ಕೋಲಾರ | ನೂತನ ತಹಶಿಲ್ದಾರ್ ಶ್ರೀನಿವಾಸಗೆ ರೈತ ಸಂಘದಿಂದ ಗಿಡ ಕೊಟ್ಟು ಸ್ವಾಗತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ

Date:

ತಹಶಿಲ್ದಾರ್ ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ, ಪಿ ನಂಬರ್ ದುರಸ್ಥಿ ಹಾಗೂ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಿ ಮುಂಗಾರು ಮಳೆಯಿಂದ ರೈತರ ಬೆಳೆ ರಕ್ಷಣೆ ಮಾಡಬೇಕೆಂದು ರೈತ ಸಂಘದಿಂದ ನೂತನ ತಹಸೀಲ್ದಾರ್ ಶ್ರೀನಿವಾಸ್ ರವರಿಗೆ ಗಿಡ ನೀಡಿ ಸ್ವಾಗತಿಸಿ ಮನವಿ ನೀಡಿ ಒತ್ತಾಯಿಸಲಾಯಿತು.

- Advertisement -

ಹಿರಿಯ ಅಧಿಕಾರಿಗಳ ವಾಸ ಸ್ಥಾನಕ್ಕೆ ಕೂಗಳತೆ ದೂರದಲ್ಲಿರುವ ತಾಲೂಕು ಕಚೇರಿಯಲ್ಲಿ ಹೆಜ್ಜೆಹೆಜ್ಜೆಗೂ ರೈತರನ್ನು ಶೋಷಣೆ ಮಾಡುವ ದಲ್ಲಾಳಿಗಳ ಹಾವಳಿಗೆ ಕಡಿವಾಣವಿಲ್ಲದಂತಾಗಿದೆ. ಭೂಪರಿವರ್ತನೆಗೆ 3 ಲಕ್ಷ, ಪಿ ನಂಬರ್ ದುರಸ್ಥಿ ಮಾಡಲು 4 ಲಕ್ಷ ನಿಗಧಿ ಮಾಡಲು ಅಧಿಕಾರಿಗಳು ದಲ್ಲಾಳಿಗಳನ್ನು ನೇಮಕ ಮಾಡಿಕೊಂಡಿದ್ದಾರೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಗ್ರಾಮೀಣ ಪ್ರದೇಶಗಳಿಂದ ತಾಲ್ಲೂಕು ಕಛೇರಿಗೆ ಬರುವ ರೈತರಿಗೆ ಶೌಚಾಲಯ ವ್ಯವಸ್ಥೆ ಇಲ್ಲವಾಗಿದೆ ಪ್ರತಿವರ್ಷ ಮುಂಗಾರು ಮಳೆ ಪ್ರಾರಂಭವಾದಾಗ ಮಳೆ ನೀರು ಸರಾಗವಾಗಿ ಹರಿಯಲು ರಾಜಕಾಲುವೆ, ಚರಂಡಿಗಳ ಅಭಿವೃದ್ದಿಯಿಲ್ಲದೆ ಒತ್ತುವರಿ ಆಗಿರುವುದರಿಂದ ಮಳೆ ನೀರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ರೈತರ ಕೃಷಿ ಜಮೀನಿಗೆ ನುಗ್ಗಿ ಬೆಳೆ ನಾಶವಾದರೆ ಮತ್ತೊಂದು ಕಡೆ ಬಡವರ ಮನೆಗೆ ನೀರು ನುಗ್ಗಿ ಬಡವರ ಬದುಕನ್ನೇ ಬೀದಿಗೆ ತಳ್ಳುತ್ತಿದ್ದರೂ ಸಮಸ್ಯೆಯನ್ನು ಕಂದಾಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೇ ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಒತ್ತುವರಿದಾರರ ಪರ ನಿಂತು ಬಡವರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆಂದು ಆಕ್ರೋಶ ವ್ಯಕತಪಡಿಸಿದರು.

ನೇರವಾಗಿ ರೈತರ ಕೆಲಸಗಳನ್ನು ಮಾಡಿಕೊಡಲು ಅಧಿಕಾರಿಗಳಿಗೆ ಇಚ್ಛಾಶಕ್ತಿ ಕೊರತೆ ಜೊತೆಗೆ ಕನಿಷ್ಠ ಪಕ್ಷ ಅವರ ಸಮಸ್ಯೆಗಳನ್ನು ತಿಂಗಳಾನುಗಟ್ಟಲೇ ಅಲೆದಾಡಿದರೂ ಸಮಸ್ಯೆಗೆ ಮುಕ್ತಿ ಸಿಗುವುದಿಲ್ಲ. ಬ್ಯಾಗಿನಲ್ಲಿ ಕಡತ, ಕೈಯಲ್ಲಿ ಕಾಸು ಇದ್ದರೆ 24 ಗಂಟೆಯಲ್ಲಿ ಕೆಲಸವಾಗುವ ಮಟ್ಟಕ್ಕೆ ಇಲಾಖೆ ಹದಗೆಟ್ಟಿದೆ ಎಂದು ಆರೋಪ ಮಾಡಿದರು.

ಕಚೇರಿಗೆ ಬರುವ ಗ್ರಾಮೀಣ ಪ್ರದೇಶದ ರೈತ ಕೂಲಿ ಕಾರ್ಮಿಕರಿಗೆ ಕನಿಷ್ಟ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯಿಲ್ಲ. ಇರುವ ಶೌಚಾಲಯಗಳು ಸ್ವಚ್ಛತೆಯಿಲ್ಲದೆ ಗಬ್ಬು ನಾರುತ್ತಿವೆ. ದೂರದ ಊರುಗಳಿಂದ ಬರುವ ಬಡವರು ಕುಳಿತುಕೊಳ್ಳಲು ಕುರ್ಚಿಗಳಿಲ್ಲ. ಸಮಸ್ಯೆಯನ್ನು ಕೇಳಲು ಹಿರಿಯ ಅಧಿಕಾರಿಗಳು ಕೈಗೆ ಸಿಗುವುದಿಲ್ಲ. ಇದ್ದರೂ ರಿಯಲ್ ಎಸ್ಟೇಟ್ ಉದ್ಯಮಿಗಳು ಗಂಟೆಗಟ್ಟಲೇ ಕಚೇರಿಯಲ್ಲಿ ಕುಳಿತು ಕಷ್ಟಸುಖಗಳನ್ನು ಮಾತನಾಡಿಕೊಳ್ಳುವ ಮಟ್ಟಕ್ಕೆ ಇಲಾಖೆ ಹದಗೆಟ್ಟಿದೆ ಎಂದು ದೂರಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ದಾಖಲೆಗಳ ಸಮೇತ ಒತ್ತುವರಿಯಾಗಿರುವ ಸರ್ಕಾರಿ ಆಸ್ತಿಗಳ ಬಗ್ಗೆ ಮಾಹಿತಿ ನೀಡಿದರೂ ಭೂಗಳ್ಳರ ಜೊತೆ ಕಂದಾಯ, ಸರ್ವೇ ಅಧಿಕಾರಿಗಳು ಶಾಮೀಲಾಗಿ ನೆಪ ಮಾತ್ರಕ್ಕೆ ಒತ್ತುವರಿ ತೆರವುಗೊಳಿಸಿದ ಫೋಟೋಗಳನ್ನು ಕಳುಹಿಸಿ ಕೈತೊಳೆದುಕೊಳ್ಳುತ್ತಿದ್ದಾರೆಂದು ಅಧಿಕಾರಿಗಳ ವಿರುದ್ದ ದೂರು ನೀಡಿದರು.

ವಯಸ್ಸಾದವರು, ದುರ್ಬಲರು ಕಚೇರಿಗೆ ಬಂದರೆ ಮೊದಲೇ 20 ಮೆಟ್ಟಿಲು ಹತ್ತಿ ಬಂದು ದಿನಗಟ್ಟಲೇ ಕಾರಿಡಾರ್‌ಗಳಲ್ಲಿ ನಿಲ್ಲುವ ಸಾಮರ್ಥ್ಯ ಇರುವವರಿಗೆ ಮಾತ್ರ ಪ್ರವೇಶ ಎಂಬಂತಾಗಿದೆ. ವಿಶೇಷಚೇತನರು ದುರ್ಬಲರಿಗೆ ಯಾವುದೇ ಸೌಲಭ್ಯವಿಲ್ಲದೆ ವೀಲ್ ಚೇರ್ ಇಲ್ಲದೆ ಪರದಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪ ಮಾಡಿದರು.

ಜನಸಾಮಾನ್ಯರ ಕೆಲಸ ಎಂದರೆ ಅಧಿಕಾರಿಗಳಿಗೆ ಕಾಲ ಕಸದಂತೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗಾಗಿಯೇ ಆಡಳಿತ ನಡೆಸಬೇಕು. ಆದರೆ, ಅಧಿಕಾರಿಗಳ ದರ್ಪ ಯಾವ ರೀತಿ ಇದೆ ಎಂದರೆ ಭೂಗಳ್ಳರಿಗೆ, ಶ್ರೀಮಂತರಿಗೆ, ರಾಜಕಾರಣಿಗಳಿಗೆ ಒಂದು ನ್ಯಾಯ. ಬಡ, ರೈತ, ಕೂಲಿಕಾರ್ಮಿಕರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ. ತಾಜ್ ಮಹಲ್ ನಂತೆ ಕಾಣುವ ತಾಲೂಕು ಕಚೇರಿ ಬಡವರ ಪಾಲಿಗೆ ಮುಳ್ಳಿನ ಹಾದಿಯಾಗಿ ಶ್ರೀಮಂತರು, ದಲ್ಲಾಳಿಗಳಿಗೆ ಚಿನ್ನದ ಮೊಟ್ಟೆ ಇಡುವ ಇಲಾಖೆಯಾಗಿ ಮಾರ್ಪಟ್ಟಿದೆ ಎಂದು ಕಿಡಿಕಾರಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಶ್ರೀನಿವಾಸ್ ರವರು ಸರ್ವೇಯರ್‌ಗಳ ಸಮಸ್ಯೆ ಇರುವುದರಿಂದ ಒತ್ತುವರಿ ಆಗಿರುವ ಬಂಡಿದಾರಿ, ಸ್ಮಶಾನ ಮತ್ತಿತರ ಸರ್ಕಾರಿ ಆಸ್ತಿಗಳ ಒತ್ತುವರಿ ತೆರೆವುಗೊಳಿಸಲು ವಿಳಂಬವಾಗುತ್ತಿದೆ ಜೊತೆಗೆ ಪಿ ನಂಬರ್ ದುರಸ್ಥಿ ಹಾಗೂ ಭೂ ಪರಿವರ್ತನೆಗೆ ಲಕ್ಷಲಕ್ಷ ಲಂಚ ಪಡೆಯುವ ಬಗ್ಗೆ ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳುವ ಮತ್ತು ಕಚೇರಿಗೆ ಮೂಲಭೂತ ಸೌಕರ್ಯಗಳ ಬಗ್ಗೆ ಗಮನಹರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಇದನ್ನು ಓದಿದ್ದೀರಾ..? ಕೋಲಾರ ಜಿಲ್ಲಾ ಎನ್ ಎಸ್ ಯು ಐ ಅಧ್ಯಕ್ಷರಾಗಿ ನಿಹಾಲ್ ತರೀನ್ ಆಯ್ಕೆ

ಈ ಸಂದರ್ಭದಲ್ಲಿ ವಕ್ಕಲೇರಿ ಹನುಮಯ್ಯ, ಮಂಗಸಂದ್ರ ತಿಮಣ್ಣ ತೆನ್ನಹಳ್ಳಿ, ಆಂಜಿನಪ್ಪ, ವಾನರಾಶಿ ವೀರಭದ್ರಪ್ಪ, ಪುತ್ತೇರಿ ರಾಜು, ನಾಗರಾಜ್, ಗೀರೀಶ್, ರಾಜೇಶ ಪಾರುಕ್‌ಪಾಷ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...