ಕೋಲಾರ | ಅರಣ್ಯ ಇಲಾಖೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ; ವಿಷ ಸೇವಿಸಿದ ಇಬ್ಬರು ಮಹಿಳೆಯರು

Date:

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಇಲಾಖೆ ಕೈಗೊಂಡಿರುವ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಬೆಳೆನಾಶ ವಿರೋಧಿಸಿ ಭಾನುವಾರ ಕೀಟನಾಶಕ ಕುಡಿದಿದ್ದ ಇಬ್ಬರು ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶ್ರೀನಿವಾಸಪುರದ ಶ್ಯಾಮಲಾ ಗೋಪಾಲರೆಡ್ಡಿ ಹಾಗೂ ಲಕ್ಷ್ಮಿದೇವಮ್ಮ ವೆಂಕಟರೆಡ್ಡಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಅರಣ್ಯ ಇಲಾಖೆ ಶ್ಯಾಮಲಾ ರೆಡ್ಡಿ ಅವರ 25 ಎಕರೆ ಜಮೀನನ್ನು ತೆರವುಗೊಳಿಸಿದ್ದು, ಜಮೀನಿನಲ್ಲಿ ಬೆಳೆದಿದ್ದ ಮಾವಿನ ಗಿಡ, ಕ್ಯಾಪ್ಸಿಕಂ, ಕ್ಯಾರೆಟ್‌ ಹಾಗೂ ಟೊಮೆಟೊ ಬೆಳೆಯನ್ನು ಜೆಸಿಬಿ ನುಗ್ಗಿಸಿ ನಾಶ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶನಿವಾರ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಜೆಸಿಬಿ ಯಂತ್ರಗಳ ಮೇಲೆ ಕಲ್ಲು ತೂರಿ ಗಾಜು ಒಡೆದು ಹಾಕಿದ ಪ್ರಕರಣ ಸಂಬಂಧ ರೈತರು ಹಾಗೂ ಬಿಜೆಪಿ ಮುಖಂಡರು ಸೇರಿದಂತೆ ಸುಮಾರು 20 ಮಂದಿ ವಿರುದ್ಧ ಶ್ರೀನಿವಾಸಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಕೆ ಎನ್‌ ವೇಣುಗೋಪಾಲ್‌ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದು, ದಾಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸಂಸದ ಎಸ್‌ ಮುನಿಸ್ವಾಮಿ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂಬುದು ತಿಳಿದುಬಂದಿದೆ.

ತಾಲೂಕಿನ ನಾರಮಾಕನಹಳ್ಳಿ ಗ್ರಾಮದ ಹೊರವಲಯದಲ್ಲಿ ಅರಣ್ಯ ಇಲಾಖೆಯ ಜೆಸಿಬಿ ಯಂತ್ರಗಳ ಮೇಲೆ ರೊಚ್ಚಿಗೆದ್ದ ರೈತರು ದಾಳಿ ನಡೆಸಿದ್ದರು. ಸ್ಥಳಕ್ಕೆ ತೆರಳಿದ್ದ ಮುನಿಸ್ವಾಮಿ, “ರೈತರ ಭೂಮಿಯನ್ನು ವಶಕ್ಕೆ ಪಡೆಯಲು ಅರಣ್ಯ ಇಲಾಖೆ ಮುಂದಾದರೆ, ಬೆಳೆ ನಾಶಪಡಿಸಲು ಪ್ರಯತ್ನಿಸಿದರೆ ಜೆಸಿಬಿಗಳನ್ನು ಬಿಡಬೇಡಿ” ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ

ಸುಮಾರು 3 ಸಾವಿರ ಎಕರೆಯಷ್ಟು ಅರಣ್ಯ ಪ್ರದೇಶ ಒತ್ತುವರಿ ಆಗಿರುವ ಬಗ್ಗೆ ದೂರುಗಳಿದ್ದು, ಅರಣ್ಯ ಇಲಾಖೆಯು 15 ದಿನಗಳಿಂದ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದೆ. ಈಗಾಗಲೇ ಸುಮಾರು ಸಾವಿರ ಎಕರೆ ತೆರವುಗೊಳಿಸಿದೆ.

ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಮುನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಶ್ರೀನಿವಾಸಪುರ ಠಾಣೆ ಬಳಿ ಬಿಗಿ ಭದ್ರತೆ ಕೈಗೊಂಡಿದ್ದು, ಸುಮಾರು 200 ಮಂದಿ ಪೊಲೀಸರನ್ನು ನಿಯೋಜಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕಾಂಗ್ರೆಸ್‌ ಮುಖಂಡರು-ಕಾರ್ಯಕರ್ತರ ನಡುವೆ ಗಲಾಟೆ

ಕಾಂಗ್ರೆಸ್‌ನ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ...

ಕೆಸಿ ವ್ಯಾಲಿ-ಎಚ್‌ಎನ್ ವ್ಯಾಲಿ ನೀರಿನ 3ನೇ ಹಂತದ ಸಂಸ್ಕರಣೆಗೆ ಆಗ್ರಹ; ಮಧ್ಯಸ್ಥಿಕೆಗೆ ರಾಜ್ಯಪಾಲರಿಗೆ ಮನವಿ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲವು ಕೆರೆಗಳಿಗೆ...

ಲೋಕಸಭಾ ಚುನಾವಣೆ | ಕೋಲಾರದಲ್ಲಿ ಕಾಂಗ್ರೆಸ್‌ ಒಳಬೇಗುದಿ ಮೈತ್ರಿಗೆ ಲಾಭವಾಗುತ್ತಾ?

ಸಚಿವ ಕೆ.ಎಚ್ ಮುನಿಯಪ್ಪ ಈ ಬಾರಿಯ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌...

ಕೋಲಾರ | ರಾಷ್ಟ್ರೀಯ ವಿಪತ್ತು ಘೋಷಣೆಗೆ ಪ್ರಾಂತ ರೈತ ಸಂಘ ಒತ್ತಾಯ

ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೂಡಲೇ ಅನುದಾನ...