ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

Date:

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ 1996ರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ ಹಾಗೂ ಸೆಸ್ ಕಾಯ್ದೆಗಳನ್ನು ಪುನರ್‌ಸ್ಥಾಪಿಸಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗಳಲ್ಲಿ ಸಂಗ್ರಹವಾಗಿರುವ ಸಾವಿರಾರು ಕೋಟಿ ರೂ. ನಿಧಿಯನ್ನು ಸಂರಕ್ಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಪಿ. ಶ್ರೀನಿವಾಸ್ ಮಾತನಾಡಿ, ರಾಜ್ಯದಲ್ಲಿ ಬಾಕಿ ಉಳಿದಿರುವ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಪಾವತಿಸಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಸಹಾಯಧನ ಹೆಚ್ಚಿಸಬೇಕು. ಮಾಸಿಕ ಪಿಂಚಣಿಯನ್ನು 5 ಸಾವಿರ ರೂ.ಗೆ ಏರಿಸಬೇಕು. ವೈದ್ಯಕೀಯ ತಪಾಸಣೆ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಅಲ್ಲದೆ, ದುಬಾರಿ ವೆಚ್ಚದ ಕೌಶಲ್ಯ ಕೇಂದ್ರ ಹಾಗೂ ವಸತಿ ಶಾಲೆಗಳ ನಿರ್ಮಾಣ ಯೋಜನೆ ಕೈಬಿಡಬೇಕು. ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕಾಗಿ ನೇಮಿಸಿರುವ ಗುತ್ತಿಗೆ ಆಧಾರಿತ ಖಾಸಗಿ ಏಜೆನ್ಸಿಗಳ ಕಾರ್ಮಿಕ ಸೇವಾ ಕೇಂದ್ರಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು

ಸಂಘದ ಜಿಲ್ಲಾ ಕಾರ್ಯದರ್ಶಿ ಎಂ. ಭೀಮರಾಜ್ ಮಾತನಾಡಿ, ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಅವರ ಹಕ್ಕುಗಳಿಂದ ವಂಚಿಸುವ ವ್ಯವಸ್ಥಿತ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. 50 ಲಕ್ಷ ರೂ.ಗಿಂತ ಕಡಿಮೆ ವೆಚ್ಚದ ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸ ಮಾಡುವವರನ್ನು ನಿರ್ಮಾಣ ಕಾರ್ಮಿಕರೆಂದು ಪರಿಗಣಿಸದಿರುವ ಪ್ರಸ್ತಾಪ ಕಾರ್ಮಿಕರಿಗೆ ಮಾಡುವ ದ್ರೋಹವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಕಾರ್ಮಿಕ ಕಾಯ್ದೆಗಳಿಗೆ ಬದಲಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ದೇಶದ ಕಾರ್ಮಿಕ ವರ್ಗದ ಹಕ್ಕುಗಳನ್ನು ಕಸಿದುಕೊಳ್ಳುವ ಉರುಳಾಗಿವೆ. ಕಾರ್ಪೊರೇಟ್ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿ ಕಾರ್ಮಿಕರ ಹಕ್ಕುಗಳನ್ನು ನಿರ್ದಯವಾಗಿ ಮೊಟಕುಗೊಳಿಸಲಾಗುತ್ತಿದೆ. ಕಾರ್ಮಿಕರು ಈ ಬಗ್ಗೆ ಎಚ್ಚೆತ್ತುಕೊಂಡು ಹೋರಾಟಕ್ಕೆ ಮುಂದಾಗದಿದ್ದರೆ ಬೀದಿಪಾಲಾಗುವ ಪರಿಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಪ್ರತಿಭಟನೆಯಲ್ಲಿ ಮುಖಂಡರಾದ ಎಂ. ವಿಜಯಕೃಷ್ಣ, ಕೆ. ಮಂಜುನಾಥ್, ಆಶಾ, ರಾಮಚಂದ್ರಪ್ಪ, ಹೊಗರಿ ನಾಗರಾಜಪ್ಪ, ಅಂಜನಪ್ಪ, ವಿಜಯಕುಮಾರ್, ಬಿ.ಎಲ್. ಕೇಶವರಾವ್, ರಾಮಕೃಷ್ಣಪ್ಪ, ನಾಗರಾಜ್, ಅಶೋಕರಾವ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುರುಪುರ | ನೂತನ ಕಾರ್ಮಿಕ ಸಂಹಿತೆ ರದ್ದತಿಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ

ಕೇಂದ್ರ ಸರಕಾರ ಜಾರಿಗೊಳಿಸಿರುವ ನೂತನ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ...

ಶಿವಮೊಗ್ಗ | ರಸ್ತೆ ದಾಟಲು ನಿಂತಾಗ ಬೈಕ್ ಡಿಕ್ಕಿ; ವೃದ್ಧ ಕೊನೆಯುಸಿರು

ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ...

ಗಿನ್ನಿಸ್‌ ಸೇರಿದ ʻಮಾಂಡ್ ಸೊಭಾಣ್‌ʼ ಕೊಂಕಣಿ ಸಂಸ್ಕೃತಿಯ ವಿಜಯ: ಡಾ. ರೊನಾಲ್ಡ್ ಕೊಲಾಸೊ

ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನದ ಅಂಗವಾಗಿ 'ಬಹು ಗಾಯಕರ...

ಮಳವಳ್ಳಿ | ವಿಷಮುಕ್ತ ಭೂಮಿಗೆ ಸಾವಯವ ಕೃಷಿ ಅನುಸರಿಸಿ: ಕೃಷಿಕರ ಸಂಘ ಮನವಿ

ಸಂಪೂರ್ಣ ಸಾವಯವ ಕೃಷಿಕರ ಸಂಘದ ವತಿಯಿಂದ ಮಳವಳ್ಳಿಯ, ಸಾತೇನಹಳ್ಳಿ ಗ್ರಾಮದಲ್ಲಿ ಕುಮಾರಸ್ವಾಮಿ...