ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

Date:

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತಂಡ ರಚಿಸಿ, ಕಡಿಮೆ ಮೌಲ್ಯ ನಿಗದಿಪಡಿಸಿರುವ ಅರಣ್ಯಾಧಿಕಾರಿಗಳು ಹಾಗೂ ಅವರಿಗೆ ಸಹಕರಿಸಿರುವ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಗ್ರಹಿಸಿದರು.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಎಸ್‌ಎಚ್‌-96ರ ದೇವನಹಳ್ಳಿ–ವೇಮಗಲ್–ಕೋಲಾರ ಮಾರ್ಗದ ಸರಪಳಿ ಕಿ.ಮೀ. 29.140ರಿಂದ 49.284ರವರೆಗೆ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಅಡ್ಡಿಯಾಗಿರುವ ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಮೌಲ್ಯ ನಿಗದಿ ಮಾಡಲಾಗಿದೆ. ಒಟ್ಟು 2,349 ಹಳೆಯ ಮರಗಳಿಗೆ ಅರಣ್ಯಾಧಿಕಾರಿಗಳು ಅತ್ಯಂತ ಕಡಿಮೆ ಮೌಲ್ಯ ನಿಗದಿಪಡಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಈ ಬಗ್ಗೆ ತನಿಖೆ ಅಗತ್ಯವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

30–40 ವರ್ಷಗಳಷ್ಟು ಹಳೆಯ ಮರಗಳ ಮೌಲ್ಯವನ್ನು ನಿಗದಿಪಡಿಸುವಾಗ ವೈಜ್ಞಾನಿಕವಾಗಿ ಹಾಗೂ ಪಾರದರ್ಶಕವಾಗಿ ಅಂದಾಜು ಮಾಡಬೇಕಿತ್ತು. ಆದರೆ, ಕೋಟಿ ರೂಪಾಯಿ ಮೌಲ್ಯ ಹೊಂದಬಹುದಾದ ಮರಗಳಿಗೆ ಲಕ್ಷಗಳ ಲೆಕ್ಕದಲ್ಲಿ ಮೌಲ್ಯ ನಿಗದಿಪಡಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಮರಗಳ ಹರಾಜು ಪ್ರಕ್ರಿಯೆಯಲ್ಲಿ ಟೆಂಡರ್ ನಿಯಮಗಳನ್ನು ಸಮರ್ಪಕವಾಗಿ ಪಾಲಿಸಲಾಗಿದೆಯೇ, ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆಯೇ ಹಾಗೂ ಪಾರದರ್ಶಕವಾಗಿ ಹರಾಜು ನಡೆಸಲಾಗಿದೆಯೇ ಎಂಬುದನ್ನು ತನಿಖೆ ಮಾಡಬೇಕು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಡುವಿನ ವ್ಯವಹಾರಗಳ ಬಗ್ಗೆಯೂ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಮರಗಳ ಹರಾಜು ಮತ್ತು ಕಟಾವು ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡಿಲ್ಲ ಎಂಬ ಆರೋಪಗಳಿವೆ. 2,349 ಮರಗಳಿಗೆ ಸುಮಾರು ₹49 ಲಕ್ಷ ಮೌಲ್ಯ ನಿಗದಿಪಡಿಸಿರುವ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಅಕ್ರಮ ನಡೆದಿರುವುದು ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಡಾ. ನಾಗರಾಜ್

ಮರಗಳ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದ್ದರೆ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿಯೂ ಗುಣಮಟ್ಟ ಹಾಗೂ ಪಾರದರ್ಶಕತೆಯ ಬಗ್ಗೆ ಪರಿಶೀಲನೆ ನಡೆಸಬೇಕಾಗುತ್ತದೆ. ಶಾಸಕರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಕ್ರಮ ಕೈಗೊಳ್ಳಬೇಕು. ಒಂದು ಮರ ಕಡಿದರೆ ಕನಿಷ್ಠ ಹತ್ತು ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...