ಕೋಲಾರ | ಪಶು ವೈದ್ಯರ ಖಾಲಿ ಹುದ್ದೆ ಭರ್ತಿಗೆ ರೈತಸಂಘ ಆಗ್ರಹ

Date:

ಪಶು ಇಲಾಖೆಯಲ್ಲಿ ಖಾಲಿ ಇರುವ ಪಶು ವೈದ್ಯರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. 2024–25ನೇ ಸಾಲಿನ ಜಾನುವಾರುಗಳ ಜನಗಣತಿ ವರದಿ ಬಿಡುಗಡೆ ಮಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಪಶು ವೈದ್ಯಕೀಯ ಸೇವೆ ಒದಗಿಸಲು ವಿಶೇಷ ತಂಡ ರಚಿಸಬೇಕು ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಒತ್ತಾಯಿಸಿದರು.

- Advertisement -

ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಅತಿವೃಷ್ಟಿ, ಅನಾವೃಷ್ಟಿ, ಬರ, ಬೆಳೆ ನಷ್ಟ ಹಾಗೂ ವಿವಿಧ ರೋಗಗಳಿಂದ ಸಂಕಷ್ಟದಲ್ಲಿರುವ ಗ್ರಾಮೀಣ ರೈತ ಕುಟುಂಬಗಳಿಗೆ ಹೈನುಗಾರಿಕೆ ಸ್ವಾಭಿಮಾನದ ಬದುಕಿಗೆ ಆಸರೆಯಾಗಿದೆ. ಆದರೆ, ಪಶು ಇಲಾಖೆಯಲ್ಲಿ ವೈದ್ಯರ ಕೊರತೆಯಿಂದ ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ಗಡಿಭಾಗದ ರೈತರು ಆಂಧ್ರಪ್ರದೇಶ ಹಾಗೂ ತಮಿಳುನಾಡಿನಿಂದ ವೈದ್ಯರನ್ನು ಸಾವಿರಾರು ರೂಪಾಯಿ ನೀಡಿ ಕರೆಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ಪಶು ಇಲಾಖೆಗೆ ಸರ್ಕಾರದಿಂದ ಬಿಡುಗಡೆಯಾಗುವ ಔಷಧಿ, ಕೋಳಿಮರಿ, ಮ್ಯಾಟ್ ಸೇರಿದಂತೆ ವಿವಿಧ ಸೌಲಭ್ಯಗಳು ಅರ್ಹ ರೈತರಿಗೆ ತಲುಪದೆ, ಕೆಲವು ಕಡೆ ಗೋದಾಮುಗಳಲ್ಲೇ ಅವಧಿ ಮುಗಿಯುತ್ತಿವೆ. ರೈತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸೌಲಭ್ಯಗಳ ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಯುವ ರೈತ ಮುಖಂಡ ಯಾರಂಘಟ್ಟ ಗಿರೀಶ ಮಾತನಾಡಿ, ಜಿಲ್ಲೆಯಲ್ಲಿ ಸಮಗ್ರ ಜಾನುವಾರುಗಳ ಜನಗಣತಿ ನಡೆಸಿ, ಅದರ ಆಧಾರದ ಮೇಲೆ ಪಶು ಆಸ್ಪತ್ರೆ ಹಾಗೂ ವೈದ್ಯರ ನೇಮಕ ಮಾಡಬೇಕು. 2019ರ ಜನಗಣತಿ ಆಧಾರದಲ್ಲೇ ಇಲಾಖೆ ಕಾರ್ಯನಿರ್ವಹಿಸುತ್ತಿರುವುದು ಗ್ರಾಮೀಣ ಹೈನುಗಾರಿಕೆಗೆ ಮಾರಕವಾಗಿದೆ ಎಂದು ಆರೋಪಿಸಿದರು.

ಗೋಮಾಳ ಜಮೀನು ಮಂಜೂರು ಮಾಡುವ ಮುನ್ನ ಪ್ರತಿ ಗ್ರಾಮದ ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಗೋಮಾಳ ಮೀಸಲಿಡಬೇಕು. ಕೆಲ ಗಡಿಭಾಗದ ಗ್ರಾಮಗಳಲ್ಲಿ ಸಾವಿರಾರು ಕುರಿ, ನೂರಾರು ಹಸುಗಳಿದ್ದರೂ ಕಡಿಮೆ ಸಂಖ್ಯೆಯ ಜಾನುವಾರುಗಳನ್ನು ದಾಖಲಿಸಿ ಕುರಿಗಾಯಿಗಳಿಗೆ ವಂಚಿಸಲಾಗುತ್ತಿದೆ ಎಂದು ದೂರಿದರು.

48 ಗಂಟೆಯೊಳಗೆ ಖಾಲಿ ಹುದ್ದೆ ಭರ್ತಿ, ಜಾನುವಾರುಗಳ ಜನಗಣತಿ ಬಿಡುಗಡೆ, ಪ್ರತಿ ಗ್ರಾಮದಲ್ಲಿ ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಗೋಮಾಳ ಮೀಸಲು ಹಾಗೂ ಸಮರ್ಪಕ ಗ್ರಾಮೀಣ ಪಶು ವೈದ್ಯಕೀಯ ಸೇವೆ ಕಲ್ಪಿಸಬೇಕು. ಇಲ್ಲವಾದರೆ ಜಾನುವಾರುಗಳ ಸಮೇತ ಉಸ್ತುವಾರಿ ಸಚಿವರು ಹಾಗೂ ಪಶು ಇಲಾಖೆಯ ಕಚೇರಿ ಎದುರು ಸಗಣಿ ಚಳುವಳಿ ನಡೆಸಲಾಗುವುದು ಎಂದು ನಾರಾಯಣಗೌಡ ಎಚ್ಚರಿಸಿದರು.

ಇದನ್ನು ಓದಿದ್ದೀರಾ..?ಶ್ರೀನಿವಾಸಪುರ| ತನ್ವೀರ್ ಸೇಠ್‌ಗೆ ಸಂಪುಟ ದರ್ಜೆ ಜವಾಬ್ದಾರಿ ನೀಡಬೇಕು : ಶಬ್ಬೀರ್ ಅಹ್ಮದ್

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ. ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಗಸಂದ್ರ ತಿಮ್ಮಣ್ಣ, ಗಿರೀಶ, ಸುಪ್ರೀಂ ಚಲ, ಚಂದ್ರಪ್ಪ, ಹನುಮಯ್ಯ, ಕೇಶವ, ಶೈಲಜ, ರತ್ನಮ್ಮ, ಗೌರಮ್ಮ, ಚೌಡಮ್ಮ, ಸುಶೀಲಮ್ಮ, ಪವಿತ್ರ, ವೆಂಕಟಮ್ಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...