ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ ಭಾವ ಜಾನಪದ ಝೇಂಕಾರ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲೆಯ ಸುಗಟೂರಿನ ಅಂತರರಾಷ್ಟ್ರೀಯ ಜಾನಪದ ಗಾಯಕ ಗೋ.ನಾ. ಸ್ವಾಮಿ ಭಾಗವಹಿಸಿ, ಜನಪದ ಗೀತೆಗಳ ಮೂಲಕ ಕನ್ನಡದ ಕಂಪು ಹರಡಿದರು.
ಶಾಂಘೈನ ಯೋಗ ಮಂದಿರದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಯನ, ನೃತ್ಯ ಹಾಗೂ ಹಾಸ್ಯ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸೆಳೆದವು. ಶಾಂಘೈ ಕನ್ನಡಿಗರ ಸಂಘದ ಅಧ್ಯಕ್ಷೆ ಕಮಲ ಅವರ ನೇತೃತ್ವದಲ್ಲಿ ನಡೆದ ಈ ಜಾನಪದ ಸಂಭ್ರಮದಲ್ಲಿ ಸುಮಾರು 200 ಕನ್ನಡಿಗರು ಪಾಲ್ಗೊಂಡಿದ್ದರು.
ಇದನ್ನು ಓದಿದ್ದೀರಾ..?ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ
ಕಾರ್ಯಕ್ರಮದಲ್ಲಿ ಗೋ.ನಾ. ಸ್ವಾಮಿ ಅವರು ಕನ್ನಡದ ಜಾನಪದ ಗೀತೆಗಳನ್ನು ಹಾಡಿ, ನೆರೆದಿದ್ದ ಕನ್ನಡಿಗರಿಗೆ ಜನಪದ ಸಂಗೀತದ ರಸದೌತಣ ಉಣಬಡಿಸಿದರು. ವಿದೇಶಿ ನೆಲದಲ್ಲಿ ಕನ್ನಡದ ಜನಪದ ಕಲೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ಮೂಲಕ ಕನ್ನಡಿಗರಲ್ಲಿ ಭಾಷೆ ಮತ್ತು ನೆಲದ ಮೇಲಿನ ಅಭಿಮಾನವನ್ನು ಹೆಚ್ಚಿಸುವ ಪ್ರಯತ್ನ ನಡೆಯಿತು.




