ಕೋಲಾರ : ರೈತರಿಗೆ ₹7 ಹಾಲಿನ ದರ ಹೆಚ್ಚಳ ವಿರೋಧಿಸುವ ವಿರೋಧ ಪಕ್ಷಗಳಿಗೆ ಜನಸಾಮಾನ್ಯರ ಬೆಲೆ ಏರಿಕೆ ನೆನಪಾಗಲಿಲ್ಲವೇ?

Date:

ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದಾಗ ಜನಸಾಮಾನ್ಯರ ಪರವಾಗಿ ಬೀದಿಗಿಳಿದು ಹೋರಾಟ ಮಾಡದ ವಿರೋಧ ಪಕ್ಷದ ನಾಯಕರು, ರೈತರಿಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿ ₹7 ನೀಡುವ ವಿಚಾರದಲ್ಲಿ ಮಾತ್ರ ಪ್ರತಿಭಟನೆ ನಡೆಸುತ್ತಿರುವುದು ಎಷ್ಟು ಸಮಂಜಸ ಎಂದು ಸಿಂಡಿಕೇಟ್ ಸದಸ್ಯ ಹಾಗೂ ಸೀಸಂದ್ರ ಡೇರಿ ಅಧ್ಯಕ್ಷ ಗೋಪಾಲಗೌಡ ಪ್ರಶ್ನಿಸಿದರು.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಬಿಜೆಪಿ ಆಡಳಿತದ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆಗಳು ನಿರಂತರವಾಗಿ ಏರಿಕೆಯಾದಾಗ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸದವರು, ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಹಾಲಿನ ದರ ಹೆಚ್ಚಳದ ಪ್ರಸ್ತಾಪ ಬಂದಾಗ ವಿರೋಧ ವ್ಯಕ್ತಪಡಿಸುತ್ತಿರುವುದು ರಾಜಕೀಯ ದ್ವಂದ್ವದ ನಿಲುವನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ | ಬಿಜೆಪಿಯ ಹಿಂದುತ್ವದ ಅಸ್ತ್ರಕ್ಕೆ ಎಸ್‌ಪಿ...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ಕೇವಲ ಕೆಲವೇ ತಿಂಗಳುಗಳು ಬಾಕಿ ಇವೆ. ಆ ರಾಜ್ಯದ ರಾಜಕೀಯ ರಂಗದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ. ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ, ಮಾಜಿ ಮುಖ್ಯಮಂತ್ರಿ...

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ...

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ ಬಲಿ ಕೇವಲ ಸೋಲಿನ ಸಂಕೇತವಲ್ಲ; ಆತ ಚಾರಿತ್ರಿಕವಾಗಿ ಪ್ರಭುತ್ವದ ವಂಚನೆಯನ್ನು ಬಯಲು ಮಾಡುವ ಜೀವಂತ ಪ್ರತಿರೋಧ. ಊರಿಗೆಲ್ಲ ದೀಪಾವಳಿಯು ಬೆಳಕಿನ ಸಂಭ್ರಮವಾದರೆ,...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬಿಎಸ್ಎನ್ಎಲ್ ಸಂಸ್ಥೆಯ ಬೆಳವಣಿಗೆ ಕುಂಠಿತಗೊಳಿಸಿ ಖಾಸಗಿ ದೂರಸಂಪರ್ಕ ಸಂಸ್ಥೆಗಳಿಗೆ ಅವಕಾಶ ಮಾಡಿಕೊಟ್ಟಿದ್ದು, ಮೊಬೈಲ್ ಕರೆನ್ಸಿ ಹಾಗೂ ವಿವಿಧ ಸೇವೆಗಳ ವೆಚ್ಚದ ಹೆಚ್ಚಳದಿಂದ ಗ್ರಾಹಕರಿಗೆ ಹೊರೆಯಾದಾಗ ಧ್ವನಿ ಎತ್ತದವರು, ಹಾಲು ಉತ್ಪಾದಕರಿಗೆ ಏಳು ರೂಪಾಯಿ ಹೆಚ್ಚುವರಿ ದರ ನೀಡುವ ವಿಚಾರದಲ್ಲಿ ಮಾತ್ರ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಲು ಉತ್ಪಾದನೆ ರೈತರಿಗೆ ಸುಲಭದ ಕೆಲಸವಲ್ಲ. ಪಶು ಆಹಾರ, ಮೇವು, ಔಷಧ, ಪಶುಗಳ ನಿರ್ವಹಣೆ, ವಿದ್ಯುತ್ ಹಾಗೂ ಕಾರ್ಮಿಕರ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಸುಗಳಿಗೆ ಕಾಯಿಲೆ ಬಂದಾಗ ಚಿಕಿತ್ಸೆ ಕೊಡಿಸುವುದು, ಬರಗಾಲದಲ್ಲಿ ಮೇವು ಹೊಂದಿಸುವುದು ಸೇರಿದಂತೆ ರೈತರು ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲು ಉತ್ಪಾದಕರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂಬ ಉದ್ದೇಶದಿಂದ ಕೈಗೊಳ್ಳುವ ನಿರ್ಧಾರಗಳಿಗೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ ಎಂದರು.

ಇತರೆ ರಾಜ್ಯಗಳ ಹಾಲಿನ ದರಗಳನ್ನು ಗಮನಿಸಿದರೆ ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಕಡಿಮೆ ಇದೆ. ಆಂಧ್ರಪ್ರದೇಶದಲ್ಲಿ ಲೀಟರ್‌ಗೆ ₹68, ಪಂಜಾಬ್ ಮತ್ತು ಒಡಿಶಾದಲ್ಲಿ ₹66, ಛತ್ತೀಸ್‌ಗಢದಲ್ಲಿ ₹66, ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ₹64, ಗೋವಾ ಹಾಗೂ ಬಿಹಾರದಲ್ಲಿ ₹60 ದರವಿದೆ. ಕರ್ನಾಟಕದಲ್ಲಿ ಪ್ರಸ್ತಾಪಿಸಿರುವ ಹೊಸ ದರ ₹54 ಆಗಿದ್ದರೂ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆಯಾಗಿದೆ. ಹೀಗಿರುವಾಗ ರೈತರಿಗೆ ಅನುಕೂಲವಾಗುವ ದರ ಹೆಚ್ಚಳವನ್ನು ವಿರೋಧಿಸುವುದರಲ್ಲಿ ಯಾವ ನ್ಯಾಯವಿದೆ ಎಂದು ಪ್ರಶ್ನಿಸಿದರು.

ರೈತರ ಹಿತದ ಬಗ್ಗೆ ಮಾತನಾಡುವ ವಿರೋಧ ಪಕ್ಷಗಳು ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಹೊಂದಿದ್ದರೆ, ಹಾಲು ಉತ್ಪಾದಕರ ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಬೆಂಬಲ ನೀಡಬೇಕು. ಸರ್ಕಾರದ ಪ್ರತಿಯೊಂದು ನಿರ್ಧಾರವನ್ನೂ ವಿರೋಧಿಸುವುದೇ ರಾಜಕೀಯ ಕರ್ತವ್ಯವಲ್ಲ. ರೈತರಿಗೆ ಇನ್ನಷ್ಟು ಸೌಲಭ್ಯ, ಪ್ರೋತ್ಸಾಹಧನ ಹಾಗೂ ಮೂಲಸೌಕರ್ಯ ಕಲ್ಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಿ. ರೈತರ ಬದುಕು ಸುಧಾರಿಸುವ ನಿರ್ಧಾರಗಳಿಗೆ ಪಕ್ಷಭೇದ ಮರೆತು ಕೈಜೋಡಿಸಲಿ ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕಿನ ಮೇಲೆ ಹೊರೆ ಹೆಚ್ಚಿಸಿದ ಬಿಜೆಪಿ, ಇದೀಗ ರೈತರಿಗೆ ಒಂದಿಷ್ಟು ಅನುಕೂಲವಾಗುವ ದರ ಹೆಚ್ಚಳವನ್ನೂ ಸಹಿಸದಿರುವುದು ದುರಂತ. ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ಬದಲು ಅವರ ಶ್ರಮಕ್ಕೆ ಗೌರವ ನೀಡಬೇಕು. ರೈತರ ಪರವಾಗಿ ಕೇವಲ ಭಾಷಣ ಮಾಡುವುದಕ್ಕಿಂತ ಅವರ ಆದಾಯ ಹೆಚ್ಚಿಸುವ ನಿರ್ಧಾರಗಳಿಗೆ ಬೆಂಬಲ ನೀಡುವುದೇ ನಿಜವಾದ ರೈತಪರ ಕಾಳಜಿ ಎಂದು ಸೀಸಂದ್ರ ಗೋಪಾಲಗೌಡ ವಿರೋಧ ಪಕ್ಷಗಳ ನಾಯಕರಿಗೆ ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಸಂಚಾರ ನಿಯಮಗಳ ಉಲ್ಲಂಘನೆ: ಪೊಲೀಸರಿಂದ 1229 ಪ್ರಕರಣಗಳು ದಾಖಲು

ವಾಹನಗಳ ಸಂಚಾರದ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿರುವ ಪೊಲೀಸರು...

ಕಲಬುರಗಿ | ಸಾಲಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಭಾರ ಮತ್ತು ಕೃಷಿ ಸಂಕಷ್ಟದಿಂದ ಕಂಗೆಟ್ಟ ಕನಕಪುರ ಗ್ರಾಮದ ರೈತ...

ಉಡುಪಿ | ಬಟ್ಟೆ ಒಣಗಿಸುವ ಕಬ್ಬಿಣದ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತ: ವ್ಯಕ್ತಿ ಸಾವು

ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ...

ಉಡುಪಿ | ಪೆಟ್ರೋಲ್ ಪಂಪ್ ವ್ಯವಸ್ಥಾಪಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ; ಡೀಸೆಲ್ ತುಂಬಿಸಿ ಹಣ ಪಾವತಿಸದೆ ಪರಾರಿ

ಉಡುಪಿ ನಗರದ ಗುಂಡಿಬೈಲಿನ ಪೆಟ್ರೋಲ್ ಪಂಪ್‌ನಲ್ಲಿ ಮದ್ಯಪಾನ ಮಾಡದಂತೆ ಆಕ್ಷೇಪಿಸಿದ ವಿಚಾರಕ್ಕೆ...