ಕೋಲಾರ | ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ

Date:

ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು.

- Advertisement -

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್...

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ ಅದು ಕೋಟ್ಯಂತರ ಜನರ ಬದುಕು. ಆ ಬದುಕಿನ ಮೇಲೆ ಯಾವುದೇ ಹೆಚ್ಚುವರಿ ಹೊರೆ ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ನಿಜವಾದ ಜವಾಬ್ದಾರಿ. ಒಂದು...

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು;...

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಟಿ. ನರಸೀಪುರದ ಗಣೇಶೋತ್ಸವದಿಂದ ಹಿಡಿದು ಮೈಸೂರಿನ ಹಲವು ಧಾರ್ಮಿಕ–ಸಾಂಸ್ಕೃತಿಕ ವಿವಾದಗಳವರೆಗೆ ಮತ್ತೆ ಮುಂಚೂಣಿಯಲ್ಲಿ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಎಸ್‌. ಎನ್. ಸುಬ್ಬಾರೆಡ್ಡಿ ಗೆ ತಪ್ಪಿದ ಸಚಿವ ಸ್ಥಾನ:ಬಾಗೇಪಲ್ಲಿ ಯಲ್ಲಿ ಟೈರ್ ಸುಟ್ಟು ಬೆಂಬಲಿಗರ ಪ್ರತಿಭಟನೆ!

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು.

Advertisements

ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆರಿಗೆ ವಂಚನೆ ಪ್ರಕರಣ ಮುಚ್ಚಿಹಾಕಲು ಲಂಚ: ಜಿಎಸ್‌ಟಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಕೋರಮಂಗಲದಲ್ಲಿ ಕೇಂದ್ರ ಜಿಎಸ್‌ಟಿ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು...

ಉರ್ದು ಸೇರಿ ಭಾಷಾ ಶಿಕ್ಷಕರ ನೇಮಕಾತಿ: ಸರ್ಕಾರ ಮಾತಿಗೆ ತಪ್ಪಿದರೆ ತೀವ್ರ ಹೋರಾಟದ ಎಚ್ಚರಿಕೆ

ಉರ್ದು ಸೇರಿದಂತೆ ಭಾಷಾ ಶಿಕ್ಷಕರ ನೇಮಕಾತಿಯಲ್ಲಿ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ...

ವಿಜಯಪುರ | ವೃತ್ತಿ ಕೌಶಲ್ಯಕ್ಕೆ ಗೌರವ ಸಲ್ಲಿಸುವ ದಿನವೇ ವಿಶ್ವಕರ್ಮ ಜಯಂತಿ: ಡಾ. ಔದ್ರಾಮ್

ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ...

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...