ಕೋಲಾರ | ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆ ಪ್ರತಾಪ್ ಸಿಂಹಗೆ ಇದೆಯೇ? ಮೈಲಾಂಡಹಳ್ಳಿ ಮುರಳಿ ತಿರುಗೇಟು

Date:

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಇಲ್ಲ. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ವಿದ್ಯಾರ್ಥಿಗಳು ಅನುಭವಿಸಿರುವ ಅನ್ಯಾಯ, ಸಾವು-ನೋವುಗಳಿಗೆ ಮೊದಲು ನ್ಯಾಯ ದೊರಕಿಸಲಿ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವುದಷ್ಟೇ ಸಾಲದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರತೆ ಒದಗಿಸಬೇಕು ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ತಿರುಗೇಟು ನೀಡಿದರು.

- Advertisement -

ನಗರದ ಶಾಸಕರ ಕಛೇರಿ ಮುಂದೆ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2014ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದಿಂದ ಕೆಳಗಿಳಿದ ಸಂದರ್ಭದಲ್ಲಿ ಪ್ರತಿಯೊಬ್ಬ ನಾಗರಿಕನ ಮೇಲಿದ್ದ ಕೇಂದ್ರ ಸರ್ಕಾರದ ಸಾಲ ಸುಮಾರು ₹45 ಸಾವಿರವಿತ್ತು. ನಂತರ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಆಡಳಿತದ ಬಂದ ನಂತರದ 12 ವರ್ಷಗಳಲ್ಲಿ ಅದು ₹1.25 ಲಕ್ಷದ ಆಸುಪಾಸಿಗೆ ಏರಿಕೆಯಾಗಿದೆ. ಪ್ರತಿಯೊಬ್ಬರ ಮೇಲೂ ಬಿಜೆಪಿ ಅಡಳಿತದಿಂದ ಸುಮಾರು ₹80 ಸಾವಿರ ಸಾಲದ ಹೊರೆ ಹೆಚ್ಚಿಸಿರುವುದೇ ಬಿಜೆಪಿಯ ದೊಡ್ಡ ಸಾಧನೆಯೇ? ಇದರ ಬಗ್ಗೆ ಪ್ರಶ್ನಿಸುವ ಧೈರ್ಯ ಪ್ರತಾಪ್ ಸಿಂಹಗೆ ಇದೆಯೇ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

2014ರ ಲೋಕಸಭಾ ಚುನಾವಣೆ ಮೊದಲು ಕಪ್ಪುಹಣ ವಾಪಸ್ ತರುವುದಾಗಿ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದ ಬಿಜೆಪಿ, 12 ವರ್ಷಗಳಲ್ಲಿ ಎಷ್ಟು ಉದ್ಯೋಗ ಸೃಷ್ಟಿಸಿದೆ ಮತ್ತು ಎಷ್ಟು ಕಪ್ಪುಹಣ ವಾಪಸ್ ತಂದಿದೆ ಎಂಬುದನ್ನು ಬಹಿರಂಗಪಡಿಸಲಿ. ನೋಟು ಅಮಾನ್ಯೀಕರಣದಿಂದ ದೇಶಕ್ಕೆ ಆಗಿರುವ ಲಾಭವೇನು ಎಂಬುದಕ್ಕೂ ಉತ್ತರಿಸಲಿ ಎಂದು ಒತ್ತಾಯ ಮಾಡಿದರು.

ಬಿಜೆಪಿ ಪಕ್ಷವು 2014 ಮತ್ತು 2019ರಲ್ಲಿ ಸ್ವಂತ ಬಲದಿಂದ ಬಹುಮತ ಪಡೆದಿದ್ದ ಬಿಜೆಪಿ 2024ರಲ್ಲಿ ಮೈತ್ರಿಕೂಟದ ನೆರವಿನಿಂದ ಅಧಿಕಾರಕ್ಕೆ ಬಂದಿದೆ. ಹಿಂದುತ್ವ, ಪುಲ್ವಾಮಾ ಮತ್ತು ರಾಮಮಂದಿರ ವಿಚಾರಗಳಿಗಿಂತ ಸತತ ಮೂರು ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಹೊರತು ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬಂದಿಲ್ಲ ನಾಲ್ಕನೇ ಬಾರಿಗೆ ಅಧಿಕಾರಕ್ಕಾಗಿ ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈ ಬಿಟ್ಟು ಅಧಿಕಾರಕ್ಕೆ ಹೋಗಲು ಮುಂದಾಗಿದ್ದಾರೆ ಎಂದು‌ ಆರೋಪಿಸಿದರು

ವಿಶ್ವನಾಯಕ ಎಂದು ಹೇಳಿಕೊಳ್ಳುವ ನರೇಂದ್ರ ಮೋದಿ ಸರ್ಕಾರ ಕೊರೊನಾ ಹಾಗೂ ಯುದ್ಧಗಳ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಯಾವ ರೀತಿ ಸ್ಪಂದಿಸಿದೆ ಎಂಬುದನ್ನು ಜನಕ್ಕೆ ಗೊತ್ತಿದೆ. ಮೊದಲು ಯುವಜನರ ಸಮಸ್ಯೆಗಳಿಗೆ ಅವರ ಪ್ರಶ್ನೆಗಳಿಗೆ ಉತ್ತರಿಸಲಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದ ನಂತರ ಪ್ರತಾಪ್ ಸಿಂಹ ಸಂವಾದ ನಡೆಸುವುದು ಸೂಕ್ತ ಎಂದು ಮೈಲಾಂಡಹಳ್ಳಿ ಮುರಳಿ ತಿರುಗೇಟು ನೀಡಿದರು.

ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಗಾಜಲದಿನ್ನೆ ರಮೇಶ್, ವಿಜಯನಗರ ಮಂಜುನಾಥ್, ಧನಮಟ್ನಹಳ್ಳಿ ಲೋಕೇಶ್, ನದೀಂ, ವೀರೇಂದ್ರ ಪಾಟೀಲ್, ನುಕ್ಕನಹಳ್ಳಿ ಶ್ರೀನಿವಾಸ್, ರಾಜಕಲ್ಲಹಳ್ಳಿ ಶ್ರೀನಿವಾಸ್, ಜಾಲಿ ಬಾನು, ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ...

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...