ಕೋಲಾರ | ಸಾಗುವಳಿ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದ ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ: ಕ್ರಮಕ್ಕೆ ಆಗ್ರಹ

Date:

ಸರ್ಕಾರದಿಂದ ಜಮೀನು ಮಂಜೂರಾಗಿ ಸುಮಾರು 40 ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ 19 ದಲಿತ ಕುಟುಂಬಗಳ ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ನಡೆಸಿದ್ದಾರೆ. ಜಮೀನಿನಲ್ಲಿ ಬೆಳೆ ಬೆಳೆಯುತ್ತಿದ್ದ ರೈತರ ಮೇಲೆ ಹಲ್ಲೆ ನಡೆಸಿ, ನಾಲ್ವರನ್ನು ಬಲವಂತವಾಗಿ ಕರೆದೊಯ್ದಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭೂ ಸಂತ್ರಸ್ತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಆರ್. ಶ್ರೀನಿವಾಸನ್ ಒತ್ತಾಯಿಸಿದರು.

- Advertisement -

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೆಂಕಟಸ್ವಾಮಿ‌ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು ಶ್ರೀನಿವಾಸಪುರ ತಾಲ್ಲೂಕಿನ ನೆಲವಂಕಿ ಹೋಬಳಿಯ ಮಲ್ಲಂಪಲ್ಲಿ ಗ್ರಾಮದ ಸರ್ವೆ ನಂ.35ರಲ್ಲಿ ಉತ್ತರಪಲ್ಲಿ ಗ್ರಾಮದ 19 ದಲಿತ ಕುಟುಂಬಗಳಿಗೆ ಸರ್ಕಾರ ಜಮೀನು ಮಂಜೂರು ಮಾಡಿದ್ದು, ಸಾಗುವಳಿ ಚೀಟಿಯನ್ನೂ ನೀಡಿದೆ. ಸುಮಾರು ನಾಲ್ಕು ದಶಕಗಳಿಂದ ರೈತರು ಈ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದಾರೆ. ಆದರೆ ಅ.27ರಂದು ಅರಣ್ಯ ಮತ್ತು ಪೊಲೀಸ್ ಇಲಾಖೆಯ ಸುಮಾರು 500 ಸಿಬ್ಬಂದಿ ಜೆಸಿಬಿ, ಟ್ರ್ಯಾಕ್ಟರ್‌ಗಳೊಂದಿಗೆ ಜಮೀನಿಗೆ ನುಗ್ಗಿ ಬೆಳೆ ನಾಶಪಡಿಸಿ ಗಿಡ ನೆಡಲು ಮುಂದಾಗಿದ್ದರು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಿಂದ ಅಂದು ಹಿಂದಿರುಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಆದರೆ ಅ.28ರಂದು ಬೆಳಿಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡದೆ ಮತ್ತೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು, ಜಮೀನಿನಲ್ಲಿ ಕಾವಲಿದ್ದ ನಾಲ್ವರು ರೈತರ ಮೇಲೆ ಹಲ್ಲೆ ನಡೆಸಿ ಕರೆದೊಯ್ದಿದ್ದಾರೆ. ಡಿಎಫ್‌ಒ ಸರೀನಾ ಸಿಕ್ಕಲಿಗರ್ ಅವರ ಆದೇಶದಂತೆ ಎಸಿಎಫ್ ಶಿವಯೋಗಿಸ್ವಾಮಿ, ವಾಸುದೇವ, ಮೂರ್ತಿ, ಅನಿಲ್ ಕುಮಾರ್ ಮತ್ತು ನವೀನ್ ಕುಮಾರ್ ನೇತೃತ್ವದ ತಂಡ ದೌರ್ಜನ್ಯ ಎಸಗಿದೆ ಎಂದು ಆರೋಪಿಸಿದರು.

ರೈತರನ್ನು ಅರಣ್ಯ ಇಲಾಖೆಯ ವಾಹನದಲ್ಲಿಯೇ ದಿನವಿಡೀ ಹಲ್ಲೆ ನಡೆಸಿ, 71 ವರ್ಷದ ವೆಂಕಟಸ್ವಾಮಿ ಪ್ರಜ್ಞೆ ತಪ್ಪಿದಾಗ ಮಾರ್ಗಮಧ್ಯೆ ಬಿಟ್ಟುಹೋಗಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ನಾಲ್ವರಲ್ಲಿ ಒಬ್ಬರು ನಾಪತ್ತೆಯಾಗಿರುವುದನ್ನು ನ್ಯಾಯಾಧೀಶರು ಪ್ರಶ್ನಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ರೈತರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಗಂಭೀರವಾಗಿ ಗಾಯಗೊಂಡ ವೆಂಕಟಸ್ವಾಮಿ ಅವರನ್ನು ಕೋಲಾರದ ಎಸ್‌ಎನ್‌ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದಲಿತ ರೈತರ ಸಾಗುವಳಿ ಹಕ್ಕನ್ನು ರಕ್ಷಿಸುವುದರ ಜತೆಗೆ, ಮಾನವ ಹಕ್ಕುಗಳನ್ನು ಉಲ್ಲಂಘಿಸಿ ದೌರ್ಜನ್ಯ ನಡೆಸಿದ ಅರಣ್ಯಾಧಿಕಾರಿಗಳನ್ನು ಅಮಾನತುಗೊಳಿಸಿ, ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ವಿಜಯಕೃಷ್ಣ, ಭೀಮರಾಜ್ ಹಾಗೂ ಸಂತ್ರಸ್ತ ರೈತರ ಕುಟುಂಬಸ್ಥರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ...

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...