ಕೋಲಾರ | ಕೆರೆ, ಹಾಗೂ ಪೋಷಕ ಕಾಲುವೆಗಳ ಸಂರಕ್ಷಣೆಗೆ ಒತ್ತು; ₹2 ಸಾವಿರ ಕೋಟಿ ಯೋಜನೆ ರೂಪಿಸಲು ಚಿಂತನೆ

Date:

ಕೆರೆಗಳು, ರಾಜಕಾಲುವೆ ಹಾಗೂ ಪೋಷಕ ಕಾಲುವೆಗಳನ್ನು ಒತ್ತುವರಿಯಿಂದ ರಕ್ಷಿಸಿ ಜಲಮೂಲಗಳನ್ನು ಉಳಿಸದಿದ್ದರೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಲಿದೆ. ಈಗಲೇ ಎಚ್ಚೆತ್ತುಕೊಂಡು ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊತ್ತೂರು ಮಂಜುನಾಥ್ ಹೇಳಿದರು.

- Advertisement -

ಜಿಲ್ಲಾಡಳಿತ ಹಾಗೂ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೋಲಾರ ನಗರದ ಕುಡಿಯುವ ನೀರು ಪೂರೈಸುವ ಅಮ್ಮೇರಹಳ್ಳಿ ಕೆರೆಗೆ ಮುಖ್ಯ ಪೀಡರ್ ರಾಜಕಾಲುವೆಗಳ ದುರಸ್ತಿ ಸಂರಕ್ಷಣೆ ಹಾಗೂ ತಂತಿಬೇಲಿ ನಿರ್ಮಾಣ ಕಾಮಗಾರಿಗೆ ತಾಲೂಕಿನ ಮಡೇರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಕೆರೆಗಳು ತಂದೆ-ಮಗಯಿದ್ದಂತೆ, ಕಾಲುವೆಗಳು ತಾಯಿಯಿದ್ದಂತೆ. ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ಸರ್ಕಾರಿ ಜಾಗಗಳನ್ನು ಸಂರಕ್ಷಿಸಬೇಕು. ಕೆರೆ, ರಾಜಕಾಲುವೆಗಳನ್ನು ಉಳಿಸದಿದ್ದರೆ ಮುಂದಿನ ಪೀಳಿಗೆಗೆ ಅವುಗಳನ್ನು ಚಿತ್ರಗಳಲ್ಲಿ ತೋರಿಸುವ ಪರಿಸ್ಥಿತಿ ಬರಬಹುದು. ನೀರಿಗಾಗಿ ಸಂಘರ್ಷ ಎದುರಾಗುವ ದಿನಗಳು ದೂರವಿಲ್ಲ. ಪೋಷಕ ಕಾಲುವೆಗಳ ದುರಸ್ತಿ ಹಾಗೂ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಕೋಲಾರ ನಗರಕ್ಕೆ ನೀರು ಪೂರೈಸುವ ಅಮ್ಮೇರಹಳ್ಳಿ ಕೆರೆಯನ್ನೂ ಸಮರ್ಪಕವಾಗಿ ಅಭಿವೃದ್ಧಿಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಮಳೆ ಪ್ರಮಾಣ ಕಡಿಮೆಯಾದಂತೆ ಪೋಷಕ ಕಾಲುವೆಗಳು ಒತ್ತುವರಿಯಾಗಿದ್ದು, ಅವುಗಳ ನಿರ್ವಹಣೆ ಕಡೆಗಣಿಸಲಾಗಿದೆ. ಕೆಸಿ ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆ ಜಾರಿಯಾದ ಬಳಿಕವೂ ಜಲಮೂಲಗಳ ಸಂರಕ್ಷಣೆ ಅಗತ್ಯವಿದೆ. ಜಿಲ್ಲೆಯ ಎಲ್ಲ ಕೆರೆಗಳ ಅಭಿವೃದ್ಧಿ ಹಾಗೂ ರಾಜಕಾಲುವೆಗಳ ದುರಸ್ತಿಗೆ ₹2 ಸಾವಿರ ಕೋಟಿ ಅನುದಾನದ ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಬೇಕಿದೆ. ಇದಕ್ಕೆ ಜಿಲ್ಲಾಧಿಕಾರಿಗಳು ಮುಂದಾಗಬೇಕು. ಜಿಲ್ಲೆಯ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ಸಹಕಾರ ನೀಡಲಿದ್ದಾರೆ ಎಂದರು.

ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಮಾತನಾಡಿ, ಕೆರೆಗಳ ಒತ್ತುವರಿ ತೆರವು ಹಾಗೂ ಜಲಮೂಲಗಳ ಸಂರಕ್ಷಣೆಗೆ ರೈತರ ಸಹಕಾರ ಅಗತ್ಯ. ರಾಜಕಾಲುವೆ ನಿರ್ಮಾಣ, ಚೆಕ್‌ಡ್ಯಾಂಗಳ ಮೂಲಕ ನೀರು ಸಂಗ್ರಹಕ್ಕೆ ಕ್ರಮವಹಿಸಲಾಗುವುದು. ರೈತರಿಗೆ ಅನ್ಯಾಯವಾಗದಂತೆ ಜಲಸಂರಕ್ಷಣಾ ಕಾರ್ಯ ಕೈಗೊಳ್ಳಲಾಗುವುದು ಎಂದರು.


ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಪೋಲೀಸ್ ವರಿಷ್ಠಾಧಿಕಾರಿ ಕನ್ನಿಕ ಸುಕ್ರಿವಾಲ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಎಂ.ಎಸ್ ಮಂಗಳ, ಎಸಿ ನಯನ, ತಹಶಿಲ್ದಾರ್ ನಾಗವೇಣಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಸೇರಿದಂತೆ ಅಧಿಕಾರಿಗಳು ಕಾಂಗ್ರೆಸ್ ಮುಖಂಡರು ಇದ್ದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಸುಧಾರಣೆ ಹಾಗೂ ನೂತನ ಜಿಲ್ಲಾ ಆಸ್ಪತ್ರೆ ಮಂಜೂರಾತಿಗೆ ಶಾಸಕರ ಆಗ್ರಹ​

"ಜಿಲ್ಲೆಯ ಬಡ ರೋಗಿಗಳ ಆಶಾಕಿರಣವಾಗಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಮತ್ತು...

‘ನುಡಿಯು ಸಿರಿಯಲ್ಲ ಬದುಕು’: ಕಡಲನಗರಿಯಲ್ಲಿ ನಾಳೆಯಿಂದ ಎರಡು ದಿನ ‘ಜನ ನುಡಿ – 2026’

‘ನುಡಿಯು ಸಿರಿಯಲ್ಲ ಬದುಕು’ ಎಂಬ ಆಶಯದೊಂದಿಗೆ ‘ಜನ ನುಡಿ – 2026’...

ಪರೀಕ್ಷಾ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರನ್ನು ಜನಗಣತಿಗೆ ಬಿಡುವುದಿಲ್ಲ: ಸಚಿವ ಮಧು ಬಂಗಾರಪ್ಪ

ಪರೀಕ್ಷಾ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಜನಗಣತಿ ಇತ್ಯಾದಿ ಬಾಹ್ಯ...

ಶಿವಮೊಗ್ಗ |ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮ ಅಗತ್ಯ: ಉಪವಿಭಾಗಾಧಿಕಾರಿ ಡಾ. ಮೈತ್ರಿ ಕರೆ

ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರ ಕಲುಷಿತತೆಯನ್ನು ತಡೆಗಟ್ಟಲು ಆಹಾರ...