ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಖಜಾಂಚಿಯನ್ನಾಗಿ ಚಿಕ್ಕಬಳ್ಳಾಪುರದ ಜಿ.ಹೆಚ್. ನಾಗರಾಜ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಜಿ.ಎಚ್.ನಾಗರಾಜ್ ಅವರನ್ನು ಕೆಪಿಸಿಸಿ ನೂತನ ಖಜಾಂಚಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಜಿ.ಹೆಚ್.ನಾಗರಾಜ್ ಅವರು ಕೋಲಾರದ ದೇವರಾಜ್ ಅರಸು ಮೆಡಿಕಲ್ ಕಾಲೇಜಿನ ಚೇರ್ಮನ್ ಆಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಅವರು ಅಖಿಲ ಕರ್ನಾಟಕ ಕಾಂಗ್ರೆಸ್ ಪಕ್ಷದ ಏಳ್ಗೆಗೆ ಅವಿರತ ಶ್ರಮವಹಿಸಿ ಕಾರ್ಯ ನಿರ್ವಹಿಸಿ ಕರ್ನಾಟಕ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದರು.
ಇದನ್ನು ಓದಿದ್ದೀರಾ..?ಕೆಜಿಎಫ್ | ವೈಜ್ಞಾನಿಕ ಸಾಧನೆಯ ಹಾದಿಯಲ್ಲೇ ಕನ್ನಡ ಸಾಹಿತ್ಯ ಮೈದುಂಬಿಕೊಂಡವರು ಡಾ. ವೆಂಕಟಸ್ವಾಮಿ: ಎನ್.ಸಿ. ಮುನಿಯಪ್ಪ
ಕರ್ನಾಟಕ ಪ್ರದೇಶ ನೂತನ ಖಜಾಂಚಿ ಯನ್ನಾಗಿ ನೇಮಕ ಮಾಡಿದ ಹಿನ್ನಲೆಯಲ್ಲಿ ಜಿ.ಹೆಚ್.ನಾಗರಾಜ್ ಅವರು ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಪದಾಧಿಕಾರಿಗಳಿಗೆ ಜಿ.ಎಚ್. ನಾಗರಾಜ್ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೋಲಾರ | ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಖಜಾಂಚಿಯಾಗಿ ಜಿ ಎಚ್ ನಾಗರಾಜ್ ನೇಮಕ
<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ:



