಿತವಾಗುವ ಹಲವು ಯೋಜನೆಗಳನ್ನು ಪ್ರಭುತ್ವ ಹಠದಿಂದ ಅನುಷ್ಠಾನಗೊಳಿಸಿದೆ. ಸುಪಾ, ತಟ್ಟಿಹಳ್ಳ, ಕೊಡಸಳ್ಳಿ,...

ಸಾಮಗ್ರಿ ಖರೀದಿಗೆ ಮಾಡಿದ ಸಾಲ, ಬಡ್ಡಿ ಹಾಗೂ ಇತರೆ ವೆಚ್ಚಗಳನ್ನು ಭರಿಸಲಾಗದೆ ಹಲವರು ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಪರಿಣಾಮ ಕಾಮಗಾರಿಗಳಲ್ಲಿ ಭಾಗಿಯಾಗಿರುವ ಸರಬರಾಜುದಾರರಷ್ಟೇ ಅಲ್ಲದೆ, ತೋಟಗಾರಿಕೆ ಮತ್ತು ಕೃಷಿ ಬೆಳೆಗಳನ್ನು ಬೆಳೆದ ರೈತರಿಗೂ ಹಣಕಾಸಿನ ತೊಂದರೆಯಾಗಿದೆ ಕಾಮಗಾರಿ ಪೂರ್ಣಗೊಳಿಸಿ ಸಾಮಗ್ರಿ ಪೂರೈಸಿದವರಿಗೆ ಸಕಾಲದಲ್ಲಿ ಹಣ ಪಾವತಿಯಾಗದಿದ್ದರೆ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳ ನಿರಂತರತೆಗೂ ತೊಂದರೆಯಾಗಲಿದೆ. ಹೀಗಾಗಿ ಬಾಕಿ ಬಿಲ್‌ಗಳ ಬಿಡುಗಡೆಗೆ ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂಬುದು ಆಗ್ರಹಿಸಿದರು.

ಜಿಲ್ಲೆಯ ಅನುಷ್ಠಾನ ಇಲಾಖೆಗಳ ವ್ಯಾಪ್ತಿಯಲ್ಲಿ ಸುಮಾರು ₹33 ಕೋಟಿ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಮಾರು ₹74 ಕೋಟಿ ಸೇರಿ ಒಟ್ಟು ₹107 ಕೋಟಿ ಸಾಮಗ್ರಿ ವೆಚ್ಚದ ಬಿಲ್‌ಗಳು ಪಾವತಿಗೆ ಬಾಕಿ ಉಳಿದಿವೆ. ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾಮಗ್ರಿ ಪೂರೈಸಿದ ಬಳಿಕವೂ ಹಣ ಬಿಡುಗಡೆಯಾಗದಿರುವುದು ಸರಬರಾಜುದಾರರ ಜೀವನೋಪಾಯದ ಮೇಲೂ ಪರಿಣಾಮ ಬೀರಿದೆ. ಆದ್ದರಿಂದ ಕೇಂದ್ರ ಹಣಕಾಸು ಸಚಿವರು ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರ ಗಮನಕ್ಕೆ ಸಮಸ್ಯೆಯನ್ನು ತಂದು, ಬಾಕಿ ಬಿಲ್‌ಗಳನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಸಂಸದ ಎಂ. ಮಲ್ಲೇಶ್ ಬಾಬು ಮಾತನಾಡಿ, ಜಿಲ್ಲೆಯ ಸಾಮಗ್ರಿ ಸರಬರಾಜುದಾರರ ಸಮಸ್ಯೆಯನ್ನು ಸಂಬಂಧಿಸಿದ ಕೇಂದ್ರ ಸಚಿವರ ಗಮನಕ್ಕೆ ತರಲಾಗುವುದು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೂ ಚರ್ಚಿಸಿ, ಬಾಕಿ ಇರುವ ಮೊತ್ತವನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.


ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ವಿಟ್ಟಪ್ಪನಹಳ್ಳಿ ಕೋಟೆ ನಾರಾಯಣಸ್ವಾಮಿ, ಅರಹಳ್ಳಿ ಜಗದೀಶ್, ಅನಿಲ್, ಉಪ್ಪಕುಂಟೆ ರಾಮಾಂಜಿ, ರವಿಚಂದ್ರ ಆಂಜನೇಯರೆಡ್ಡಿ, ಚಂದ್ರಶೇಖರ್ ಬಸವರಾಜ್, ರಮೇಶ್, ಆಂಜಿನಪ್ಪ, ನಾಗೇಂದ್ರ, ನಾರಾಯಣಸ್ವಾಮಿ ಗೋಪಾಲಕೃಷ್ಣ, ಶಂಕರಬಾಬು, ಸುಭಾಷ್, ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | 38 ಕಾಡಾನೆ ಸ್ಥಳಾಂತರ; ಸ್ಥಳೀಯರಲ್ಲಿ ಆತಂಕ 

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಭೀತಿ ಸಾರ್ವಜನಿಕರಲ್ಲಿ ಶುರುವಾಗಿದೆ. ಹಾಸನ ಜಿಲ್ಲೆಯ...

ಚಿಕ್ಕಮಗಳೂರು | ಹೆಜ್ಜೇನು ದಾಳಿಗೆ ರೈತ ಗಂಭೀರ 

ಚಿಕ್ಕಮಗಳೂರು ಹೊರವಲಯದ ಹಿರೇಕೊಳಲೆ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ...

ಚಿಕ್ಕಮಗಳೂರು | ಮಲೆನಾಡಿನಲ್ಲಿ ಚಿರತೆ ಪ್ರತ್ಯಕ್ಷ

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಚಿರತೆ ನಾಯಿಯನ್ನು ಕೊಂದಿರುವ...

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ...