ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

Date:

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ ಆರ್.ಎಲ್. ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ(ಆರ್.ಎಲ್.ಜಾಲಪ್ಪ ೧೦೧ನೇ ಜನ್ಮದಿನಾಚರಣೆ) ಕಾರ್ಯಕ್ರಮದಲ್ಲಿ ಮಾತನಾಡಿ, ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗದವರಿಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡುವ ನಿರ್ಧಾರ ಕೈಗೊಂಡಾಗ, ಜಾಲಪ್ಪ ವೈದ್ಯಕೀಯ ಕಾಲೇಜು ಆರಂಭಿಸಿದರು. ೧೯೮೬ರಿಂದ ಸಂಸ್ಥೆ ಇಂದಿನ ಎತ್ತರಕ್ಕೆ ಬೆಳೆಯಲು ಜಾಲಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ. ಅವರು ಹಠವಾದಿಯಾಗಿದ್ದು, ಸಮಾಜದಲ್ಲಿನ ಅಸಮಾನತೆಗಳನ್ನು ಹೋಗಲಾಡಿಸಲು ನಿರಂತರ ಪ್ರಯತ್ನಿಸಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದರು.

ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು. ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಿದ್ದ ಜಾಲಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಪ್ರೇರಣೆಯಾಗಿದ್ದರು. ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಮಾನತೆ ಸಾಧಿಸುವ ನಿಟ್ಟಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್, ದೇವರಾಜ ಅರಸು, ಆರ್.ಎಲ್. ಜಾಲಪ್ಪ ಮತ್ತು ನಾನು ಶ್ರಮಿಸಿದ್ದೇವೆ.

ದೇವರಾಜ ಅರಸು ಅವರ ರಾಜಕೀಯ ಪ್ರೇರಣೆಯಿಂದ ಜಾಲಪ್ಪ ರಾಜಕೀಯ ಪ್ರವೇಶಿಸಿದ್ದರು. ದೇವೇಗೌಡರ ಬಳಿ ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಜಾಲಪ್ಪ ಪಟ್ಟು ಹಿಡಿದಿದ್ದರು. ಉಪಮುಖ್ಯಮಂತ್ರಿಯಾಗಲು ಹಾಗೂ ಕಾಂಗ್ರೆಸ್ ಸೇರುವ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆಯುವ ಮೂಲಕವೂ ಪ್ರಮುಖ ಪಾತ್ರ ವಹಿಸಿದ್ದರು. ತಾವು ಮುಖ್ಯಮಂತ್ರಿಯಾದಾಗ ಜಾಲಪ್ಪ ಸಂತಸಪಟ್ಟಿದ್ದರು. ತಮ್ಮ ರಾಜಕೀಯ ಜೀವನದ ಬೆಳವಣಿಗೆಯಲ್ಲಿ ಅವರ ಪಾತ್ರವನ್ನು ಮರೆಯಲು ಸಾಧ್ಯವಿಲ್ಲ ಎಂದು ಜಲಪ್ಪ ಗುಣಗಾನ ಮಾಡಿದರು.

- Advertisement -

ಕೋಲಾರದಲ್ಲಿ ಜಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಅಹಿಂದ ಸಮಾವೇಶವನ್ನೂ ನೆನಪಿಸಿಕೊಂಡ ಅವರು, ಸಮಾಜದಲ್ಲಿ ಎಲ್ಲರೂ ಆರ್ಥಿಕ, ಸಾಮಾಜಿಕ, ಮತ್ತು ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕು. ಎಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು ಎಂಬುದು ತಮ್ಮ ಆಶಯವಾಗಿದೆ. ಬಸವಣ್ಣನವರು ೮೫೦ ವರ್ಷಗಳ ಹಿಂದೆಯೇ `ಇವ ನಮ್ಮವ, ಇವ ನಮ್ಮವ’ ಎಂಬ ಸಮಾನತೆಯ ಸಂದೇಶ ಸಾರಿದ್ದರೂ, ಇಂದಿಗೂ ಸಮಾಜದಲ್ಲಿ ಎಲ್ಲರನ್ನೂ ನಮ್ಮವರು ಎಂದು ಒಪ್ಪಿಕೊಳ್ಳುವ ಪರಿಸ್ಥಿತಿ ಪೂರ್ಣವಾಗಿ ನಿರ್ಮಾಣವಾಗಿಲ್ಲ. ಬುದ್ಧ, ಬಸವಣ್ಣನವರ ವಿಚಾರಧಾರೆಗಳು ಸಮಾಜದಲ್ಲಿ ಸಮಾನತೆಯ ಮಹತ್ವವನ್ನು ಸಾರುತ್ತವೆ. ಅಸಮಾನತೆ ನಿವಾರಿಸುವ ಉದ್ದೇಶದಿಂದಲೇ ನನ್ನ ನೇತೃತ್ವದ ಸರ್ಕಾರ ವಿವಿಧ ಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿತು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಆರ್. ಪಾಟೀಲ್ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಆಶಯಕ್ಕೆ ಒತ್ತು ನೀಡಲಾಗಿದೆ. ಪ್ರತಿಜಿಲ್ಲೆಯಲ್ಲಿ ಟ್ರಾಮಾ ಕೇಂದ್ರ, ಕ್ಯಾನ್ಸರ್ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆಯಿಂದ ವೈದ್ಯಕೀಯ ಸೇವೆಗಳು ವಿಸ್ತರಣೆಯಾಗಿವೆ. ಭಾರತೀಯ ವೈದ್ಯರಿಗೆ ದೇಶ-ವಿದೇಶಗಳಲ್ಲಿ ಗೌರವವಿದ್ದು, ಅದನ್ನು ಉಳಿಸಿಕೊಂಡು ಹೋಗಬೇಕು ಎಂದರು.

Advertisements

ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ೧೯೮೦ರ ದಶಕದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಉಗಮದಿಂದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಗಳಾದವು. ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಬೆಳವಣಿಗೆಯಿಂದ ವೈದ್ಯಕೀಯ ಶಿಕ್ಷಣದಲ್ಲಿ ರಾಜ್ಯವು ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎಚ್. ನಾಗರಾಜ್ ಮಾತನಾಡಿ, ಅಹಿಂದ ಚಳವಳಿ ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ನೀಡಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ಸಂಸ್ಥೆಯಲ್ಲಿ ೩,೨೦೦ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ದೇಶದಲ್ಲಿ ವೈದ್ಯಕೀಯ ಸೇವೆ ಒದಗಿಸುವ ಸಂಸ್ಥೆಗಳ ಪೈಕಿ ಒಂಬತ್ತನೇ ಸ್ಥಾನದಲ್ಲಿದೆ. ಸಂಸ್ಥೆಯ ಬೆಳವಣಿಗೆಗೆ ಇನ್ನಷ್ಟು ಪ್ರೋತ್ಸಾಹ ಅಗತ್ಯವಿದೆ. ತೆರಿಗೆ ಪಾವತಿಸುತ್ತಿದ್ದರೂ ನಗರಸಭೆಯಿಂದ ನೀರು ಮತ್ತು ಬೀದಿ ದೀಪದಂತಹ ಮೂಲಸೌಕರ್ಯಗಳು ಸಹ ದೊರೆಯುತ್ತಿಲ್ಲ ಎಂದರು.


ಇದನ್ನು ಓದಿದ್ದೀರಾ..?ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ಕಾರ್ಯಕ್ರಮದಲ್ಲಿ ಶಾಸಕ ಕೊತ್ತೂರು ಮಂಜುನಾಥ್, ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ವಿಧಾನಪರಿಷತ್ ಮಾಜಿ ಸದಸ್ಯ ನಸೀರ್ ಅಹ್ಮದ್, ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಮಾಜಿ ಕುಲಪತಿ ರಾಜೇಶ್ ಜಗದಾಳೆ, ಉಪಕುಲಪತಿ ಬಿ. ವೆಂಗಮ್ಮ, ರಿಜಿಸ್ಟ್ರಾರ್ ಮುನಿನಾರಾಯಣ, ಉಪಾಧೀಕ್ಷಕ ಕೆ.ದಿನೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸರ್ಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸಿ: ಶಾಸಕ ಬೇಳೂರು

ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ...

ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ ನಾಳೆ ಬಾಗಲಕೋಟೆಗೆ ಆಗಮನ

70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಸಂವಿಧಾನ ಆಧಾರಿತ ಪ್ರಬುದ್ಧ ಭಾರತ...

ಶಿಕಾರಿಪುರ | ಕವಿ, ಬರಹಗಾರರಿಂದ ಮನಸ್ಸು ಒಂದಾಗಿಸುವ ಕೆಲಸವಾಗಲಿ: ಡಾ. ಸರ್ಫ್ರಾಜ್ ಚಂದ್ರಗುತ್ತಿ

ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ...

ರಾಯಚೂರು | ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ದಾಳಿ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ಜಿಲ್ಲೆಯಾದ್ಯಂತ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿದ್ದರೆನ್ನಲಾದ ನಕಲಿ...